Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayashanthi: ಚಿರಂಜೀವಿ, ನಾಗಾರ್ಜುನಗೆ ಮಾತಲ್ಲಿ ತಿವಿದ ವಿಜಯಶಾಂತಿ; ಆಮಿರ್​ ಖಾನ್​ಗೆ ಬೆಂಬಲ ನೀಡಿದ್ದೇ ತಪ್ಪಾಯ್ತು

Aamir Khan | Laal Singh Chadda: ಆಗಸ್ಟ್​ 11ರಂದು ಬಿಡುಗಡೆ ಆಗಲಿರುವ ‘ಲಾಲ್​ ಸಿಂಗ್ ಚಡ್ಡಾ’ ಚಿತ್ರಕ್ಕೆ ತೆಲುಗಿನ ಸ್ಟಾರ್​ ನಟರು ಬೆಂಬಲ ನೀಡಿದ್ದನ್ನು ವಿಜಯಶಾಂತಿ ವಿರೋಧಿಸಿದ್ದಾರೆ. ಈ ಬಗ್ಗೆ ಅವರು ಕಟು ಟೀಕೆ ಮಾಡಿದ್ದಾರೆ.

Vijayashanthi: ಚಿರಂಜೀವಿ, ನಾಗಾರ್ಜುನಗೆ ಮಾತಲ್ಲಿ ತಿವಿದ ವಿಜಯಶಾಂತಿ; ಆಮಿರ್​ ಖಾನ್​ಗೆ ಬೆಂಬಲ ನೀಡಿದ್ದೇ ತಪ್ಪಾಯ್ತು
ಆಮಿರ್ ಖಾನ್, ವಿಜಯಶಾಂತಿ
Follow us
TV9 Web
| Updated By: ಮದನ್​ ಕುಮಾರ್​

Updated on:Aug 03, 2022 | 1:06 PM

ನಟ ಆಮಿರ್​ ಖಾನ್ (Aamir Khan)​ ಅವರು ಒಂದು ವರ್ಗದ ಜನರ ವಿರೋಧ ಕಟ್ಟಿಕೊಂಡಿದ್ದಾರೆ. ಹಲವು ವರ್ಷಗಳ ಹಿಂದೆ ಅವರು ನೀಡಿದ್ದ ‘ಅಸಹಿಷ್ಣುತೆ’ ಹೇಳಿಕೆ ಈಗಲೂ ಅವರಿಗೆ ತೊಂದರೆ ಕೊಡುತ್ತಿದೆ. ಆಮಿರ್​ ಖಾನ್​ ನಟನೆಯ ಸಿನಿಮಾಗಳನ್ನು ಬ್ಯಾನ್​ ಮಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ಈಗ ‘ಲಾಲ್​ ಸಿಂಗ್​ ಚಡ್ಡಾ’ (Laal Singh Chadda) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾವನ್ನು ಬಹಿಷ್ಕರಿಸಬೇಕು ಎಂದು ನೆಟ್ಟಿಗರು ಅಭಿಯಾನ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಟಾಲಿವುಡ್​ ನಟರಾದ ‘ಮೆಗಾ ಸ್ಟಾರ್​’ ಚಿರಂಜೀವಿ, ಅಕ್ಕಿನೇನಿ ನಾಗಾರ್ಜುನ ಮುಂತಾದವರು ಆಮಿರ್​ ಖಾನ್​ ಚಿತ್ರಕ್ಕೆ ಬೆಂಬಲ ನೀಡಿದ್ದಾರೆ. ಇದು ನಟಿ, ರಾಜಕಾರಣಿ ವಿಜಯಶಾಂತಿ (Vijayashanthi) ಅವರ ಅಸಮಾಧಾನಕ್ಕೆ ಕಾರಣ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ವಿಜಯಶಾಂತಿ ಅವರು ಬಿಜೆಪಿ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ. ಟ್ವಿಟರ್​ ಮೂಲಕ ಅವರು ಆಮಿರ್​ ಖಾನ್​ ಬಗ್ಗೆ ಕಟು ಟೀಕೆ ಮಾಡಿದ್ದಾರೆ. ಜೊತೆಗೆ, ಯಾರ ಹೆಸರೂ ಹೇಳದೇ ಟಾಲಿವುಡ್​ನ ಹಿರಿಯ​ ನಟರಿಗೆ ಅವರು ಮಾತಿನ ಮೂಲಕ ತಿವಿದಿದ್ದಾರೆ. ಸದ್ಯ ಆಮಿರ್​ ಖಾನ್​ಗೆ ಬೆಂಬಲ ನೀಡುತ್ತಿರುವ ಚಿರಂಜೀವಿ, ನಾಗರ್ಜುನ ಮುಂತಾದ ನಟರನ್ನು ಉದ್ದೇಶಿಸಿಯೇ ವಿಜಯಶಾಂತಿ ಟ್ವೀಟ್​ ಮಾಡಿದ್ದಾರೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ.

