ಸಾಯಿ ಪಲ್ಲವಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಮಣಿರತ್ನಂ

ಖ್ಯಾತ ನಿರ್ದೇಶಕ ಮಣಿರತ್ನಂ ತಮ್ಮ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಮತ್ತು ಸಾಯಿ ಪಲ್ಲವಿ ಮುಖ್ಯ ಭೂಮಿಕೆಯಲ್ಲಿದ್ದಾರೆ. ಸಾಯಿ ಪಲ್ಲವಿ ಅವರಿಗೆ ಈ ಮೊದಲು ನೀಡಿದ್ದ ಮಾತನ್ನು ಮಣಿರತ್ನಂ ಉಳಿಸಿಕೊಂಡಿದ್ದಾರೆ. 'ಮದ್ರಾಸ್ ಟಾಕೀಸ್' ನಿರ್ಮಿಸುತ್ತಿರುವ ಈ 23ನೇ ಚಿತ್ರದ ಶೂಟಿಂಗ್ ಶೀಘ್ರದಲ್ಲೇ ಆರಂಭವಾಗಲಿದ್ದು, ಈ ಕಾಂಬಿನೇಷನ್ ಮೇಲೆ ಭಾರಿ ನಿರೀಕ್ಷೆ ಮೂಡಿಸಿದೆ.

ಸಾಯಿ ಪಲ್ಲವಿಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಮಣಿರತ್ನಂ
ಮಣಿರತ್ನಂ- ಸಾಯಿ ಪಲ್ಲವಿ

Updated on: Mar 20, 2026 | 3:05 PM

ತಮಿಳಿನ ಖ್ಯಾತ ನಟ ವಿಜಯ್ ಸೇತುಪತಿ ಅವರು ಈಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಲೈಕಾ ಪ್ರೊಡಕ್ಷನ್ ಈ ಚಿತ್ರವನ್ನು ಅನೌನ್ಸ್ ಮಾಡಿದೆ. ಈ ಸಿನಿಮಾ ಬಹಳ ಕುತೂಹಲ ಮೂಡಿಸಿದೆ. ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ಮಣಿರತ್ನಂ ಅವರು. ಈ ಸಿನಿಮಾಗೆ ಸಾಯಿ ಪಲ್ಲವಿ ನಾಯಕಿ. ಈ ಚಿತ್ರ ಇನ್ನು ಕೆಲವೇ ವಾರಗಳಲ್ಲಿ ಶೂಟಿಂಗ್ ಆರಂಭಿಸಲಿದೆ.

ಮಣಿರತ್ನಂ ಅವರು ‘ಥಗ್ ಲೈಫ್’ ಹೆಸರಿನ ಸಿನಿಮಾ ಮಾಡಿದರು. ಕಮಲ್ ಹಾಸನ್ ಜೊತೆ ಮಾಡಿದ ಈ ಚಿತ್ರ ಅಟ್ಟರ್ ಫ್ಲಾಪ್ ಆಯಿತು. ಕರ್ನಾಟಕದಲ್ಲಿ ಈ ಚಿತ್ರ ಬಿಡುಗಡೆಯನ್ನೇ ಕಂಡಿಲ್ಲ. ಅದಕ್ಕೂ ಮೊದಲು ಬಂದ ‘ಪೊನ್ನಿಯೆನ್ ಸೆಲ್ವನ್’ ಹಾಗೂ ‘ಪೊನ್ನಿಯೆನ್ ಸೆಲ್ವನ್ 2’ ಸಿನಿಮಾಗಳು ತಮಿಳುನಾಡಿನಲ್ಲಿ ಮೆಚ್ಚುಗೆ ಪಡೆಯಿತು. ಈಗ ಅವರು ಗೆಲ್ಲುವ ಕನಸಿನೊಂದಿಗೆ ಹೊಸ ಚಿತ್ರ ಘೋಷಣೆ ಮಾಡಿರೋದು ವಿಶೇಷ.

ಮಣಿರತ್ನಂ ಅವರು ಹಲವು ಅದ್ಭುತ ಚಿತ್ರಗಳನ್ನು ಪ್ರೇಕ್ಷಕರ ಎದುರು ಇಟ್ಟಿದ್ದಾರೆ. ಅವರು ಇತ್ತೀಚೆಗೆ ಕೊಂಚ ಚಾರ್ಮ್ ಕಳೆದುಕೊಂಡಿದ್ದಾರೆ. ಆದರೆ, ಈ ಹೊಸ ಸಿನಿಮಾ ಮೂಲಕ ಅವರಿಗೆ ಗೆಲುವು ಸಿಗುವ ನಿರೀಕ್ಷೆ ಇದೆ.
‘ಮದ್ರಾಸ್ ಟಾಕೀಸ್’ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಇದು ಸಂಸ್ಥೆಯ 23ನೇ ಸಿನಿಮಾ. ಸಾಯಿ ಪಲ್ಲವಿ ಅವರು ಸದ್ಯ ‘ರಾಮಾಯಣ’ ಸಿನಿಮಾ ಶೂಟ್​​ ಅಲ್ಲಿ ಬ್ಯುಸಿ ಇದ್ದು, ಶೀಘ್ರವೇ ಮರಳಲಿದ್ದಾರೆ. ವಿಜಯ್ ಸೇತುಪತಿ ಅವರು ಈ ಚಿತ್ರಕ್ಕಾಗಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲು ವಿಜಯ್ ಹಾಗೂ ಮಣಿರತ್ನಂ ಅವರು ‘ಚೆಕ್ಕ ಚಿವಂತ ವಾನಮ್’ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.

ಇದನ್ನೂ ಓದಿ: ಸಾಯಿ ಪಲ್ಲವಿ ಕೈತಪ್ಪಿದ ಮಧುಬಾಲಾ ಬಯೋಪಿಕ್ ಅವಕಾಶ: ಕಾರಣ ಏನು?

ಸಾಯಿ ಪಲ್ಲವಿ ಅವರನ್ನು ಮಣಿರತ್ನಂ ಅವರು ಈ ಮೊದಲು ಹೊಗಳಿದ್ದರು. ಸಾಯಿ ಪಲ್ಲವಿ ಜೊತೆ ಸಿನಿಮಾ ಮಾಡುತ್ತೇನೆ ಎಂದು ಮಣಿರತ್ನಂ ಹೇಳಿದ್ದರು. ಈಗ ಅವರು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಓರ್ವ ಅದ್ಭುತ ನಟಿ. ಅವರು ಓರ್ವ ಅದ್ಭುತ ನಿರ್ದೇಶಕನ ಜೊತೆ ಸೇರುತ್ತಿದ್ದಾರೆ ಎಂದಾಗ ಸಹಜವಾಗಿಯೇ ಕುತೂಹಲ ಹೆಚ್ಚುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us