AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ.

‘ಬೀಸ್ಟ್’​ ಅವತಾರದಲ್ಲಿ ದಳಪತಿ ವಿಜಯ್​; ಹೊಸ ಲುಕ್​ ನೋಡಿ ಫ್ಯಾನ್ಸ್​ ಫಿದಾ
ವಿಜಯ್​ ದಳಪತಿ
ರಾಜೇಶ್ ದುಗ್ಗುಮನೆ
|

Updated on: Jun 21, 2021 | 7:26 PM

Share

ದಳಪತಿ ವಿಜಯ್​ ಸಿನಿಮಾಗಳಲ್ಲಿ ಅಭಿಮಾನಿಗಳಿಗೆ ವಿಶೇಷ ಟ್ರೀಟ್​ ಇರುತ್ತದೆ. ಅವರ ನಟನೆಯ ಸಿನಿಮಾಗಳಿಂದ ಯಾವುದೇ ಅಪ್​ಡೇಟ್​ ಸಿಕ್ಕರೂ ಫ್ಯಾನ್ಸ್​ ಸಂಭ್ರಮಿಸುತ್ತಾರೆ. ಅದೇ ರೀತಿ ಈಗ ವಿಜಯ್​ ನಟನೆಯ 65ನೇ ಚಿತ್ರಕ್ಕೆ ಟೈಟಕ್​ ಫಿಕ್ಸ್​ ಆಗಿದೆ. ಅಷ್ಟೇ ಅಲ್ಲ, ಸಿನಿಮಾದಲ್ಲಿ ಅವರ ಲುಕ್​ ನೋಡಿ ಫ್ಯಾನ್ಸ್​ ಸಖತ್​ ಖುಷಿಯಾಗಿದ್ದಾರೆ.

ವಿಜಯ್​ 65ನೇ ಚಿತ್ರಕ್ಕೆ ‘ಬೀಸ್ಟ್’ ಎಂದು ಹೆಸರಿಡಲಾಗಿದೆ. ಹೆಸರಿಗೆ ತಕ್ಕಂತೆ ಫಸ್ಟ್​ ಲುಕ್​ ಕೂಡ ಇದೆ. ವಿಜಯ್ ಜೀನ್ಸ್​ ಹಾಕಿದ್ದಾರೆ. ಕೈನಲ್ಲಿ ಅವರು ಹಿಡಿದಿರೋ ಗನ್​ ಸಾಕಷ್ಟು ಗಮನ ಸೆಳೆಯುತ್ತಿದೆ. ವಿಜಯ್​ ಚಿತ್ರಗಳಲ್ಲಿ ಆ್ಯಕ್ಷನ್​ಗಳಿಗೆ ಯಾವುದೇ ಕೊರತೆ ಇರುವುದಿಲ್ಲ. ಈ ಪೋಸ್ಟರ್​ ನೋಡಿದ ನಂತರದಲ್ಲಿ ಈ ಸಿನಿಮಾದಲ್ಲಿ ಆ್ಯಕ್ಷನ್​ ದೃಶ್ಯಗಳು ಕೊಂಚ ಜಾಸ್ತಿಯೇ ಇರಲಿದೆ ಎನ್ನಲಾಗುತ್ತಿದೆ.

ನಾಳೆ (ಜೂನ್​ 22) ವಿಜಯ್​ ಜನ್ಮದಿನ. ಈ ಹಿನ್ನೆಲೆಯಲ್ಲಿ ಸಿನಿಮಾದ ಫಸ್ಟ್ ಲುಕ್​ ರಿಲೀಸ್​ ಆಗಿದೆ. ಪೂಜಾ ಹೆಗ್ಡೆ ಈ ಸಿನಿಮಾದ ನಾಯಕಿ. ಅವರು ಇದೇ ಮೊದಲ ಬಾರಿಗೆ ವಿಜಯ್​ಗೆ ಜತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ನೆಲ್ಸನ್​ ದಿಲೀಪ್​ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ. ಸನ್​ ಪಿಕ್ಚರ್ಸ್​ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ದಳಪತಿ ವಿಜಯ್​ 66ನೇ ಸಿನಿಮಾಗೆ ಯಾರು ನಿರ್ದೇಶನ ಮಾಡುತ್ತಾರೆ ಎನ್ನುವ ವಿಚಾರದ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟಿಕೊಂಡಿವೆ. ತೆಲುಗಿನಲ್ಲಿ ‘ಮಹರ್ಷಿ’ಯಂಥ ಹಿಟ್​ ಸಿನಿಮಾಗಳನ್ನು ನಿರ್ದೇಶನ ಮಾಡಿದ ವಂಶಿ ಪೈಡಿಪಲ್ಲಿ ಅವರು ದಳಪತಿ ವಿಜಯ್​ 66ನೇ ಚಿತ್ರಕ್ಕೆ ಆ್ಯಕ್ಷನ್​ ಕಟ್​ ಹೇಳಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜೂನ್ 22ರಂದು ಅಧಿಕೃತ ಮಾಹಿತಿ ಸಿಗುವ ಸಾಧ್ಯತೆ ಇದೆ. ಈ ಚಿತ್ರಕ್ಕಾಗಿ ವಿಜಯ್​ 100 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎನ್ನುವ ಮಾತು ಕೂಡ ಕೇಳಿ ಬಂದಿದೆ.

ಇದನ್ನೂ ಓದಿ: ತೆಲುಗಿನ ಖ್ಯಾತ ನಿರ್ದೇಶಕನೊಂದಿಗೆ ದಳಪತಿ ವಿಜಯ್​ ಮುಂದಿನ ಸಿನಿಮಾ; ಫ್ಯಾನ್ಸ್​ ಫುಲ್​ಖುಷ್​

ದಳಪತಿ ವಿಜಯ್​ಗೆ 100 ಕೋಟಿ ಸಂಭಾವನೆ ಕೊಡಲು ಮುಂದಾದ ನಿರ್ಮಾಪಕ; ಅಬ್ಬಬ್ಬಾ ಯಾವುದು ಈ ಸಿನಿಮಾ?

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More