AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಗ್ಮಾ ಚಿತ್ರ ನೋಡಿ ಅಪ್ಪ ವಿಜಯ್ ಖಂಡಿತ ಹೆಮ್ಮೆಪಡುತ್ತಾರೆ’: ಮಗ ಜೇಸನ್ ಸಂಜಯ್ ವಿಶ್ವಾಸ

ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ನಿರ್ದೇಶನದ 'ಸಿಗ್ಮಾ' ಸಿನಿಮಾ ಇಂದು ಬಿಡುಗಡೆಯಾಗಿದೆ. ಸಿನಿಮಾ ನೋಡಿ ತಮ್ಮ ತಂದೆ ಖಂಡಿತವಾಗಿಯೂ ಹೆಮ್ಮೆಪಡುತ್ತಾರೆ ಎಂದು ಜೇಸನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರರಂಗಕ್ಕೆ ಬರುವ ತಮ್ಮ ನಿರ್ಧಾರಕ್ಕೆ ತಂದೆಯೇ ಮೊದಲ ಬೆಂಬಲ ನೀಡಿದ್ದರು ಎಂದು ಜೇಸನ್ ನೆನಪಿಸಿಕೊಂಡಿದ್ದಾರೆ.

'ಸಿಗ್ಮಾ ಚಿತ್ರ ನೋಡಿ ಅಪ್ಪ ವಿಜಯ್ ಖಂಡಿತ ಹೆಮ್ಮೆಪಡುತ್ತಾರೆ’: ಮಗ ಜೇಸನ್ ಸಂಜಯ್ ವಿಶ್ವಾಸ
ವಿಜಯ್-ಜೇಸನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 02, 2026 | 10:58 AM

Share

ಮುಖ್ಯಾಂಶಗಳು

  • ನಿರ್ದೇಶಕನಾಗಿ ಜೇಸನ್ ಸಂಜಯ್ ಎಂಟ್ರಿ
  • 'ಸಿಗ್ಮಾ' ಸಿನಿಮಾ ನೋಡಿ ಅಪ್ಪ ವಿಜಯ್ ಏನಂತಾರೆ?
  • ತಂದೆ ವಿಜಯ್ ಸ್ವಭಾವ ಬಿಚ್ಚಿಟ್ಟ ಜೇಸನ್ ಸಂಜಯ್ 

ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಖ್ಯಾತ ನಟ ವಿಜಯ್ ಅವರ ಪುತ್ರ ಜೇಸನ್ ಸಂಜಯ್ ‘ಸಿಗ್ಮಾ’ ಚಿತ್ರದ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಅವರ ಚೊಚ್ಚಲ ನಿರ್ದೇಶನದ ಈ ಸಿನಿಮಾ ಇಂದು (ಅಕ್ಟೋಬರ್ 2) ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಸಿನಿಮಾ ನೋಡಿ ತಮ್ಮ ತಂದೆ ವಿಜಯ್ ಖಂಡಿತವಾಗಿಯೂ ಹೆಮ್ಮೆಪಡುತ್ತಾರೆ ಎಂದು ಜೇಸನ್ ಸಂಜಯ್ ಅತ್ಯಂತ ಆತ್ಮವಿಶ್ವಾಸದಿಂದ ಹೇಳಿದ್ದಾರೆ. ಅವರ ಈ ಹೇಳಿಕೆ ಈಗ ಪ್ರೇಕ್ಷಕರ ಗಮನ ಸೆಳೆದಿದೆ.

ತಂದೆಯವರ ಪ್ರತಿಕ್ರಿಯೆಯ ಶೈಲಿಯ ಬಗ್ಗೆ ಜೇಸನ್ ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ. ‘ವಿಜಯ್ ಅವರು ತಕ್ಷಣವೇ ಯಾವುದೇ ವಿಷಯಕ್ಕೆ ಪ್ರತಿಕ್ರಿಯೆ ನೀಡುವುದಿಲ್ಲ. ಅವರು ಯಾವುದೇ ವಿಷಯವನ್ನು ಸುಮ್ಮನೆ ಆಲಿಸಿ ಆಳವಾಗಿ ಆಲೋಚಿಸುತ್ತಾರೆ. ಫೋನ್‌ನಲ್ಲಿ ಮಾತನಾಡುವಾಗಲೂ ಉತ್ತರ ನೀಡಲು ಸಮಯ ತೆಗೆದುಕೊಳ್ಳುತ್ತಾರೆ. ಕೆಲವೊಮ್ಮೆ ಕಾಲ್ ಕಟ್ ಆಯಿತೇನೋ ಎಂದು ಪರಿಶೀಲಿಸಬೇಕಾಗುತ್ತದೆ’ ಎಂದು ಜೇಸನ್ ಹೇಳಿದ್ದಾರೆ.

