ವಿರಾಟ್​ ಕೊಹ್ಲಿ ಹಾಡು ಕೇಳಿ ಅನುಷ್ಕಾ ಶರ್ಮಾ ಆನಂದಭಾಷ್ಪ; ವಿಡಿಯೋ ವೈರಲ್

Anushka Sharma - Virat Kohli: ಜನಪ್ರಿಯತೆ ಪಡೆದ ವಿಡಿಯೋದಲ್ಲಿ, ಅನುಷ್ಕಾ ಅವರಿಗೆ ಅಭಿನಂದನೆ ಸಲ್ಲಿಸಲು ತಮ್ಮ ಕುಟುಂಬ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ‘ಮೇರೆ ಮೆಹಬೂಬ್ ಖಯಾಮತ್​ ಹೋಗಿ’ ಹಾಡನ್ನು ಶುಶ್ರಾವ್ಯವಾಗಿ ಹಾಡಿದ್ದಾರೆ. ವಿರಾಟ್​ ಹಾಡು ಹೇಳುತ್ತಿದ್ದಂತೆಯೇ ಅನುಷ್ಕಾ ಕಣ್ಣಲ್ಲಿ ಆನಂದಭಾಷ್ಪ ತುಂಬಿ ಬಂದಿದೆ.

ವಿರಾಟ್​ ಕೊಹ್ಲಿ ಹಾಡು ಕೇಳಿ ಅನುಷ್ಕಾ ಶರ್ಮಾ ಆನಂದಭಾಷ್ಪ; ವಿಡಿಯೋ ವೈರಲ್
ವಿರಾಟ್​ ಕೊಯ್ಲಿ - ಅನುಷ್ಕಾ ಶರ್ಮಾ
Follow us
TV9 Web
| Updated By: Digi Tech Desk

Updated on:Jun 16, 2021 | 11:46 AM

ಅನುಷ್ಕಾ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಜನರಿಗೆ ಫೇವರೇಟ್​ ಜೋಡಿ. ಬಾಲಿವುಡ್​ನಲ್ಲಿ ಹೆಸರು ಮಾಡಿದ ಅನುಷ್ಕಾ ಶರ್ಮಾ ಮತ್ತು ಕ್ರಿಕೆಟ್​ನಲ್ಲಿ ಜನಪ್ರಿಯತೆ ಗಿಟ್ಟಿಸಿಕೊಂಡ ವಿರಾಟ್​ ಜೋಡಿ ಹಲವರಿಗೆ ರೋಲ್​ ಮಾಡೆಲ್​ ಕೂಡಾ ಆಗಿದ್ದಾರೆ. ಇತ್ತೀಚೆಗಷ್ಟೇ ಮಗಳಿಗೆ ಜನ್ಮ ನೀಡುವ ಮೂಲಕ ಮತ್ತೆ ಸುದ್ದಿಯಲ್ಲಿದ್ದ ಈ ಜೋಡಿ ‘ವಿರುಷ್ಕಾ’ ಎಂದೇ ಹೆಸರು ಗಿಟ್ಟಿಸಿಕೊಂಡಿದ್ದಾರೆ. ಇದೀಗ ವಿರಾಟ್​ ಕೊಹ್ಲಿ ಹಾಡು ಹೇಳಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿರಾಟ್​ ಹಾಡು ಕೇಳುತ್ತಿದ್ದಂತೆಯೇ ಅನುಷ್ಕಾರಿಗೆ ಕಣ್ತುಂಬಿ ಬಂದಿದೆ.

