AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ವ್ಯಕ್ತಿ, ವಿಜಯಲಕ್ಷ್ಮಿ ದರ್ಶನ್ ಜೊತೆ ಪ್ರತ್ಯಕ್ಷ

Vijayalakshmi Darshan: ವಿಜಯಲಕ್ಷ್ಮಿ ಅವರು ಇತ್ತೀಚೆಗಷ್ಟೆ ಮಂಗಳೂರಿಗೆ ತೆರಳು ದೈವಾರಾಧನೆಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬ ಮಂಗಳೂರಿನಲ್ಲಿ ವಿಜಯಲಕ್ಷ್ಮಿ ಅವರನ್ನು ಸ್ವಾಗತಿಸಿದ್ದು, ಈ ಕುರಿತಾದ ವಿಡಿಯೋ ಹರಿದಾಡುತ್ತಿದೆ. ಗೌರವ್ ಶೆಟ್ಟಿ ಹಾಗೂ ಕಿರಣ್ ರೆಡ್ಡಿಗೆ ನೊಟೀಸ್ ನೀಡಲು ಪೊಲೀಸರು ಹುಡುಕಾಟ ನಡೆಸಿದ್ದರು.

ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ವ್ಯಕ್ತಿ, ವಿಜಯಲಕ್ಷ್ಮಿ ದರ್ಶನ್ ಜೊತೆ ಪ್ರತ್ಯಕ್ಷ
Gaurav Shetty
ಮಂಜುನಾಥ ಸಿ.
|

Updated on:Aug 23, 2026 | 7:23 PM

Share

ಮುಖ್ಯಾಂಶಗಳು

  • ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಟ್ವಿಸ್ಟ್
  • ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಗೌರವ್ ಶೆಟ್ಟಿ
  • ಗೌರವ್ ಶೆಟ್ಟಿ ಈಗ ವಿಜಯಲಕ್ಷ್ಮಿ ದರ್ಶನ್ ಜೊತೆ ಕಾಣಿಸಿದ್ದಾನೆ

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಒಬ್ಬರನ್ನು ಬಂಧಿಸಿದ್ದು, ಕೆಲ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ ಆರೋಪಿಯೊಬ್ಬ ಇದೀಗ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರೊಟ್ಟಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದ. ವಿಜಯಲಕ್ಷ್ಮಿ ಅವರು ಇತ್ತೀಚೆಗಷ್ಟೆ ಮಂಗಳೂರಿಗೆ ತೆರಳು ದೈವಾರಾಧನೆಯಲ್ಲಿ ಭಾಗಿ ಆಗಿದ್ದರು. ಈ ವೇಳೆ ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬ ಮಂಗಳೂರಿನಲ್ಲಿ ವಿಜಯಲಕ್ಷ್ಮಿ ದರ್ಶನ್ ಅವರನ್ನು ಸ್ವಾಗತಿಸಿದ್ದು, ಈ ಕುರಿತಾದ ವಿಡಿಯೋ ಹರಿದಾಡುತ್ತಿದೆ.

ಸಾಕ್ಷ್ಯಗಳಿಗೆ ಬೆದರಿಕೆ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಈಗಾಗಲೇ ಪುನೀತ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಇದೇ ಪ್ರಕರಣದಲ್ಲಿ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಅವರುಗಳು ಸಹ ಹಸ್ತಕ್ಷೇಪದ ಬಗ್ಗೆ ಪೊಲೀಸರಿಗೆ ಅನುಮಾನವಿತ್ತು. ಈ ಇಬ್ಬರಿಗೂ ಪೊಲೀಸರು ನೊಟೀಸ್ ನೀಡುವ ಯತ್ನ ಮಾಡಿದರೂ ಸಾಧ್ಯವಾಗಿರಲಿಲ್ಲ. ಈ ಆರೋಪಿಗಳಿಬ್ಬರೂ ಪೊಲೀಸರ ಸಂಪರ್ಕಕ್ಕೆ ಸಿಗದೆ ತಲೆ ಮರೆಸಿಕೊಂಡಿದ್ದರು. ಆದರೆ ಇದೀಗ ಗೌರವ್ ಶೆಟ್ಟಿ, ವಿಜಯಲಕ್ಷ್ಮಿ ದರ್ಶನ್ ಅವರೊಟ್ಟಿಗೆ ಮಂಗಳೂರಿನಲ್ಲಿ ಕಾಣಿಸಿಕೊಂಡಿದ್ದಾನೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ತಾಯಿ ಪ್ರತಿಕೂಲ ಸಾಕ್ಷಿ? ಕೋರ್ಟ್​​ನಲ್ಲಿ ನಡೆದಿದ್ದೇನು?

ಇತ್ತೀಚೆಗಷ್ಟೆ ವಿಜಯಲಕ್ಷ್ಮಿ ದರ್ಶನ್ ಅವರು ಮಂಗಳೂರಿಗೆ ಹೋಗಿದ್ದರು. ಆಗ ಗೌರವ್ ಶೆಟ್ಟಿ, ವಿಜಯಲಕ್ಷ್ಮಿ ಮತ್ತು ಅವರ ಗೆಳತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾತಗ ಮಾಡಿದ್ದಾನೆ. ಮಂಗಳೂರಿನ ಶ್ರೀ ಮಂದಾರ ಧರ್ಮ ಚಾವಡಿಗೆ ವಿಜಯಲಕ್ಷ್ಮಿ ತೆರಳಿದ್ದರು, ಈ ವೇಳೆ ಗೌರವ್ ಶೆಟ್ಟಿ ಸಹ ಜೊತೆಯಲ್ಲಿದ್ದ ಎನ್ನಲಾಗಿದೆ. ಗೌರವ್ ಶೆಟ್ಟಿ, ವಿಜಯಲಕ್ಷ್ಮಿ ಅವರನ್ನು ವಿಮಾನ ನಿಲ್ದಾಣದ ಹೊರಗೆ ಸ್ವಾಗತ ಮಾಡಿರುವ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಸಾಕ್ಷ್ಯಗಳಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಪುನೀತ್, ಸುಹಾಸ್ ಮತ್ತು ವೇಣು ಎಂಬುವರನ್ನು ಬಂಧಿಸಿದ್ದರು. ಈ ಪುನೀತ್ ಜೊತೆಗೆ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಸಂಪರ್ಕದಲ್ಲಿದ್ದಿದ್ದು ವಿಧಿ ವಿಜ್ಞಾನ ಪ್ರಯೋಗಾಲಯದ ವರದಿಯಿಂದ ಬಹಿರಂಗವಾಗಿತ್ತು. ಪುನೀತ್ ಬಂಧನವಾದ ಬಳಿಕ ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ ಮೊಬೈಲ್​​ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಪೊಲೀಸರ ಸಂಪರ್ಕಕ್ಕೆ ಸಿಗದೆ ತಲೆ ಮರೆಸಿಕೊಂಡಿದ್ದರು ಎನ್ನಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:11 pm, Sun, 23 August 26

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