‘ತಂದೆಗೆ ಚಿತ್ರವನ್ನು ವಿಶ್ಲೇಷಿಸಲು ಸಮಯ ಬೇಕಾಗುತ್ತದೆ . ಹೀಗಾಗಿ ಸಿನಿಮಾ ವೀಕ್ಷಿಸಿದ ತಕ್ಷಣ ವಿಜಯ್ ಯಾವುದೇ ಅಭಿಪ್ರಾಯ ಹೇಳದಿರಬಹುದು. ಆದರೆ ಸಂಪೂರ್ಣವಾಗಿ ಸಿನಿಮಾ ನೋಡಿದ ಮೇಲೆ ಅವರಿಗೆ ಚಿತ್ರ ಖಂಡಿತ ಇಷ್ಟವಾಗುತ್ತದೆ. ಮಗನ ಕೆಲಸದ ಬಗ್ಗೆ ಅವರಿಗೆ ಹೆಮ್ಮೆಯಾಗುತ್ತದೆ’ ಎಂಬ ನಂಬಿಕೆ ತಮಗಿದೆ ಎಂದು ಜೇಸನ್ ತಿಳಿಸಿದ್ದಾರೆ.

ಚಿತ್ರರಂಗಕ್ಕೆ ಬರುವ ತಮ್ಮ ನಿರ್ಧಾರಕ್ಕೆ ತಂದೆಯೇ ಮೊದಲ ಬೆಂಬಲ ನೀಡಿದ್ದರು. ಮೂರು ದಶಕಗಳ ಕಾಲ ಚಿತ್ರರಂಗದಲ್ಲಿದ್ದ ಅವರಿಗೆ ಈ ಕ್ಷೇತ್ರಕ್ಕೆ ಬರುವುದರ ಮಹತ್ವ ಚೆನ್ನಾಗಿ ತಿಳಿದಿತ್ತು. ತಮ್ಮ ತಾಯಿ ಮತ್ತು ತಂಗಿಗಿಂತ ಮುಂಚಿತವಾಗಿಯೇ ತಂದೆ ಈ ನಿರ್ಧಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದರು ಎಂದು ಜೇಸನ್ ಹಳೆಯ ನೆನಪನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ತಂದೆ ನನ್ನ ಸಿನಿಮಾ ಪ್ರಚಾರ ಮಾಡಲ್ಲ’; ಕಾರಣ ಹೇಳಿದ ಜೇಸನ್ ಸಂಜಯ್ 

ಇತ್ತೀಚೆಗೆ ನಡೆದ ಚಿತ್ರದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲೂ ಜೇಸನ್ ತಂದೆಗೆ ಧನ್ಯವಾದ ತಿಳಿಸಿದ್ದರು. ಪ್ರಸ್ತುತ ಮುಖ್ಯಮಂತ್ರಿಯಾಗಿರುವ ತಂದೆ, ತಾಯಿ ಹಾಗೂ ತಂಗಿಗೆ ತಮಿಳಿನಲ್ಲಿ ಕೃತಜ್ಞತೆ ಸಲ್ಲಿಸಿದ್ದರು. ಜೇಸನ್ ಸಂಜಯ್ ಅವರ ನಿರ್ದೇಶನದ ಚೊಚ್ಚಲ ಪ್ರಯತ್ನಕ್ಕೆ ತಮಿಳು ಚಿತ್ರರಂಗದಲ್ಲಿ ಉತ್ತಮ ಬೆಂಬಲ ಸಿಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ಮೈಸೂರು ದಸರಾ 2026: ಅಧಿಕೃತ ವೇಳಾಪಟ್ಟಿ ಪ್ರಕಟ, ಸಂಪೂರ್ಣ ವಿವರ ಇಲ್ಲಿದೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ದಾವಣಗೆರೆ: ವಸತಿ ಶಾಲೆಯಿಂದ ಮತ್ತೊಬ್ಬ ವಿದ್ಯಾರ್ಥಿ ನಾಪತ್ತೆ
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಟ್ರಕ್-ಟೆಂಪೋ ಡಿಕ್ಕಿಗೆ 7 ಮಂದಿ ಸಾವು, 19 ಜನರಿಗೆ ಗಾಯ
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ಎಲ್ಲರ ಮುಖವಾಡವನ್ನು ಇಂಚಿಂಚು ಬಿಚ್ಚಿಟ್ಟ ತಾಂಡವ್; ಎಲ್ಲ ಸ್ಪರ್ಧಿಗಳು ಶಾಕ್
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