Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಷ್ಕಾ ಶರ್ಮಾಗೆ ಅನಾರೋಗ್ಯ? ಮೂಡಿದೆ ದೊಡ್ಡ ಅನುಮಾನ

ಕೆಲವು ದಿನಗಳ ಹಿಂದೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಮತ್ತು ವಿರಾಟ್ ಅವರ ಸ್ನೇಹಿತ ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ದೊಡ್ಡ ವಿಚಾರ ಬಹಿರಂಗಪಡಿಸಿದ್ದರು. ವಿರಾಟ್ ಎರಡನೇ ಬಾರಿಗೆ ತಂದೆಯಾಗಲಿದ್ದಾರೆ ಎಂದು ಹೇಳುವ ಮೂಲಕ ವಿರಾಟ್ ಮತ್ತು ಅನುಷ್ಕಾ ಶರ್ಮಾ ಅಭಿಮಾನಿಗಳಿಗೆ ಸರ್​​ಪ್ರೈಸ್ ನೀಡಿದ್ದರು.

ಅನುಷ್ಕಾ ಶರ್ಮಾಗೆ ಅನಾರೋಗ್ಯ? ಮೂಡಿದೆ ದೊಡ್ಡ ಅನುಮಾನ
ಅಷ್ಟೇ ಅಲ್ಲದೆ, ಕಿತ್ತಳೆ ಹಣ್ಣನ್ನು ಬೆಳಗ್ಗೆ ತಿನ್ನತೊಡಗಿದ ನಂತರ ಅನುಷ್ಕಾ ಅವರಿಗೆ ಬೇರೆ ಹಣ್ಣುಗಳು ಕೂಡ ಬಹಳ ಇಷ್ಟವಾಗತೊಡಗಿದೆಯಂತೆ. ಈಗ ದಿನದಲ್ಲಿ ಆಗಾಗ ಹಣ್ಣುಗಳನ್ನೇ ತಿನ್ನುತ್ತಾರಂತೆ ಅನುಷ್ಕಾ.
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Feb 13, 2024 | 11:50 AM

ನಟಿ ಅನುಷ್ಕಾ ಶರ್ಮಾ (Anushka Sharma) ಕಳೆದ ಕೆಲವು ದಿನಗಳಿಂದ ತಮ್ಮ ವೈಯಕ್ತಿಕ ವಿಚಾರದಿಂದ ಸುದ್ದಿಯಲ್ಲಿದ್ದಾರೆ. ಅನುಷ್ಕಾ ಎರಡನೇ ಬಾರಿಗೆ ಪ್ರೆಗ್ನೆಂಟ್ ಆದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಮತ್ತೊಂದೆಡೆ ವಿರಾಟ್ ಕೊಹ್ಲಿ ಕ್ರಿಕೆಟ್ ಪಂದ್ಯಗಳಿಂದ ದೂರ ಉಳಿದಿದ್ದಾರೆ. ಎರಡನೇ ಮುಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಅವರು ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಸದ್ಯ ಅವರು ಮಾಧ್ಯಮಗಳಿಂದ ದೂರವಿದ್ದಾರೆ. ಅನುಷ್ಕಾ ಅವರ ಆರೋಗ್ಯದ ಕುರಿತು ಪತ್ರಕರ್ತರೊಬ್ಬರು ಹಾಕಿರುವ ಪೋಸ್ಟ್ ನೆಟ್ಟಿಗರ ಗಮನ ಸೆಳೆದಿದೆ. ಪತ್ರಕರ್ತ ಅಭಿಷೇಕ್ ತ್ರಿಪಾಠಿ ಟ್ವಿಟರ್‌ನಲ್ಲಿ ಪೋಸ್ಟ್ ಒಂದನ್ನು ಬರೆದಿದ್ದಾರೆ. ಅದರಲ್ಲಿ ಅವರು ಅನುಷ್ಕಾ ಮತ್ತು ವಿರಾಟ್ ಹೆಸರನ್ನು ಉಲ್ಲೇಖಿಸಿದ್ದಾರೆ.

