AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲಿವುಡ್‌ಗೆ ರಿಮೇಕ್ ಆಗಲಿದೆ ನಟ ವಿಜಯ್ ಸೇತುಪತಿ ಅಭಿನಯದ ‘ಮಹಾರಾಜ’ ಸಿನಿಮಾ

ವಿಜಯ್ ಸೇತುಪತಿ ಅಭಿನಯದ ಸೂಪರ್ ಹಿಟ್ ಕ್ರೈಮ್ ಥ್ರಿಲ್ಲರ್ 'ಮಹಾರಾಜ' ಸಿನಿಮಾ ಹಾಲಿವುಡ್‌ಗೆ ರಿಮೇಕ್ ಆಗುತ್ತಿದೆ. ಚೀನಾದಲ್ಲಿ ಭಾರಿ ಸಕ್ಸಸ್ ಕಂಡ ನಂತರ ಹಾಲಿವುಡ್ ಏಜೆನ್ಸಿಯೊಂದು ಚಿತ್ರದ ರಿಮೇಕ್ ಹಕ್ಕುಗಳನ್ನು ಪಡೆದಿದ್ದು, ಪ್ರಸಿದ್ಧ ನಟ ಮ್ಯಾಥ್ಯೂ ಮೆಕ್‌ಕೋನಾಘಿ ನಟಿಸುವ ಸಾಧ್ಯತೆಯಿದೆ ಎಂದು ನಿರ್ಮಾಪಕ ಸುಧನ್ ಸುಂದರಂ ತಿಳಿಸಿದ್ದಾರೆ.

ಹಾಲಿವುಡ್‌ಗೆ ರಿಮೇಕ್ ಆಗಲಿದೆ ನಟ ವಿಜಯ್ ಸೇತುಪತಿ ಅಭಿನಯದ 'ಮಹಾರಾಜ' ಸಿನಿಮಾ
ಮಹಾರಾಜ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Sep 16, 2026 | 1:26 PM

Share

ಮುಖ್ಯಾಂಶಗಳು

  • ಹಾಲಿವುಡ್‌ಗೆ ಕಾಲಿಟ್ಟ ವಿಜಯ್ ಸೇತುಪತಿ 'ಮಹಾರಾಜ'
  • ಜಾಗತಿಕ ಮಟ್ಟದಲ್ಲಿ ತಮಿಳು ಚಿತ್ರದ ಸದ್ದು
  • ಹಾಲಿವುಡ್ ರಿಮೇಕ್ ಹಕ್ಕು ಗಿಟ್ಟಿಸಿಕೊಂಡ ಏಜೆನ್ಸಿ 

ಸೌತ್ ಇಂಡಸ್ಟ್ರಿಯ ಅತ್ಯಂತ ಬೇಡಿಕೆಯ ನಟ ವಿಜಯ್ ಸೇತುಪತಿ ಅಭಿನಯದ ಹಿಟ್ ಚಿತ್ರ ‘ಮಹಾರಾಜ’ ಈಗ ಹಾಲಿವುಡ್‌ಗೆ ರಿಮೇಕ್ ಆಗಲು ಸಜ್ಜಾಗಿದೆ. 2024ರಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ಧೂಳೆಬ್ಬಿಸಿದ್ದ ಈ ಕ್ರೈಮ್ ಥ್ರಿಲ್ಲರ್ ಸಿನಿಮಾ ಇದೀಗ ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ವಿಷಯವನ್ನು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಸುಧನ್ ಸುಂದರಂ ಅವರು ಅಧಿಕೃತವಾಗಿ ಖಚಿತಪಡಿಸಿದ್ದಾರೆ.

