ರೋಲೆಕ್ಸ್​ ಪಾತ್ರ ಇಟ್ಟುಕೊಂಡು ಪ್ರತ್ಯೇಕ ಸಿನಿಮಾ ಮಾಡ್ತಾರಾ ಲೋಕೇಶ್​ ಕನಗರಾಜ್​?

‘150 ದಿನ ಶೂಟಿಂಗ್​ ಇರುವಂತಹ ದೊಡ್ಡ ಸಿನಿಮಾದಲ್ಲಿ ನಾನು ಸೂರ್ಯ ಜೊತೆ ಕೆಲಸ ಮಾಡುತ್ತೇನೆ. ಶೀಘ್ರದಲ್ಲೇ ಅದು ಸಾಧ್ಯವಾಗಲಿದೆ’ ಎಂದು ಲೋಕೇಶ್​ ಕನಗರಾಜ್​ ಹೇಳಿದ್ದಾರೆ.

ರೋಲೆಕ್ಸ್​ ಪಾತ್ರ ಇಟ್ಟುಕೊಂಡು ಪ್ರತ್ಯೇಕ ಸಿನಿಮಾ ಮಾಡ್ತಾರಾ ಲೋಕೇಶ್​ ಕನಗರಾಜ್​?
ಲೋಕೇಶ್ ಕನಗರಾಜ್, ಸೂರ್ಯ
Follow us
ಮದನ್​ ಕುಮಾರ್​
|

Updated on: Apr 02, 2023 | 3:51 PM

2022ರಲ್ಲಿ ಸೂಪರ್​ ಹಿಟ್​ ಆದ ಸಿನಿಮಾಗಳ ಪಟ್ಟಿಯಲ್ಲಿ ‘ವಿಕ್ರಮ್​’ (Vikram Movie) ಕೂಡ ಇದೆ. ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು ಲೋಕೇಶ್​ ಕನಗರಾಜ್​. ಸಿನಿಮಾದ ಕೊನೆಯಲ್ಲಿ ಬಂದ ರೋಲೆಕ್ಸ್​ ಪಾತ್ರಕ್ಕೆ ಜೀವ ತುಂಬಿದ್ದು ನಟ ಸೂರ್ಯ. ಕೆಲವೇ ನಿಮಿಷಗಳ ಕಾಲ ಕಾಣಿಸಿಕೊಳ್ಳುವ ಆ ಪಾತ್ರ ಸಿಕ್ಕಾಪಟ್ಟೆ ಸದ್ದು ಮಾಡಿತು. ವಿಶೇಷ ಏನೆಂದರೆ ರೋಲೆಕ್ಸ್​ ಪಾತ್ರವನ್ನು ಇಟ್ಟುಕೊಂಡು ಲೋಕೇಶ್​ ಕನಗರಾಜ್​ (Lokesh Kanagaraj) ಅವರು ಒಂದು ಪ್ರತ್ಯೇಕ ಸಿನಿಮಾ ಮಾಡುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇತ್ತೀಚೆಗೆ ಅವರು ನೀಡಿದ ಹೇಳಿಕೆಯ ಕಾರಣದಿಂದ ಹೊಸ ಚರ್ಚೆ ಶುರುವಾಗಿದೆ. ಈ ಸುದ್ದಿ ಕೇಳಿ ಸೂರ್ಯ (Suriya) ಅಭಿಮಾನಿಗಳಿಗೆ ಖುಷಿ ಆಗಿದೆ. ಅಷ್ಟಕ್ಕೂ ಲೋಕೇಶ್​ ಕನಗರಾಜ್​ ಹೇಳಿದ್ದೇನು? ಇಲ್ಲಿದೆ ಮಾಹಿತಿ..

ಇತ್ತೀಚೆಗೆ ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಲೋಕೇಶ್​ ಕನಗರಾಜ್​ ಭಾಗವಹಿಸಿದ್ದರು. ಈ ವೇಳೆ ಅವರು ಸೂರ್ಯ ಜೊತೆ ಸಿನಿಮಾ ಮಾಡುವ ಬಗ್ಗೆ ಪ್ರಸ್ತಾಪಿಸಿದರು. ‘ನಾನು ‘ವಿಕ್ರಮ್​’ ಚಿತ್ರದಲ್ಲಿ ಸೂರ್ಯ ಅವರ ಜೊತೆ 2 ದಿನ ಮಾತ್ರ ಕೆಲಸ ಮಾಡಿದೆ. ಖಂಡಿತವಾಗಿಯೂ 150 ದಿನ ಶೂಟಿಂಗ್​ ಇರುವಂತಹ ದೊಡ್ಡ ಸಿನಿಮಾದಲ್ಲಿ ನಾನು ಅವರ ಜೊತೆ ಕೆಲಸ ಮಾಡುತ್ತೇನೆ. ಶೀಘ್ರದಲ್ಲೇ ಅದು ಸಾಧ್ಯವಾಗಲಿದೆ’ ಎಂದು ಲೋಕೇಶ್​ ಕನಗರಾಜ್​ ಹೇಳಿದ್ದಾರೆ.

