AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್ ಪುತ್ರನ ಮೊದಲ ಸಿನಿಮಾ ಘೋಷಣೆ, ಅಭಿಮಾನಿಗಳಿಗೆ ನಿರಾಸೆ

Thalapathy Vijay: ದಳಪತಿ ವಿಜಯ್, ಭಾರತದ ಭಾರಿ ದೊಡ್ಡ ಸ್ಟಾರ್ ನಟರಲ್ಲಿ ಒಬ್ಬರು. ರಾಜಕೀಯ ಪ್ರವೇಶಿಸಿರುವ ಅವರು ಚಿತ್ರರಂಗದಿಂದ ದೂರಾಗುವುದಾಗಿ ಹೇಳಿದ್ದಾರೆ. ಅದರ ಬೆನ್ನಲ್ಲೆ ಇದೀಗ ವಿಜಯ್ ಪುತ್ರ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ ಆದರೆ ನಟನಾಗಿ ಅಲ್ಲ.

ವಿಜಯ್ ಪುತ್ರನ ಮೊದಲ ಸಿನಿಮಾ ಘೋಷಣೆ, ಅಭಿಮಾನಿಗಳಿಗೆ ನಿರಾಸೆ
VIjay-Jason
ಮಂಜುನಾಥ ಸಿ.
|

Updated on: Dec 01, 2024 | 9:23 AM

Share

ಚಿತ್ರರಂಗದಲ್ಲಿರುವಷ್ಟು ನೆಪೋಟಿಸಂ ಭಾರತದ ಇನ್ಯಾವುದೇ ಕ್ಷೇತ್ರದಲ್ಲೂ ಇಲ್ಲ. ಸಿನಿಮಾದ ನಾಯಕ-ನಾಯಕಿಯರು, ನಿರ್ಮಾಪಕರು, ನಿರ್ದೇಶಕರು ಬೇರೆ ಬೇರೆ ವಿಭಾಗಗಳಲ್ಲಿ ಕೆಲಸ ಮಾಡುವವರು ಸಹ ತಮ್ಮ ಮಕ್ಕಳನ್ನು ನಾಯಕನನ್ನಾಗಿ ಲಾಂಚ್ ಮಾಡುವ ಪ್ರಯತ್ನದಲ್ಲಿರುತ್ತಾರೆ. ಹಲವರು ಇದರಲ್ಲಿ ಯಶಸ್ವಿ ಸಹ ಆಗಿದ್ದಾರೆ. ಆದರೆ ದಳಪತಿ ವಿಜಯ್ ಸ್ವತಃ ದೊಡ್ಡ ಸ್ಟಾರ್ ನಟ ಆಗಿದ್ದರೂ ಸಹ ಪುತ್ರನನ್ನು ನಾಯಕನ್ನಾಗಿ ಅಲ್ಲದೆ ನಿರ್ದೇಶಕನಾಗಿ ಲಾಂಚ್ ಮಾಡುತ್ತಿದ್ದಾರೆ.