ಭಾರತ ಮಾತ್ರವಲ್ಲದೆ ಚೀನಾದಲ್ಲಿ ‘ಮಹಾರಾಜ’ ಸಿನಿಮಾ ಬಿಗ್ ಸಕ್ಸಸ್ ಕಂಡಿತ್ತು. ಚಿತ್ರಮಂದಿರಗಳಲ್ಲಿ 91 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಧೂಳೆಬ್ಬಿಸಿತ್ತು. ಒಟಿಟಿಯಲ್ಲೂ ಭಾರಿ ಪ್ರಶಂಸೆ ಪಡೆದುಕೊಂಡಿತ್ತು. ಈ ಅಭೂತಪೂರ್ವ ಯಶಸ್ಸನ್ನು ಕಂಡು ಪ್ರಸಿದ್ಧ ಹಾಲಿವುಡ್ ಏಜೆನ್ಸಿಯೊಂದು ರಿಮೇಕ್ ಹಕ್ಕುಗಳನ್ನು ಪಡೆದುಕೊಂಡಿದೆ. ಮುಂದಿನ ವರ್ಷ ಈ ಬಿಗ್ ಪ್ರಾಜೆಕ್ಟ್ ಸೆಟ್ಟೇರುವ ಸಾಧ್ಯತೆಯಿದೆ.

ಹಾಲಿವುಡ್‌ನ ಎ-ಲಿಸ್ಟ್ ನಟರೊಬ್ಬರು ಈ ಸಿನಿಮಾದಲ್ಲಿ ನಟಿಸಲಿದ್ದಾರೆ. ಖ್ಯಾತ ನಟ ಮ್ಯಾಥ್ಯೂ ಮೆಕ್‌ಕೋನಾಘಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿ ದಟ್ಟವಾಗಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ನಿರ್ಮಾಪಕ ಸುಧನ್, ‘ಅವರು ಹಲವು ನಟರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಮ್ಯಾಥ್ಯೂ ಕೂಡ ಆ ಪಟ್ಟಿಯಲ್ಲಿ ಇರಬಹುದು. ನಟರು ಮತ್ತು ಸ್ಟುಡಿಯೋ ವಿವರಗಳನ್ನು ಏಜೆನ್ಸಿಯೇ ಅಧಿಕೃತವಾಗಿ ತಿಳಿಸಲಿದೆ’ ಎಂದಿದ್ದಾರೆ.

ನಿಥಿಲನ್ ಸ್ವಾಮಿನಾಥನ್ ನಿರ್ದೇಶನದ ಈ ಚಿತ್ರದಲ್ಲಿ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಖಳನಾಯಕನಾಗಿ ನಟಿಸಿದ್ದರು. ಕಾಣೆಯಾದ ಡಸ್ಟ್‌ಬಿನ್ ಹುಡುಕಿಕೊಡುವಂತೆ ಪೋಲಿಸ್ ಸ್ಟೇಷನ್ ಮೆಟ್ಟಿಲೇರುವ ಕ್ಷೌರಿಕನ ಕಥೆ ಇದಾಗಿತ್ತು. ಟ್ವಿಸ್ಟ್‌ಗಳಿಂದ ಕೂಡಿದ ಈ ಚಿತ್ರದ ಕಥೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿತ್ತು. ವಿಜಯ್ ಸೇತುಪತಿ ಮಗಳಾಗಿ ನಟಿಸಿದ್ದ ಸಂಚನಾ ನಮಿದಾಸ್ ಅವರಿಗೆ ಅತ್ಯುತ್ತಮ ಪೋಷಕ ನಟಿ ರಾಷ್ಟ್ರಪ್ರಶಸ್ತಿ ಕೂಡ ಲಭಿಸಿತ್ತು.

ಇದನ್ನೂ ಓದಿ: ಬಿಗ್ ಬಾಸ್‌ ವೇದಿಕೆಯಲ್ಲಿ ಸಿಎಂ ವಿಜಯ್​ಗೆ ಟಾಂಗ್ ಕೊಟ್ಟ ವಿಜಯ್ ಸೇತುಪತಿ?

ತಮಿಳು ಚಿತ್ರರಂಗದ ಕಥೆಯೊಂದು ಹಾಲಿವುಡ್‌ಗೆ ರಿಮೇಕ್ ಆಗುತ್ತಿರುವುದು ಭಾರತೀಯ ಸಿನಿಮಾ ರಂಗಕ್ಕೆ ಹೆಮ್ಮೆಯ ವಿಷಯವಾಗಿದೆ. ಹಾಲಿವುಡ್ ಆವೃತ್ತಿಯಲ್ಲಿ ಯಾರು ನಟಿಸಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ‘ಮಹಾರಾಜ’ ಚಿತ್ರದ ಈ ಜಾಗತಿಕ ಸಾಧನೆಗೆ ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