Sai Pallavi: ಪಾತ್ರಕ್ಕಾಗಿ ಸಾಯಿ ಪಲ್ಲವಿ 2 ದಿನ ಉಪವಾಸ; ಇವರೇ ನಿಜವಾದ ನ್ಯಾಷನಲ್​ ಕ್ರಶ್​ ಎಂದ ಫ್ಯಾನ್ಸ್​

Virata Parvam | Sai Pallavi: ಕೆಲಸದ ಮೇಲೆ ಸಾಯಿ ಪಲ್ಲವಿ ತೋರಿಸುವ ಬದ್ಧತೆ ಬಗ್ಗೆ ‘ವಿರಾಟ ಪರ್ವಂ’ ನಿರ್ದೇಶಕರು ಮಾತನಾಡಿದ್ದಾರೆ. ಈ ವಿಚಾರ ಕೇಳಿ ಎಲ್ಲರೂ ಸಾಯಿ ಪಲ್ಲವಿಗೆ ಭೇಷ್​ ಎನ್ನುತ್ತಿದ್ದಾರೆ.

Sai Pallavi: ಪಾತ್ರಕ್ಕಾಗಿ ಸಾಯಿ ಪಲ್ಲವಿ 2 ದಿನ ಉಪವಾಸ; ಇವರೇ ನಿಜವಾದ ನ್ಯಾಷನಲ್​ ಕ್ರಶ್​ ಎಂದ ಫ್ಯಾನ್ಸ್​
ಸಾಯಿ ಪಲ್ಲವಿ
Follow us
TV9 Web
| Updated By: ಮದನ್​ ಕುಮಾರ್​

Updated on:Jun 15, 2022 | 8:54 AM

ನಟಿ ಸಾಯಿ ಪಲ್ಲವಿ (Sai Pallavi) ಅವರನ್ನು ಅಪಾರ ಸಂಖ್ಯೆಯ ಅಭಿಮಾನಿಗಳು ಇಷ್ಟಪಡುತ್ತಾರೆ. ಜನರು ಈ ಪರಿ ಪ್ರೀತಿ ತೋರಿಸಲು ಹಲವು ಕಾರಣಗಳಿವೆ. ನಿರ್ದೇಶಕರಿಗೂ ಈ ನಟಿಯನ್ನು ಕಂಡರೆ ಅಚ್ಚುಮೆಚ್ಚು. ಕೊಟ್ಟ ಪಾತ್ರಕ್ಕೆ ಸಾಯಿ ಪಲ್ಲವಿ ಅವರು ಸೂಕ್ತ ನ್ಯಾಯ ಸಲ್ಲಿಸುತ್ತಾರೆ ಎಂಬ ಭರವಸೆ ಎಲ್ಲ ನಿರ್ದೇಶಕರಿಗೂ ಮೂಡಿದೆ. ಈ ವಾರ (ಜೂನ್ 17) ‘ವಿರಾಟ ಪರ್ವಂ’ (Virata Parvam) ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ನೋಡಿ ಫ್ಯಾನ್ಸ್​ ನಿರೀಕ್ಷೆ ಹೆಚ್ಚಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ನಾಯಕನ ರೀತಿಯೇ ಸಾಯಿ ಪಲ್ಲವಿ ಪಾತ್ರಕ್ಕೂ ಪ್ರಾಮುಖ್ಯತೆ ಸಿಕ್ಕಿದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ. ಅಚ್ಚರಿ ಏನೆಂದರೆ ಈ ಪಾತ್ರಕ್ಕಾಗಿ ಸಾಯಿ ಪಲ್ಲವಿ ಅವರು 2 ದಿನ ಉಪವಾಸ ಮಾಡಿದ್ದರು ಎಂದು ನಿರ್ದೇಶಕ ವೇಣು ಉಡುಗುಲ ಅವರು ಹೇಳಿದ್ದಾರೆ. ಈ ವಿಷಯ ತಿಳಿದ ಬಳಿಕ ‘ಸಾಯಿ ಪಲ್ಲವಿ ಅವರೇ ನಿಜವಾದ ನ್ಯಾಷನಲ್​ ಕ್ರಶ್​’ (National Crush) ಎನ್ನುತ್ತಿದ್ದಾರೆ ಅವರ ಫ್ಯಾನ್ಸ್​.