‘ನಾಲ್ಕು ವಿಷಯಗಳು: ಒಂದು: ಡಿವಿಲಿಯರ್ಸ್ ಹೇಳಿದ್ದು ಸರಿ. ಎರಡು: ಕೆಲವು ಸಮಸ್ಯೆಗಳ ಕಾರಣ ವಿದೇಶದಲ್ಲಿ ವೈದ್ಯರ ಬಳಿ ಚಿಕಿತ್ಸೆ ಪಡೆಯಲು ಮತ್ತು ಕುಟುಂಬದೊಂದಿಗೆ ಇರಲು ವಿರಾಟ್ ನಿರ್ಧರಿಸಿದ್ದಾರೆ. ಮೂರು: ಬಿಸಿಸಿಐ ಅನುಮತಿಯೊಂದಿಗೆ ಈ ಸಮಯದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರಲು ನಿರ್ಧರಿಸಿದ್ದಾರೆ. ನಾಲ್ಕು: ನಾವು ಅವರ ಸಂತೋಷದ ಭವಿಷ್ಯಕ್ಕಾಗಿ ಪ್ರಾರ್ಥಿಸಬೇಕು’ ಎಂದು ಪೋಸ್ಟ್ ಮಾಡಲಾಗಿದೆ. ವಿರಾಟ್ ಮತ್ತು ಅನುಷ್ಕಾ ಅವರ ಖಾಸಗಿ ಜೀವನವನ್ನು ಗೌರವಿಸದ ಪತ್ರಕರ್ತರನ್ನು ಕೆಲವರು ಟೀಕಿಸಿದ್ದಾರೆ. ಕೆಲವರು ಅನುಷ್ಕಾ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಅವರಿಗೆ ಅನಾರೋಗ್ಯ ಉಂಟಾಗಿರಬಹುದು ಎಂದು ಹೇಳಲಾಗುತ್ತಿದೆ.

ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಸರಣಿಯ ಕೊನೆಯ ಮೂರು ಟೆಸ್ಟ್ ಪಂದ್ಯಗಳನ್ನು ಆಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಸರಣಿಯ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಆಡುವುದಿಲ್ಲ ಎಂದು ಅವರು ಈ ಮೊದಲೇ ಹೇಳಿದ್ದರು.

ಇದನ್ನೂ ಓದಿ: ಅನುಷ್ಕಾ ಶರ್ಮಾ ತಮ್ಮನ ಜತೆ ಬ್ರೇಕಪ್: ಈಗ ತೃಪ್ತಿ ಸುತ್ತಾಡುತ್ತಿರುವುದು ಯಾರ ಜೊತೆ?

ಕೆಲವು ದಿನಗಳ ಹಿಂದೆ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಮತ್ತು ವಿರಾಟ್ ಅವರ ಸ್ನೇಹಿತ ಎಬಿ ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ದೊಡ್ಡ ವಿಚಾರ ಬಹಿರಂಗಪಡಿಸಿದ್ದರು. ವಿರಾಟ್ ಎರಡನೇ ಬಾರಿಗೆ ತಂದೆಯಾಗಲಿದ್ದಾರೆ ಎಂದು ಹೇಳುವ ಮೂಲಕ ವಿರಾಟ್ ಮತ್ತು ಅನುಷ್ಕಾ ಶರ್ಮಾ ಅಭಿಮಾನಿಗಳಿಗೆ ಸರ್​​ಪ್ರೈಸ್ ನೀಡಿದ್ದರು. ಕೆಲ ದಿನಗಳ ಹಿಂದೆ ಇದ್ದಕ್ಕಿದ್ದಂತೆ ಎಬಿ ಡಿವಿಲಿಯರ್ಸ್ ತಮ್ಮ ಹೇಳಿಕೆಯನ್ನು ವಾಪಸ್ಸು ಪಡೆದಿದ್ದರು. ಅಷ್ಟೇ ಅಲ್ಲ ಅಭಿಮಾನಿಗಳಲ್ಲಿ ಕ್ಷಮೆಯನ್ನೂ ಕೇಳಿದ್ದಾರೆ. ತಾವು ದೊಡ್ಡ ತಪ್ಪು ಮಾಡಿದ್ದು, ವಿರಾಟ್ ಬಗ್ಗೆ ನೀಡಿದ ಮಾಹಿತಿ ತಪ್ಪು ಎಂದು ಹೇಳಿದ್ದರು. ಅನುಷ್ಕಾ ಶರ್ಮಾ ಅವರು ಸದ್ಯ ನಟನೆಯಿಂದ ದೂರವೇ ಇದ್ದಾರೆ. ಇದು ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
4 ವರ್ಷದ ಪ್ರೀತಿಗೆ ಸಾಕ್ಷಿಯಾದ ಅಂಬೇಡ್ಕರ್ ಜಯಂತಿ: ಪ್ರತಿಮೆ ಎದುರೇ ವಿವಾಹ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ಜಾತಿಗಣತಿ ವರದಿ ಬಗ್ಗೆ ಕೇಳಿದರೆ ಸಿಡಿಮಿಡಿಗೊಳ್ಳುವ ಸಿಎಂ ಸಿದ್ದರಾಮಯ್ಯ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ನಿರ್ಜನ ಪ್ರದೇಶದಲ್ಲಿ ತಪ್ಪಿಸಿಕೊಳ್ಳುವ ವ್ಯರ್ಥ ಪ್ರಯತ್ನ ನಡೆಸಿದ್ದ ಆರೋಪಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್