ದಳಪತಿ ವಿಜಯ್ ಪುತ್ರ ಜೇಸನ್ ಸಂಜಯ್, ನಾಯಕ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಕೆಲ ವರ್ಷದ ಹಿಂದೆ ಹರಿದಾಡಿತ್ತು. ವಿಜಯ್ ಸೇತುಪತಿ, ವಿಜಯ್ ಪುತ್ರನ ಸಿನಿಮಾಕ್ಕೆ ಬಂಡವಾಳ ಹೂಡಲಿದ್ದಾರೆ ಎಂದು ಸಹ ಹೇಳಲಾಗಿತ್ತು. ಆದರೆ ವಿಜಯ್ ಪುತ್ರ ಸಿನಿಮಾ ನಟನಾಗಿ ಅಲ್ಲದೆ ಇದೀಗ ನಿರ್ದೇಶಕನಾಗಿ ಎಂಟ್ರಿ ಕೊಡಲು ಮುಂದಾಗಿದ್ದಾರೆ. ಅವರ ಮೊದಲ ಸಿನಿಮಾ ಘೋಷಣೆ ಸಹ ಆಗಿದೆ. ವಿಜಯ್ ಪುತ್ರ ನಾಯಕನಾಗಿ ಎಂಟ್ರಿ ಕೊಡದೆ, ನಿರ್ದೇಶಕನಾಗಿ ಬರುತ್ತಿರುವುದು ಸ್ವತಃ ವಿಜಯ್ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ವಿಜಯ್ ಪುತ್ರ ಜೇಸನ್ ಸಂಜಯ್ ಮೊದಲ ಸಿನಿಮಾ ಘೋಷಣೆ ಆಗಿದೆ. ತಮಿಳಿನ ಜನಪ್ರಿಯ ನಟ ಸಂದೀಪ್ ಕಿಶನ್ ಅವರನ್ನು ಸಿನಿಮಾದ ನಾಯಕನನ್ನಾಗಿ ತೆಗೆದುಕೊಳ್ಳಲಾಗಿದೆ. ಸಿನಿಮಾಕ್ಕೆ ಲೈಕಾ ಪ್ರೊಡಕ್ಷನ್ ಬಂಡವಾಳ ಹೂಡುತ್ತಿದೆ. ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು ಇದೊಂದು ಹೈಸ್ಟ್ (ಡಕಾಯಿತಿ) ಕತೆ ಒಳಗೊಂಡಂತೆ ತೋರುತ್ತಿದೆ. ಟೀಸರ್​ನಲ್ಲಿ ಪ್ರಾಚೀನ ವಸ್ತುಗಳು, ಮೂಟೆಗಟ್ಟಲೆ ಹಣ ಕಾಣುತ್ತಿದೆ. ಸಿನಿಮಾ ಥ್ರಿಲ್ಲರ್ ಕತೆ ಒಳಗೊಂಡಿರುವುದು ಟೀಸರ್​ನಿಂದ ತಿಳಿದು ಬರುತ್ತಿದೆ.

ಇದನ್ನೂ ಓದಿ:ವಿಜಯ್ ಪ್ರಕಾಶ್ ಧ್ವನಿಯಲ್ಲಿ ಬಂದ ಹಳೆಯ ಜಾಹೀರಾತಿ​ಗೆ ಈಗಲೂ ಬೇಡಿಕೆ

ವಿಜಯ್, ಚಿತ್ರರಂಗದಿಂದ ದೂರಾಗುತ್ತಿದ್ದಂತೆ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಾರೆ. ರಾಜಕೀಯಕ್ಕೆ ಪ್ರವೇಶ ಮಾಡಿದ ವಿಜಯ್, ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಈಗ ತಮ್ಮ 69ನೇ ಸಿನಿಮಾದಲ್ಲಿ ನಟಿಸುತ್ತಿದ್ದು, ಅದೇ ಅವರ ಕೊನೆಯ ಸಿನಿಮಾ ಆಗಿರಲಿದೆ. ವಿಜಯ್ ಪುತ್ರ, ಚಿತ್ರರಂಗದಲ್ಲಿ ತಂದೆಯ ಸ್ಥಾನವನ್ನು ತುಂಬಲಿದ್ದಾರೆ ಎನ್ನಲಾಗಿತ್ತು, ಆದರೆ ಅವರು ನಿರ್ದೇಶನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಹಿಂದೆ ವಿಜಯ್​ರ ಕೆಲವು ಸಿನಿಮಾಗಳಲ್ಲಿ ಜೇಸನ್ ವಿಜಯ್ ಸಣ್ಣ ಪುತ್ರ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಹಾಡುಗಳಲ್ಲಿ ಸ್ಪೆಷಲ್ ಎಂಟ್ರಿ ಕೊಟ್ಟಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