Sign In

By signing in or creating an account, you agree with Associated Broadcasting Company's Terms & Conditions and Privacy Policy.

The Vaccine War: ಸಪ್ತಮಿ ಗೌಡ ನಟನೆಯ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರಕ್ಕೆ ಆರಂಭದಲ್ಲೇ ಹಿನ್ನಡೆ

2020 ಹಾಗೂ 2021ರಲ್ಲಿ ಭಾರತ ಕೊವಿಡ್ ವಿರುದ್ಧ ಹೋರಾಡಿದೆ. ಕೊರೊನಾ ಲಸಿಕೆ ಉತ್ಪಾದನೆಯಲ್ಲಿ ಭಾರತ ಮಹತ್ವದ ಪಾತ್ರವಹಿಸಿತ್ತು. ಇದನ್ನು ಮುಖ್ಯವಾಗಿಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್​’ ಸಿನಿಮಾ ಸಿದ್ಧಗೊಳ್ಳುತ್ತಿದೆ.

The Vaccine War: ಸಪ್ತಮಿ ಗೌಡ ನಟನೆಯ ‘ದಿ ವ್ಯಾಕ್ಸಿನ್​ ವಾರ್​’ ಚಿತ್ರಕ್ಕೆ ಆರಂಭದಲ್ಲೇ ಹಿನ್ನಡೆ
ವಿವೇಕ್​ ಅಗ್ನಿಹೋತ್ರಿ-ಸಪ್ತಮಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 17, 2023 | 9:58 AM

ವಿವೇಕ್ ಅಗ್ನಿಹೋತ್ರಿ (Vivek Agnihotri) ನಟನೆಯ ‘ದಿ ವ್ಯಾಕ್ಸಿನ್ ವಾರ್​’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಚಿತ್ರಕ್ಕೆ ಇತ್ತೀಚೆಗೆ ನಾಯಕಿ ಆಗಿ ಸಪ್ತಮಿ ಗೌಡ ಆಯ್ಕೆ ಆಗಿದ್ದಾರೆ. ಈಗ ಈ ಚಿತ್ರಕ್ಕೆ ಆರಂಭದಲ್ಲೇ ಹಿನ್ನಡೆ ಆಗಿದೆ. ಈ ಸಿನಿಮಾದಲ್ಲಿ ನಟಿಸುತ್ತಿರುವ ವಿವೇಕ್ ಅಗ್ನಿಹೋತ್ರಿ ಪತ್ನಿ, ನಟಿ ಪಲ್ಲವಿ ಜೋಶಿಗೆ (Pallavi Joshi Accident) ಗಾಯವಾಗಿದೆ. ಸೆಟ್​​ನಲ್ಲಿ ನಡೆದ ಅವಘಡದಲ್ಲಿ ಪಲ್ಲವಿ ಗಾಯಗೊಂಡಿದ್ದಾರೆ ಎಂದು ವರದಿ ಆಗಿದೆ.

2020 ಹಾಗೂ 2021ರಲ್ಲಿ ಭಾರತ ಕೊವಿಡ್ ವಿರುದ್ಧ ಹೋರಾಡಿದೆ. ಕೊರೊನಾ ಲಸಿಕೆ ಉತ್ಪಾದನೆಯಲ್ಲಿ ಭಾರತ ಮಹತ್ವದ ಪಾತ್ರವಹಿಸಿತ್ತು. ಇದನ್ನು ಮುಖ್ಯವಾಗಿಟ್ಟುಕೊಂಡು ‘ದಿ ವ್ಯಾಕ್ಸಿನ್ ವಾರ್​’ ಸಿನಿಮಾ ಸಿದ್ಧಗೊಳ್ಳುತ್ತಿದೆ. ಪಲ್ಲವಿ ಜೋಶಿ ಅವರು ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ಸೆಟ್​ಗೆ ತೆರಳಿದ್ದರು. ಆಗ ವಾಹನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಒಳಗಾಗಿದೆ. ಈ ವೇಳೆ ಅವರಿಗೆ ಗಾಯಗಳಾಗಿವೆ. ನಂತರ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ. ದೊಡ್ಡಮಟ್ಟದ ಹಾನಿ ಉಂಟಾಗಿಲ್ಲ ಎಂದು ತಂಡ ನಿಟ್ಟುಸಿರು ಬಿಟ್ಟಿದೆ.