ಭಾರತೀಯ ಕ್ರಿಕೆಟ್​ ನಾಯಕ ವಿರಾಟ್​ ಕೊಹ್ಲಿ ಸಂಗಾತಿ ಅನುಷ್ಕಾ ಶರ್ಮರಿಗಾಗಿ ಹಾಡನ್ನು ಹಾಡಿದ್ದಾರೆ. ಜನಪ್ರಿಯತೆ ಪಡೆದ ವಿಡಿಯೋದಲ್ಲಿ, ಅನುಷ್ಕಾ ಅವರಿಗೆ ಅಭಿನಂದನೆ ಸಲ್ಲಿಸಲು ತಮ್ಮ ಕುಟುಂಬ ಹಾಗೂ ಸ್ನೇಹಿತರ ಸಮ್ಮುಖದಲ್ಲಿ ‘ಮೇರೆ ಮೆಹಬೂಬ್ ಖಯಾಮತ್​ ಹೋಗಿ’ ಹಾಡನ್ನು ಶುಶ್ರಾವ್ಯವಾಗಿ ಹಾಡಿದ್ದಾರೆ. ವಿರಾಟ್​ ಹಾಡು ಹೇಳುತ್ತಿದ್ದಂತೆಯೇ ಅನುಷ್ಕಾ ಕಣ್ಣಲ್ಲಿ ಆನಂದಭಾಷ್ಪ ತುಂಬಿ ಬಂದಿದೆ.

2017ರಲ್ಲಿ ಅನುಷ್ಕಾ ಮತ್ತು ವಿರಾಟ್ ವಿವಾಹವಾದರು. ಈ ವರ್ಷದ ಜನವರಿ ತಿಂಗಳಿನಲ್ಲಿ ಅನುಷ್ಕಾ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಅವಳಿಗೆ ‘ವಮಿಕಾ’ ಎಂದು ನಾಮಕರಣ ಮಾಡಲಾಯಿತು.

ಅನುಷ್ಕಾ ಶರ್ಮಾ, ಶಾರುಖ್​ ಖಾನ್​ ಅವರೊಂದಿಗೆ ರಬ್​ ನೆ ಬನಾದಿ ಜೋಡಿ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದರು. ಇವರು ಸುಲ್ತಾನ್​, ಬ್ಯಾಂಡ್​ ಭಜಾ ಭಾರತ್​, ದಿಲ್​ ಧಡಕನೆ ದೋ, ಎ ದಿಲ್​ ಹೇ ಮುಷ್ಕಿಲ್​, ಸುಯಿ ಧಾಗಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. 2018ರ ಬಳಿಕ ನಟಿ ಅನುಷ್ಕಾ ಶರ್ಮಾ ನಟನೆಯಲ್ಲಿ ವಿರಾಮ ತೆಗೆದುಕೊಂಡಿದ್ದಾರೆ. ಭಾರತ ಪ್ರಸ್ತುತದಲ್ಲಿ ವಿಶ್ವ ಚಾಂಪಿಯನ್​ ಶಿಪ್​ ಸರಣಿಯಲ್ಲಿ ಆಡುತ್ತಿರುವುದರಿಂದ ಅನುಷ್ಕಾ ಮತ್ತು ಅವರ ಪುತ್ರಿ ವಮಿಕಾ, ವಿರಾಟ್​ ಕೊಹ್ಲಿ ಅವರೊಂದಿಗೆ ಇಂಗ್ಲೆಂಡ್​ಗೆ ತೆರಳಿದ್ದಾರೆ.

ಇದನ್ನೂ ಓದಿ:

Virat Kohli: ಸ್ವಲ್ಪ ಸ್ವಲ್ಪ ಕನ್ನಡ ಬರುತ್ತೆ; ವಿರಾಟ್ ಕೊಹ್ಲಿ ಮಾತು ಕೇಳಿ ಅಭಿಮಾನಿಗಳು ಫುಲ್ ಖುಷ್!

ಪುತ್ರಿ ವಮಿಕಾ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಂಡ ಅನುಷ್ಕಾ ಶರ್ಮಾ-ವಿರಾಟ್​ ಕೊಯ್ಲಿ; ಏನದು?

Published On - 11:28 am, Wed, 16 June 21

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ
ಸರ್ಕಾರಿ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ಕೊಡಬೇಕಿಲ್ಲ: ಸಿದ್ದರಾಮಯ್ಯ