AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಟಾಂಗ್ ಕೊಟ್ಟಿದ್ದು ಯಾರಿಗೆ?

Vijayalakshmi Darshan: ಪತಿ ದರ್ಶನ್ ಅನ್ನು ಜೈಲಿಂದ ಹೊರಗೆ ತರಲು ಪತ್ನಿ ವಿಜಯಲಕ್ಷ್ಮಿ ದರ್ಶನ್ ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಪತಿಯ ಅನುಪಸ್ಥಿತಿಯಲ್ಲಿ ಕುಟುಂಬದ ಜವಾಬ್ದಾರಿ ಅವರ ಮೇಲೆ ಬಿದ್ದಿದೆ. ಎಲ್ಲವನ್ನೂ ತಕ್ಕ ಮಟ್ಟಿಗೆ ವಿಜಯಲಕ್ಷ್ಮಿ ನಿಭಾಯಿಸುತ್ತಿದ್ದಾರೆ. ದರ್ಶನ್ ಆಪ್ತರಾದ ಧನ್ವೀರ್ ಗೌಡ ಅವರು ವಿಜಯಲಕ್ಷ್ಮಿ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಕೆಲ ಕಾಣದ ಕೈಗಳು ಸಹ ವಿಜಯಲಕ್ಷ್ಮಿ ಅವರ ಬೆಂಬಲಕ್ಕೆ ನಿಂತಿವೆ ಎನ್ನಲಾಗಿದೆ. ಇದೀಗ ವಿಜಯಲಕ್ಷ್ಮಿ ದರ್ಶನ್ ಅವರು ಹಂಚಿಕೊಂಡಿರುವ ಇನ್​​ಸ್ಟಾಗ್ರಾಂ ಪೋಸ್ಟ್ ಒಂದು ಕುತೂಹಲ ಕೆರಳಿಸಿದೆ.

‘ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’ ವಿಜಯಲಕ್ಷ್ಮಿ ದರ್ಶನ್ ಟಾಂಗ್ ಕೊಟ್ಟಿದ್ದು ಯಾರಿಗೆ?
Vijayalakshmi Darshan
ಮಂಜುನಾಥ ಸಿ.
|

Updated on: Jul 03, 2026 | 4:23 PM

Share

ನಟ ದರ್ಶನ್ (Darshan), ಜೈಲಿನಲ್ಲಿದ್ದಾರೆ. ಪತಿಯನ್ನು ಜೈಲಿಂದ ಹೊರಗೆ ತರಲು ಪತ್ನಿ ವಿಜಯಲಕ್ಷ್ಮಿ ದರ್ಶನ್ ನಾನಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಪತಿಯ ಅನುಪಸ್ಥಿತಿಯಲ್ಲಿ ಕುಟುಂಬದ ಜವಾಬ್ದಾರಿ ಅವರ ಮೇಲೆ ಬಿದ್ದಿದೆ. ಎಲ್ಲವನ್ನೂ ತಕ್ಕ ಮಟ್ಟಿಗೆ ವಿಜಯಲಕ್ಷ್ಮಿ ನಿಭಾಯಿಸುತ್ತಿದ್ದಾರೆ. ದರ್ಶನ್ ಆಪ್ತರಾದ ಧನ್ವೀರ್ ಗೌಡ ಅವರು ವಿಜಯಲಕ್ಷ್ಮಿ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಕೆಲ ಕಾಣದ ಕೈಗಳು ಸಹ ವಿಜಯಲಕ್ಷ್ಮಿ ಅವರ ಬೆಂಬಲಕ್ಕೆ ನಿಂತಿವೆ ಎನ್ನಲಾಗಿದೆ. ಇದೀಗ ವಿಜಯಲಕ್ಷ್ಮಿ ದರ್ಶನ್ ಅವರು ಹಂಚಿಕೊಂಡಿರುವ ಇನ್​​ಸ್ಟಾಗ್ರಾಂ ಪೋಸ್ಟ್ ಒಂದು ಕುತೂಹಲ ಕೆರಳಿಸಿದೆ.