ಪಾತ್ರ ಯಾವ ರೀತಿ ಇರುತ್ತದೆಯೋ ಅದಕ್ಕ ತಕ್ಕಂತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಸಿದ್ಧವಾಗಬೇಕಾಗುತ್ತದೆ. ಈ ಚಿತ್ರದಲ್ಲಿ ನಾಯಕಿಯು ತುಂಬ ಕಷ್ಟದ ಪರಿಸ್ಥಿತಿಯಲ್ಲಿ ಎರಡು ದಿನ ಊಟ ಮಾಡಿರುವುದಿಲ್ಲ. ಆ ದೃಶ್ಯದಲ್ಲಿ ನಟಿಸಲು ಸಾಯಿ ಪಲ್ಲವಿ ಕೂಡ ಎರಡು ದಿನ ಊಟ ಮಾಡಿರಲಿಲ್ಲ ಎಂಬ ವಿಚಾರವನ್ನು ನಿರ್ದೇಶಕರು ಹೇಳಿದ್ದಾರೆ. ಅವರ ಈ ಬದ್ಧತೆ ಕಂಡು ಎಲ್ಲರೂ ಭೇಷ್​ ಎನ್ನುತ್ತಿದ್ದಾರೆ. ಸಿನಿಮಾದಲ್ಲಿ ಆ ದೃಶ್ಯ ಹೇಗೆ ಮೂಡಿಬಂದಿರಬಹುದು ಎಂಬುದನ್ನು ನೋಡಿ ತಿಳಿಯಲು ಫ್ಯಾನ್ಸ್​ ಕಾದಿದ್ದಾರೆ.

ಇದನ್ನೂ ಓದಿ: Sai Pallavi: ಮೈ ಕಾಣುವಂತೆ ಬಟ್ಟೆ ಧರಿಸಬಾರದು ಅಂತ ಸಾಯಿ ಪಲ್ಲವಿ ನಿರ್ಧಾರ ಮಾಡಿದ್ದು ಯಾಕೆ? ಸತ್ಯ ಬಾಯ್ಬಿಟ್ಟ ನಟಿ

ಇದನ್ನೂ ಓದಿ
Image
Sai Pallavi: ಮುಖ ಮುಚ್ಕೊಂಡು ಥಿಯೇಟರ್​ಗೆ ಬಂದ ಸಾಯಿ ಪಲ್ಲವಿ; ನೋಡಿ ಎಂಜಾಯ್​ ಮಾಡಿದ್ದು ಯಾವ ಸಿನಿಮಾ?
Image
Sai Pallavi: ಬಾಲಿವುಡ್​ಗೆ ಕಾಲಿಡೋ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಸಾಯಿ ಪಲ್ಲವಿ
Image
ವೇದಿಕೆ ಮೇಲೆ ಗಳಗಳನೆ ಅತ್ತ ಸಾಯಿ ಪಲ್ಲವಿ; ಕಣ್ಣೀರು ಹಾಕಿದ್ದಕ್ಕೆ ಕಾರಣ ವಿವರಿಸಿದ ನಟಿ
Image
ಚಿತ್ರರಂಗಕ್ಕೆ ಕಾಲಿಟ್ಟ ಸಾಯಿ ಪಲ್ಲವಿ ತಂಗಿ ಪೂಜಾ; ಅಕ್ಕನಂತೆ ಮಿಂಚಲು ಸಾಧ್ಯವೇ?

ಪ್ರತಿ ಸಿನಿಮಾದಲ್ಲಿಯೂ ಒಂದಕ್ಕಿಂತ ಒಂದು ಭಿನ್ನ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಯಿ ಪಲ್ಲವಿ ಅವರು ‘ವಿರಾಟ ಪರ್ವಂ’ ಚಿತ್ರದಲ್ಲಿ ನಕ್ಸಲೈಟ್​​ ಅವತಾರ ತಾಳಿದ್ದಾರೆ. ನಕ್ಸಲ್​ ಗುಂಪಿನ ನಾಯಕನ ಪಾತ್ರದಲ್ಲಿ ರಾಣಾ ದಗ್ಗುಬಾಟಿ ನಟಿಸಿದ್ದಾರೆ. ನಕ್ಸಲ್​ ಕಮಾಂಡರ್​ ಮೇಲೆ ಪ್ರೀತಿ ಚಿಗುರಿದ ಬಳಿಕ ಸಾಮಾನ್ಯ ಹಳ್ಳಿ ಹುಡುಗಿಯೊಬ್ಬಳು ತಾನೂ ಕೂಡ ನಕ್ಸಲೈಟ್​ ಆಗುತ್ತಾಳೆ ಎಂಬ ಒನ್​ ಲೈನ್​ ಸ್ಟೋರಿಯನ್ನು ಟ್ರೇಲರ್​ನಲ್ಲಿ ಬಿಟ್ಟುಕೊಡಲಾಗಿದೆ. 1990ರ ಸಮಯದಲ್ಲಿ ತೆಲಂಗಾಣದಲ್ಲಿ ನಡೆದ ಕೆಲವು ಸತ್ಯ ಘಟನೆಗಳನ್ನು ಆಧರಿಸಿ ‘ವಿರಾಟ ಪರ್ವಂ’ ಸಿನಿಮಾ ಸಿದ್ಧವಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:54 am, Wed, 15 June 22

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್