AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಆ ನಟಿಯ ಜೊತೆ ಮಾತ್ರ ರೊಮ್ಯಾನ್ಸ್ ಮಾಡಲ್ಲ’; ನೇರವಾಗಿ ಹೇಳಿದ್ದ ವಿಜಯ್ ಸೇತುಪತಿ

ವಿಜಯ್ ಸೇತುಪತಿ ಅವರು ವಿಲನ್ ಆಗಿ, ಹೀರೋ ಆಗಿ ಗಮನ ಸೆಳೆದಿದ್ದಾರೆ. ಹೊಸ ಹೊಸ ರೀತಿಯ ಪಾತ್ರಗಳನ್ನು ಮಾಡಿ ಅವರು ಗುರುತಿಸಿಕೊಂಡಿದ್ದಾರೆ. ಈಗ ವಿಜಯ್ ಸೇತುಪತಿ ಅವರು ‘ಜವಾನ್’ ಚಿತ್ರದಲ್ಲಿ ಖಡಕ್ ವಿಲನ್ ಪಾತ್ರ ಮಾಡಿ ಗಮನ ಸೆಳೆದಿದ್ದರು. ಅವರು ಈ ಮೊದಲು ನೀಡಿದ ಸಂದರ್ಶನದಲ್ಲಿ ಕೃತಿ ಶೆಟ್ಟಿ ಜೊತೆ ರೊಮ್ಯಾನ್ಸ್ ಮಾಡೋಕೆ ನೋ ಎಂದಿದ್ದರು.

‘ನಾನು ಆ ನಟಿಯ ಜೊತೆ ಮಾತ್ರ ರೊಮ್ಯಾನ್ಸ್ ಮಾಡಲ್ಲ’; ನೇರವಾಗಿ ಹೇಳಿದ್ದ ವಿಜಯ್ ಸೇತುಪತಿ
ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 24, 2023 | 6:26 PM

Share

ವಿಜಯ್ ಸೇತುಪತಿ (Vijay Sethupathi) ಅಭಿಮಾನಿವರ್ಗ ದಿನಕಳೆದಂತೆ ಹೆಚ್ಚುತ್ತಲೇ ಇದೆ. ‘ಜವಾನ್’ ಸಿನಿಮಾದಲ್ಲಿ ಅವರು ವಿಲನ್ ಪಾತ್ರ ಮಾಡುವ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದಿದ್ದಾರೆ. ಅವರಿಗೆ ಬಾಲಿವುಡ್​ನಿಂದಲೂ ಆಫರ್ ಬರುತ್ತಿದೆ. ಅವರು ತಮ್ಮದೇ ಆದ ಒಂದಷ್ಟು ಬೌಂಡರಿ ಹಾಕಿಕೊಂಡಿದ್ದಾರೆ. ಅದನ್ನು ದಾಟಿ ಅವರು ಎಂದಿಗೂ ಹೋಗುವುದಿಲ್ಲ. ಅವರು ಸ್ಟಾರ್ ಹೀರೋಯಿನ್ ಜೊತೆ ರೊಮ್ಯಾನ್ಸ್ ಮಾಡೋಕೆ ನೋ ಎಂದಿದ್ದರು. ಇದಕ್ಕೆ ಕಾರಣ ಏನು ಎಂಬುದನ್ನೂ ಅವರು ವಿವರಿಸಿದ್ದರು.

ವಿಜಯ್ ಸೇತುಪತಿ ಅವರು ವಿಲನ್ ಆಗಿ, ಹೀರೋ ಆಗಿ ಗಮನ ಸೆಳೆದಿದ್ದಾರೆ. ಹೊಸ ಹೊಸ ರೀತಿಯ ಪಾತ್ರಗಳನ್ನು ಮಾಡಿ ಅವರು ಗುರುತಿಸಿಕೊಂಡಿದ್ದಾರೆ. ಈಗ ವಿಜಯ್ ಸೇತುಪತಿ ಅವರು ‘ಜವಾನ್’ ಚಿತ್ರದಲ್ಲಿ ಖಡಕ್ ವಿಲನ್ ಪಾತ್ರ ಮಾಡಿ ಗಮನ ಸೆಳೆದಿದ್ದರು. ಅವರು ಈ ಮೊದಲು ನೀಡಿದ ಸಂದರ್ಶನದಲ್ಲಿ ಕೃತಿ ಶೆಟ್ಟಿ ಜೊತೆ ರೊಮ್ಯಾನ್ಸ್ ಮಾಡೋಕೆ ನೋ ಎಂದಿದ್ದರು. ಇದಕ್ಕೆ ಕಾರಣ ‘ಉಪ್ಪೇನಾ’ ಸಿನಿಮಾ.

ತೆಲುಗಿನ ‘ಉಪ್ಪೇನಾ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಅವರು ತಂದೆ ಪಾತ್ರ ಮಾಡಿದರೆ, ಕೃತಿ ಶೆಟ್ಟಿ ಅವರು ಮಗಳಾಗಿ ಕಾಣಿಸಿಕೊಂಡಿದ್ದರು. ಒಂದು ನಟಿಯನ್ನು ಮಗಳು ಎಂದು ಪರಿಗಣಿಸಿದ ಬಳಿಕ ಅವರ ಜೊತೆ ರೊಮ್ಯಾನ್ಸ್ ಮಾಡೋದು ಹೇಗೆ ಅನ್ನೋದು ವಿಜಯ್ ಸೇತುಪತಿ ಪ್ರಶ್ನೆ. ಹೀಗಾಗಿ, ಕೃತಿ ಜೊತೆ ರೊಮ್ಯಾನ್ಸ್ ಮಾಡಲ್ಲ ಎಂದಿದ್ದರು.

ಅಚ್ಚರಿಯ ವಿಚಾರ ಎಂದರೆ ಒಂದು ಸಿನಿಮಾ ತಂಡದವರು ಬಂದು ಕೃತಿಯನ್ನು ಹೀರೋಯಿನ್ ಆಗಿ ಆಯ್ಕೆ ಮಾಡಿಕೊಳ್ಳುವುದಾಗಿಯೂ ಹೇಳಿದ್ದರು. ಆದರೆ, ಇದಕ್ಕೆ ಅವರು ನೋ ಎಂದಿದ್ದರು. ಅವರ ಈ ನಿರ್ಧಾರದ ಬಗ್ಗೆ ಅನೇಕರು ಮೆಚ್ಚುಗೆ ಸೂಚಿಸಿದ್ದರು.

ಇದನ್ನೂ ಓದಿ: ‘ಜವಾನ್’ ಬಳಿಕ ಯೂಟ್ಯೂಬರ್​ಗೆ ಚಾನ್ಸ್​ ನೀಡಿದ ನಯನತಾರಾ; ಹೊಸ ಸಿನಿಮಾ ಅನೌನ್ಸ್

‘ಜವಾನ್’ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 562 ಕೋಟಿ ರೂಪಾಯಿ ಗಳಿಕೆ ಮಾಡಿದೆ. ತಮಿಳು ನಿರ್ದೇಶಕ ಅಟ್ಲಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾರುಖ್ ಖಾನ್​ಗೆ ಜೊತೆಯಾಗಿ ನಯನತಾರಾ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಶಾರುಖ್ ಖಾನ್ ಅವರು ದ್ವಿಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ವಿಜಯ್ ಸೇತುಪತಿ ವಿಲನ್ ಪಾತ್ರ ಮತ್ತಷ್ಟು ಖಡಕ್ ಆಗಿ ಕಾಣಿಸಿಕೊಳ್ಳಬೇಕು ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್