ಇದನ್ನೂ ಓದಿ
Image
‘ಕೆಜಿಎಫ್ 2’ ಎದುರು ಬರದೆ ನಾವು ಬದುಕಿದೆವು; ಆಮಿರ್ ಖಾನ್​ಗೂ ಭಯ ಹುಟ್ಟಿಸಿದ್ದ ಯಶ್ ಚಿತ್ರದ ಅಬ್ಬರ
Image
ಆಗಸ್ಟ್​ 11ಕ್ಕೆ ಆಮಿರ್​ ಖಾನ್​ ವರ್ಸಸ್​ ಅಕ್ಷಯ್​ ಕುಮಾರ್​; ಪ್ರೇಕ್ಷಕರ ಬೆಂಬಲ ಯಾರ ಸಿನಿಮಾಗೆ?
Image
ಹಾಲಿವುಡ್​ನ ಚಾಕೊಲೇಟ್​ ತಂದು ಬಾಲಿವುಡ್​ನಲ್ಲಿ ಗೋಲ್​ಗಪ್ಪ ಮಾಡಿದ ಆಮಿರ್​ ಖಾನ್​; ಸಖತ್​ ಟ್ರೋಲ್​
Image
ಆಮಿರ್​ ಖಾನ್​ರನ್ನು ‘ಟೈಟಾನಿಕ್’​ ನಿರ್ದೇಶಕನಿಗೆ ಹೋಲಿಸಿದ ಹಾಲಿವುಡ್​ ದಿಗ್ಗಜ; ಇಲ್ಲಿದೆ ಅಚ್ಚರಿ ವಿಚಾರ

‘ಈ ಸಿನಿಮಾ ವಿರುದ್ಧ ಸೋಶಿಯಲ್​ ಮೀಡಿಯಾದಲ್ಲಿ ಅಭಿಯಾನ ನಡೆಯುತ್ತಿದೆ. ದಕ್ಷಿಣ ಭಾರತದ ಕೆಲವು ಹೀರೋಗಳು ಜನರ ಭಾವನೆ ಬಗ್ಗೆ ತಿಳಿದಿಲ್ಲದಂತೆ ವರ್ತಿಸುತ್ತಿರುವುದು ದುರದೃಷ್ಟಕರ. ಟಿವಿ ಕಾರ್ಯಕ್ರಮಗಳಲ್ಲಿ ಅವರು ಆಮಿರ್​ ಖಾನ್​ ಪರ ಪ್ರಚಾರ ಮಾಡುತ್ತಿದ್ದಾರೆ’ ಎಂದ ವಿಜಯಶಾಂತಿ ಟ್ವೀಟ್​ ಮಾಡಿದ್ದಾರೆ. ಈ ಬಗ್ಗೆ ಚಿರಂಜೀವಿ ಮತ್ತು ನಾಗಾರ್ಜುನ ಅವರು ಯಾವ ರೀತಿ ಪ್ರತಿಕ್ರಿಯೆ ನೀಡಲಿದ್ದಾರೆ ಎಂಬ ಕೌತುಕ ನಿರ್ಮಾಣ ಆಗಿದೆ.

ಬಹಿಷ್ಕಾರ ಮಾಡಬೇಡಿ ಎಂದು ಬೇಡಿಕೊಂಡ ಆಮಿರ್​ ಖಾನ್​:

‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾ ಬಗ್ಗೆ ಜನರು ನೆಗೆಟಿವ್​ ವಿಚಾರಗಳನ್ನು ಹಬ್ಬಿಸುತ್ತಿದ್ದಾರೆ. ಇದರಿಂದ ಆಮಿರ್​ ಖಾನ್​ ಅವರಿಗೆ ಬೇಸರ ಆಗಿದೆ. ಈ ಬಗ್ಗೆ ಇತ್ತೀಚೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಅನಗತ್ಯವಾಗಿ ನನ್ನ ಬಗ್ಗೆ ದ್ವೇಷ ಹಬ್ಬಿಸುತ್ತಿರುವುದರಿಂದ ನನಗೆ ಬೇಸರ ಆಗುತ್ತದೆ. ನಾನು ಭಾರತವನ್ನು ಇಷ್ಟಪಡುವ ವ್ಯಕ್ತಿ ಅಲ್ಲ ಎಂದು ಕೆಲವರು ನಂಬಿದ್ದಾರೆ. ಆದರೆ ಅದು ನಿಜವಲ್ಲ. ಜನರು ಹಾಗೆ ಅಂದುಕೊಂಡಿರುವುದು ದುರದೃಷ್ಟಕರ. ದಯವಿಟ್ಟು ನನ್ನ ಸಿನಿಮಾಗಳನ್ನು ನೋಡಿ. ಬಹಿಷ್ಕಾರ ಮಾಡಬೇಡಿ’ ಎಂದು ಆಮಿರ್​ ಖಾನ್​ ಮನವಿ ಮಾಡಿಕೊಂಡಿದ್ದಾರೆ. ಆಗಸ್ಟ್​ 11ರಂದು ಲಾಲ್​ ಸಿಂಗ್​ ಚಡ್ಡಾ ಸಿನಿಮಾ ಬಿಡುಗಡೆ ಆಗಲಿದೆ.

Published On - 1:06 pm, Wed, 3 August 22

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​