ವಿಷ್ಣುವರ್ಧನ್ (Vishnuvardhan) ಅಭಿಮಾನಿ ಸಂಘದ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಇಂದು ಫಿಲಂ ಚೇಂಬರ್ನಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು. ವಿಷ್ಣುವರ್ಧನ್ ಅಂಥಹಾ ಮೇರು ನಟನಿಗೆ ಅವಮಾನ ಆಗಿದೆ ಆದರೆ ಫಿಲಂ ಚೇಂಬರ್ ಈ ಬಗ್ಗೆ ವಹಿಸಿರುವ ಮೌನವನ್ನು ಅವರು ಪ್ರಶ್ನೆ ಮಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ವೀರಕಪುತ್ರ ಶ್ರೀನಿವಾಸ್, ‘ವಿಷ್ಣುವರ್ಧನ್ ಅಭಿಮಾನಿಗಳು ಕನ್ನಡದ ಎಲ್ಲ ಸ್ಟಾರ್ ನಟರ ಮನೆಗಳ ಎದುರು ಧರಣಿ ಮಾಡಲಿದ್ದೇವೆ’ ಎಂದು ಹೇಳಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