AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾಲ್ಡೀವ್ಸ್​ನಲ್ಲಿ ತಮನ್ನಾ ಜೊತೆ ಎಂಜಾಯ್ ಮಾಡಿದ್ರಾ’ ಎಂದು ಕೇಳಿದ್ದಕ್ಕೆ ಸಿಟ್ಟಾದ ವಿಜಯ್ ವರ್ಮಾ

ವಿಜಯ್ ವರ್ಮಾ ಮುಂಬೈನ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಫೋಟೋ-ವಿಡಿಯೋ ಕ್ಲಿಕ್ಕಿಸಲು ಎಲ್ಲರೂ ಮುಗಿಬಿದ್ದರು. ಪಾಪರಾಜಿ ಹೇಳಿದ ಮಾತನ್ನು ವಿಜಯ್ ವರ್ಮಾ ಯಾವ ರೀತಿಯಲ್ಲಿ ಅರ್ಥೈಸಿಕೊಂಡರೋ ಗೊತ್ತಿಲ್ಲ, ಕೊಂಚ ಗರಂ ಆದರು.

‘ಮಾಲ್ಡೀವ್ಸ್​ನಲ್ಲಿ ತಮನ್ನಾ ಜೊತೆ ಎಂಜಾಯ್ ಮಾಡಿದ್ರಾ’ ಎಂದು ಕೇಳಿದ್ದಕ್ಕೆ ಸಿಟ್ಟಾದ ವಿಜಯ್ ವರ್ಮಾ
ವಿಜಯ್-ತಮನ್ನಾ
ರಾಜೇಶ್ ದುಗ್ಗುಮನೆ
|

Updated on: Sep 01, 2023 | 10:51 AM

Share

ವಿಜಯ್ ವರ್ಮಾ ಹಾಗೂ ತಮನ್ನಾ ಭಾಟಿಯಾ (Tamannaah Bhatia) ಡೇಟಿಂಗ್ ಮಾಡುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇವರು ಒಟ್ಟಾಗಿ ಸುತ್ತಾಡುತ್ತಾರೆ. ಇತ್ತೀಚೆಗೆ ಈ ಜೋಡಿ ಮಾಲ್ಡೀವ್ಸ್​ಗೆ ತೆರಳಿತ್ತು. ತಮನ್ನಾ ಅವರು ಸೋಶಿಯಲ್ ಮೀಡಿಯಾದಲ್ಲಿ ಸಮುದ್ರ ತೀರದ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಟ್ರಿಪ್ ಮುಗಿಸಿ ಈ ಜೋಡಿ ಮುಂಬೈಗೆ ಆಗಮಿಸಿದೆ. ಈ ವೇಳೆ ಪಾಪರಾಜಿಗಳು ಕೇಳಿದ ಪ್ರಶ್ನೆ ವಿಜಯ್ ವರ್ಮಾ ಅವರ ಸಿಟ್ಟಿಗೆ ಕಾರಣವಾಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸೆಲೆಬ್ರಿಟಿಗಳು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಾಗ ಪಾಪರಾಜಿಗಳು ವಿಡಿಯೋ-ಫೋಟೋಗೆ ಮುಗಿಬೀಳುತ್ತಾರೆ. ಅದೇ ರೀತಿ ವಿಜಯ್ ವರ್ಮಾ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಫೋಟೋ-ವಿಡಿಯೋ ಕ್ಲಿಕ್ಕಿಸಲು ಎಲ್ಲರೂ ಮುಗಿಬಿದ್ದರು. ಪಾಪರಾಜಿ ಹೇಳಿದ ಮಾತನ್ನು ವಿಜಯ್ ವರ್ಮಾ ಯಾವ ರೀತಿಯಲ್ಲಿ ಅರ್ಥೈಸಿಕೊಂಡರೋ ಗೊತ್ತಿಲ್ಲ, ಕೊಂಚ ಗರಂ ಆದರು.

‘ಹೇಗಿತ್ತು ಸರ್ ಟ್ರಿಪ್’ ಎಂದು ವಿಜಯ್ ವರ್ಮಾ ಅವರನ್ನು ಕೇಳಲಾಯಿತು. ‘ಚೆನ್ನಾಗಿತ್ತು’ ಎಂದು ಕೂಲ್ ಆಗಿಯೇ ಉತ್ತರಿಸಿದರು ವಿಜಯ್. ಬಳಿಕ, ‘ಮಾಲ್ಡೀವ್ಸ್​ ಸಮುದ್ರ ತೀರದ ಮಜವನ್ನು ಪಡೆದು ಬಂದಿರೇ’ ಎಂದು ಓರ್ವ ಪಾಪರಾಜಿ ಕೇಳಿದರು. ಇದಕ್ಕೆ ಉತ್ತರಿಸಿದ ವಿಜಯ್ ವರ್ಮಾ, ‘ಈ ರೀತಿ ನೀವು ಮಾತನಾಡುವಂತಿಲ್ಲ’ ಎಂದು ನೇರವಾಗಿಯೇ ಹೇಳಿದ್ದಾರೆ. ಈ ವೇಳೆ ಅವರು ಕೊಂಚ ಗರಂ ಆದಂತೆ ಕಂಡುಬಂತು.

ಇನ್ನು, ನಟಿ ತಮನ್ನಾ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಯಾರ ಜೊತೆಗೂ ಮಾತಿಗೆ ಸಿಕ್ಕಿಲ್ಲ. ಅವರು ನೇರವಾಗಿ ಕಾರು ಹತ್ತಿ ತೆರಳಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿದೆ.

ಇದನ್ನೂ ಓದಿ: ‘ತಮನ್ನಾ ಮೇಲೆ ನನಗೆ ಹುಚ್ಚು ಪ್ರೀತಿ ಆಗಿದೆ’; ಪಬ್ಲಿಸಿಟಿ ಸ್ಟಂಟ್ಸ್​ ಎಂದವರಿಗೆ ವಿಜಯ್ ವರ್ಮಾ ಉತ್ತರ

ತಮನ್ನಾ ಹಾಗೂ ವಿಜಯ್ ವರ್ಮಾ ಅವರು ‘ಲಸ್ಟ್ ಸ್ಟೋರಿಸ್ 2’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಮೂಲಕ ತಮನ್ನಾ ಹಾಗೂ ವಿಜಯ್ ಮೊದಲ ಬಾರಿಗೆ ತೆರೆಮೇಲೆ ಒಂದಾದರು. ಈ ಸಿನಿಮಾಗೋಸ್ಕರ ‘ನೋ ಕಿಸ್’ ಪಾಲಿಸಿಯನ್ನು ತಮನ್ನಾ ಬ್ರೇಕ್ ಮಾಡಿದರು. ಶೀಘ್ರವೇ ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ತಮನ್ನಾ ನಟನೆಯ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