ವಿಜಯಲಕ್ಷ್ಮಿ ದರ್ಶನ್ ಅವರು ಸಾಮಾಜಿಕ ಜಾಲತಾಣವನ್ನು ಬಲು ಅಪರೂಪಕ್ಕೆ ಬಳಸುತ್ತಾರೆ. ಅದರಲ್ಲಿಯೂ ಸುಖಾ-ಸುಮ್ಮನೆ ಯಾವುದೇ ಕೋಟ್​​ಗಳನ್ನು, ಸುಭಾಷಿತಗಳನ್ನೆಲ್ಲ ಹಂಚಿಕೊಳ್ಳುವುದಿಲ್ಲ. ಯಾರಿಗಾದರೂ ಪರೋಕ್ಷವಾಗಿ ಸಂದೇಶ ತಲುಪಿಸಲು, ತಮ್ಮ ಅಸಹಮತ, ಭಿನ್ನಾಭಿಪ್ರಾಯಗಳನ್ನು ಪರೋಕ್ಷವಾಗಿ ವ್ಯಕ್ತಪಡಿಸಲಷ್ಟೆ ಈ ರೀತಿಯ ಕೋಟ್​​ಗಳು, ಪೋಸ್ಟ್​​ಗಳನ್ನು ಬಳಸುತ್ತಾರೆ. ಇದೀಗ ಅಂಥಹುದೇ ಒಂದು ಸುಭಾಷಿತ ಮಾದರಿ ಸಾಲನ್ನು ವಿಜಯಲಕ್ಷ್ಮಿ ಅವರು ಹಂಚಿಕೊಂಡಿದ್ದಾರೆ.

‘ಪಡೆದುಕೊಂಡ ಮೇಲೆ, ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ, ಅದು ವಸ್ತುವಾಗಲಿ ವ್ಯಕ್ತಿಯಾಗಲಿ’ ಎಂಬ ಸಾಲನ್ನು ವಿಜಯಲಕ್ಷ್ಮಿ ದರ್ಶನ್ ಇನ್​​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್​​ಗೆ ವಿಜಯಲಕ್ಷ್ಮಿ ಅವರು ಯಾರನ್ನೂ ಟ್ಯಾಗ್ ಮಾಡಿಲ್ಲವಾದರೂ ಇದು ಯಾರಿಗೋ ಟಾಂಗ್ ಕೊಡವ ಉದ್ದೇಶದಿಂದಲೇ ಹಂಚಿಕೊಂಡಿರುವ ಪೋಸ್ಟ್ ಎನ್ನಲಾಗುತ್ತಿದೆ. ಅದರಲ್ಲೂ ತಮ್ಮ ಕುಟುಂಬಕ್ಕೆ ಹಿಂದೆ ಆಪ್ತರಾಗಿದ್ದವರಿಗೆಂದೇ ಈ ಪೋಸ್ಟ್ ಅನ್ನು ನಟಿ ವಿಜಯಲಕ್ಷ್ಮಿ ಅವರು ಹಂಚಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ:‘ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ’: ಮತ್ತೊಮ್ಮೆ ಜಾಮೀನು ಕನಸು ಭಗ್ನ

ಕೆಲ ಮಾಹಿತಿಗಳ ಪ್ರಕಾರ, ದರ್ಶನ್ ಹಾಗೂ ಅವರ ಕುಟುಂಬಕ್ಕೆ ಬಲು ಆಪ್ತವಾಗಿದ್ದ ಹಾಗೂ ದರ್ಶನ್ ಜೈಲು ಸೇರಿದ ಬಳಿಕ ದರ್ಶನ್ ಅವರ ಕುಟುಂಬಕ್ಕೆ ಸಹೋದರನಂತೆ ಬೆಂಬಲ ನೀಡಿದ್ದ ನಟ ಧನ್ವೀರ್ ಹಾಗೂ ದರ್ಶನ್ ಅವರ ಕುಟುಂಬಕ್ಕೆ ಸಣ್ಣ ಮನಸ್ಥಾಪ ಉಂಟಾಗಿದೆ. ಮೊದಲಿನಂತೆ ಅವರು ಆತ್ಮೀಯವಾಗಿ ಉಳಿದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ ಈ ಬಗ್ಗೆ ಯಾವುದೇ ಖಾತ್ರಿ ಇಲ್ಲ. ಈಗ ಧನ್ವೀರ್ ಅವರನ್ನು ಉದ್ದೇಶಿಸಿಯೇ ವಿಜಯಲಕ್ಷ್ಮಿ ಅವರು ಈ ಪೋಸ್ಟ್ ಹಂಚಿಕೊಂಡಿದ್ದಾರೆ ಎಂಬ ಚರ್ಚೆಯೂ ಸಹ ಚಾಲ್ತಿಯಲ್ಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್