ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಕಿಚ್ಚ ಸುದೀಪ್​

Edited By:

Updated on: Dec 11, 2021 | 2:53 PM

ಸುದೀಪ್​ ಸದ್ಯ, ‘ವಿಕ್ರಾಂತ್​ ರೋಣ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಈ ಸಿನಿಮಾ ಸಾಕಷ್ಟು ಹೈಪ್​ ಪಡೆದುಕೊಂಡಿದೆ.

ನಟ ಕಿಚ್ಚ ಸುದೀಪ್​ ಅವರು ಚಿತ್ರರಂಗದಲ್ಲಿ ಸದಾ ಬ್ಯುಸಿ ಆಗಿರುತ್ತಾರೆ. ಅವರು ಸಿನಿಮಾ ಕೆಲಸಗಳ ಜತೆ ಕುಟುಂಬಕ್ಕೂ ಪ್ರಾಮುಖ್ಯತೆ ನೀಡುತ್ತಾರೆ. ಕುಟುಂಬದ ಜತೆ ಅವರು ಹೆಚ್ಚು ಸಮಯ ಕಳೆಯುತ್ತಾರೆ. ಈಗ ಅವರು ಪತ್ನಿ ಪ್ರಿಯಾ ಮತ್ತು ಮಗಳು ಸಾನ್ವಿ ಸಮೇತ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ಮೂವರು ಸುಬ್ರಹ್ಮಣ್ಯ ದೇವರ ದರ್ಶನವನ್ನು ಪಡೆದಿದ್ದಾರೆ. ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠೆ ಸೇವೆ ಸಲ್ಲಿಸಿದ್ದಾರೆ. ನಂತರ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಕುಕ್ಕೆ ಸುಬ್ರಹ್ಮಣ್ಯ ಇದೆ. ಸುದೀಪ್​ ಸದ್ಯ, ‘ವಿಕ್ರಾಂತ್​ ರೋಣ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಈಗಾಗಲೇ ಈ ಸಿನಿಮಾ ಸಾಕಷ್ಟು ಹೈಪ್​ ಪಡೆದುಕೊಂಡಿದೆ.

ಇದನ್ನೂ ಓದಿ: Kichcha Sudeep: ಟಿವಿ9 ಕನ್ನಡಕ್ಕೆ 15 ವರ್ಷ; ಶುಭಕೋರಿದ ಕಿಚ್ಚ ಸುದೀಪ್​

Follow Us
Web contact

TV9 Kannada

Read More