ಇದನ್ನೂ ಓದಿ:  ಹೆಡ್​ಲೈನ್​ ಓದಿ ಯಾಮಾರಿದ ವಿವೇಕ್​ ಅಗ್ನಿಹೋತ್ರಿ; ‘ಕಾಂತಾರ’ ಬಗ್ಗೆ ಅನುರಾಗ್​ ಕಶ್ಯಪ್ ಹೇಳಿದ್ದೇ ಬೇರೆ

ಇದನ್ನೂ ಓದಿ
Image
ಸೀಕ್ರೇಟ್​ ಆಗಿ ಮತ್ತೊಂದು ಸಿನಿಮಾ ಶೂಟಿಂಗ್ ಮುಗಿಸಿದ ‘ದಿ ಕಾಶ್ಮೀರ್​ ಫೈಲ್ಸ್​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ
Image
‘ದಿ ಕಾಶ್ಮೀರ್​ ಫೈಲ್ಸ್​​’ ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಪತ್ನಿ ಪಲ್ಲವಿ ಜೋಶಿ ಹಿನ್ನೆಲೆ ಏನು? ಇಲ್ಲಿದೆ ಅವರ ಲವ್​ಸ್ಟೋರಿ
Image
‘ದಿ ಕಾಶ್ಮೀರ್​ ಫೈಲ್ಸ್​’ ಮಾತ್ರವಲ್ಲ, ನಿರ್ದೇಶಕ ವಿವೇಕ್​ ಅಗ್ನಿಹೋತ್ರಿ ಅವರ ಇತರೆ ಚಿತ್ರಗಳ ಬಗ್ಗೆ ನಿಮಗೆ ಗೊತ್ತಾ?
Image
ವಿವೇಕ್​ ಅಗ್ನಿಹೋತ್ರಿ ಹಿನ್ನೆಲೆ ಏನು? ‘ದಿ ಕಾಶ್ಮೀರ್​ ಫೈಲ್ಸ್​’ ಚಿತ್ರದ ನಿರ್ದೇಶಕರ ಬಗ್ಗೆ ಇಲ್ಲಿದೆ ಮಾಹಿತಿ..

‘ದಿ ವ್ಯಾಕ್ಸಿನ್ ವಾರ್​’ ಸಿನಿಮಾ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇದಕ್ಕೆ ಕಾರಣ ‘ದಿ ಕಾಶ್ಮೀರ್ ಫೈಲ್ಸ್​’ ಸಿನಿಮಾದಿಂದ ವಿವೇಕ್​ ಅಗ್ನಿಹೋತ್ರಿಗೆ ಸಿಕ್ಕ ಜನಪ್ರಿಯತೆ. ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ 250 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ.  ಹೀಗಾಗಿ ಮುಂದಿನ ಸಿನಿಮಾ ಬಗ್ಗೆ ನಿರೀಕ್ಷೆ ಇದೆ.

ಪ್ರಮುಖ ಪಾತ್ರದಲ್ಲಿ ಸಪ್ತಮಿ ಗೌಡ

ನಟಿ ಸಪ್ತಮಿ ಗೌಡ ಅವರು ‘ಪಾಪ್​ಕಾರ್ನ್ ಮಂಕಿ ಟೈಗರ್​’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. ‘ಕಾಂತಾರ’ ಅವರ ಎರಡನೇ ಸಿನಿಮಾ. ಈ ಚಿತ್ರದಿಂದ ಅವರು ಪ್ಯಾನ್ ಇಂಡಿಯಾ ನಾಯಕಿ ಆಗಿ ಮಿಂಚಿದರು. ಹೀಗಾಗಿ, ಪರಭಾಷೆಗಳಿಂದ ಅವರಿಗೆ ಆಫರ್ ಬರುತ್ತಿದೆ. ಈಗ ಅವರು ‘ದಿ ವ್ಯಾಕ್ಸಿನ್ ವಾರ್​’ ಚಿತ್ರಕ್ಕೆ ನಾಯಕಿ ಆಗಿದ್ದಾರೆ. ಅವರ ಪಾತ್ರ ಹೇಗಿದೆ ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:16 am, Tue, 17 January 23

ಶಿವರಾತ್ರಿಯ ಆಚರಣೆಯ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
ಶಿವರಾತ್ರಿಯ ಆಚರಣೆಯ ಮಹತ್ವ ಹಾಗೂ ಇದರ ಹಿಂದಿನ ರಹಸ್ಯ ತಿಳಿಯಿರಿ
Maha Shivratri Daily Horoscope: ಮಹಾಶಿವರಾತ್ರಿ, ಈ ದಿನದ ರಾಶಿ ಭವಿಷ್ಯ
Maha Shivratri Daily Horoscope: ಮಹಾಶಿವರಾತ್ರಿ, ಈ ದಿನದ ರಾಶಿ ಭವಿಷ್ಯ
ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಮುಂಬೈನ ಮಂತ್ರಾಲಯದ 7ನೇ ಮಹಡಿಯಿಂದ ಹಾರಿದ ವ್ಯಕ್ತಿ; ವಿಡಿಯೋ ವೈರಲ್
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎಲ್ಲರೂ ಇಂಥ ಮನಸ್ಥಿತಿ ಹೊಂದಿದ್ದರೆ ತಂಟೆ-ತಗಾದೆ ಸೃಷ್ಟಿಯಾಗಲಾರವು
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​