ಇದನ್ನೂ ಓದಿ: Thalapathy Vijay: ದಳಪತಿ ವಿಜಯ್​ ನಟನೆಯ 67ನೇ ಚಿತ್ರಕ್ಕೆ ‘ಲಿಯೋ’ ಎಂದು ಹೆಸರಿಟ್ಟ ನಿರ್ದೇಶಕ ಲೋಕೇಶ್​ ಕನಗರಾಜ್​​

ಇದನ್ನೂ ಓದಿ
Image
ಈ ಫೋಟೋದಲ್ಲಿರುವ ಸ್ಟಾರ್ ನಟರು ಯಾರು ಎಂದು ಗುರುತಿಸುತ್ತೀರಾ?
Image
‘ವಿಕ್ರಮ್​’ ವಿಲನ್ ಸೂರ್ಯಗೆ ರೋಲೆಕ್ಸ್ ವಾಚ್ ಗಿಫ್ಟ್ ಕೊಟ್ಟ ಕಮಲ್ ಹಾಸನ್​; ಇದರ ಬೆಲೆ ಎಷ್ಟು ಲಕ್ಷ? ಗೆಸ್ ಮಾಡಿ
Image
ಅಪಘಾತದಲ್ಲಿ ಮೃತಪಟ್ಟ ಅಭಿಮಾನಿ ಮನೆಗೆ ಭೇಟಿ ನೀಡಿ ಭಾವುಕರಾದ ನಟ ಸೂರ್ಯ
Image
Suriya: ನಟ ಸೂರ್ಯ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಕಾರಣವೇನು? ಇಲ್ಲಿದೆ ಮಾಹಿತಿ

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಲೋಕೇಶ್​ ಕನಗರಾಜ್​ ಅವರು ಸೂರ್ಯ ಜೊತೆ ಸೂಪರ್​ ಹೀರೋ ಕಾನ್ಸೆಪ್ಟ್​ ಇರುವ ಒಂದು ಸಿನಿಮಾ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅದು ಸೆಟ್ಟೇರಲಿಲ್ಲ. ಈಗ ಅದೇ ಕಥೆಯನ್ನು ಇಟ್ಟುಕೊಂಡು ಅವರು ಸೂರ್ಯ ಜೊತೆ ಸಿನಿಮಾ ಮಾಡುತ್ತಾರೋ ಅಥವಾ ರೋಲೆಕ್ಸ್​ ಪಾತ್ರವನ್ನು ಆಧರಿಸಿ ಪ್ರತ್ಯೇಕ ಸಿನಿಮಾ ಮಾಡುತ್ತಾರೋ ಎಂಬುದು ಖಚಿತವಾಗಿಲ್ಲ.

ಇದನ್ನೂ ಓದಿ: Salman Khan: ‘ವಿಕ್ರಮ್​’ ಸಿನಿಮಾ ನಿರ್ದೇಶಕ ಲೋಕೇಶ್​ ಕನಗರಾಜ್​ ಜೊತೆ ಸಲ್ಮಾನ್​ ಖಾನ್​ ಹೊಸ ಚಿತ್ರ?

ಸೂರ್ಯ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಸಿಕ್ಕಿದೆ. ಅವರು ನಟಿಸಿದ ‘ಸೂರರೈ ಪೋಟ್ರು’ ಮತ್ತು ‘ಜೈ ಭೀಮ್​’ ಸಿನಿಮಾಗಳು ದೇಶಾದ್ಯಂತ ಸದ್ದು ಮಾಡಿವೆ. 5 ವಿಭಾಗಗಳಲ್ಲಿ ರಾಷ್ಟ್ರ ಪ್ರಶಸ್ತಿ ಬಾಚಿಕೊಂಡಿದ್ದು ‘ಸೂರರೈ ಪೋಟ್ರು’ ಸಿನಿಮಾದ ಹೆಚ್ಚುಗಾರಿಕೆ. ಸದ್ಯ ಸೂರ್ಯ ಅವರು 42ನೇ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಚಿತ್ರದ ಒಟಿಟಿ ಹಕ್ಕುಗಳಿಗೆ ಭಾರಿ ಡಿಮ್ಯಾಂಡ್​ ಬಂದಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ವಿಕ್ರಮ್’ ಸಿನಿಮಾ ನಿರ್ದೇಶಕ ಲೋಕೇಶ್​ ಕನಗರಾಜ್​ಗೆ ಐಷಾರಾಮಿ ಕಾರು ಗಿಫ್ಟ್ ನೀಡಿದ ಕಮಲ್ ಹಾಸನ್

ಇನ್ನು, ಲೋಕೇಶ್​ ಕನಗರಾಜ್​ ಅವರು ‘ಲಿಯೋ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ದಳಪತಿ ವಿಜಯ್​ ಹೀರೋ. ಕಾಶ್ಮೀರದಲ್ಲಿ ಈ ಸಿನಿಮಾ ಶೂಟಿಂಗ್​ ನಡೆಯುತ್ತಿದೆ. ಅನೇಕ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್