AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivek Passes Away: ಚಿಕಿತ್ಸೆ ಫಲಕಾರಿಯಾಗದೆ ತಮಿಳು ನಟ ವಿವೇಕ್​ ನಿಧನ

Vivekh Death News: ನಿನ್ನೆ ಹೃದಯ ನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ನಟ ವಿವೇಕ್​ ಅವರನ್ನು ತುರ್ತು ಚಿಕಿತ್ಸೆಗಾಗಿ ಐಸಿಯುಗೆ ಸೇರಿಸಲಾಗಿತ್ತು. ಆದರೆ, ಇಂದು ಮುಂಜಾನೆ 4.35ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

Vivek Passes Away: ಚಿಕಿತ್ಸೆ ಫಲಕಾರಿಯಾಗದೆ ತಮಿಳು ನಟ ವಿವೇಕ್​ ನಿಧನ
ನಟ ವಿವೇಕ್​
Follow us
Skanda
|

Updated on:Apr 17, 2021 | 7:19 AM

ಚೆನ್ನೈ: ಹೃದಯ ಸಂಬಂಧಿ ತೊಂದರೆಗೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ತಮಿಳಿನ ಖ್ಯಾತ ನಟ ವಿವೇಕ್​​ ಚೆನ್ನೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆ ಹಾಗೂ ಸ್ಟಂಟ್ ಅಳವಡಿಕೆಗಾಗಿ ವಡಪಳನಿಯಲ್ಲಿರುವ ಎಸ್​ಐಎಂಎಸ್​ ಆಸ್ಪತ್ರೆಗೆ ದಾಖಲಾಗಿದ್ದ 59 ವರ್ಷದ ನಟ, ಇಂದು (ಏಪ್ರಿಲ್​ 17) ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ನಿನ್ನೆ ಹೃದಯ ನಾಳದಲ್ಲಿ ರಕ್ತ ಸಂಚಾರದಲ್ಲಿ ತೊಂದರೆಯಾದ ಕಾರಣ ಅವರನ್ನು ತುರ್ತು ಚಿಕಿತ್ಸೆಗಾಗಿ ಐಸಿಯುಗೆ ಸೇರಿಸಲಾಗಿತ್ತು. ಆದರೆ, ಇಂದು ಮುಂಜಾನೆ 4.35ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ಆಸ್ಪತ್ರೆಯ ವರದಿ ತಿಳಿಸಿದೆ.

ನಿನ್ನೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ವಿವೇಕ್​ ಅವರನ್ನು ಶುಕ್ರವಾರ 11 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರವಷ್ಟೇ ವಿವೇಕ್​ ಕೊರೊನಾ ಲಸಿಕೆ ತೆಗೆದುಕೊಂಡಿದ್ದರಾದ್ದರಿಂದ ಆರಂಭದಲ್ಲಿ ಅವರಿಗೆ ಕೊರೊನಾ ಲಸಿಕೆಯೇ ತೊಂದರೆ ಆಗಿರಬಹುದೆಂಬ ಭಯ ಕಾಡಿತ್ತಾದರೂ ಅದನ್ನು ಅಲ್ಲಗಳೆದಿರುವ ವೈದ್ಯರು ಕೊರೊನಾ ಲಸಿಕೆಗೂ ಅವರ ಅನಾರೋಗ್ಯಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ.

ಇಷ್ಟು ವರ್ಷಗಳಲ್ಲಿ ಈ ತೆರನಾದ ಹೃದಯ ಸಂಬಂಧಿ ಸಮಸ್ಯೆಗೆ ವಿವೇಕ್​ ಎಂದೂ ಒಳಗಾಗಿರಲಿಲ್ಲ. ಇದೇ ಮೊದಲ ಬಾರಿಗೆ ಈ ಕಾರಣಕ್ಕಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ರಕ್ತದೊತ್ತಡದಲ್ಲಿ ಕೊಂಚ ಏರುಪೇರಾಗಿತ್ತು ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಅವರಿಗೆ ಸೂಕ್ತ ಪರೀಕ್ಷೆ ನಡೆಸಲಾಗಿದ್ದು ಅದರ ವರದಿಯಲ್ಲಿ ಕೊರೊನಾ ಸೋಂಕು ಅಥವಾ ಲಕ್ಷಣಗಳೇನೂ ಕಾಣಿಸಿಕೊಂಡಿಲ್ಲ ಎಂಬುದನ್ನೂ ಸ್ಪಷ್ಟಪಡಿಸಿದ್ದಾರೆ.

ಗುರುವಾರವಷ್ಟೇ ತಮಿಳುನಾಡು ರಾಜ್ಯ ಸರ್ಕಾರದ ವತಿಯಿಂದ ಆರೋಗ್ಯದ ಕುರಿತಾಗಿ ಸಾಮಾಜಿಕ ಜಾಗೃತಿ ಮೂಡಿಸಲು ವಿವೇಕ್​ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿತ್ತು. ಅದರಂತೆಯೇ ಜನರಿಗೆ ಕೊರೊನಾ ಲಸಿಕೆ ತೆಗೆದುಕೊಳ್ಳಲು ಪ್ರೇರೇಪಿಸಿದ ಅವರು ತಮಿಳುನಾಡಿನ ಸರ್ಕಾರಿ ಮಲ್ಟಿ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕೊವ್ಯಾಕ್ಸಿನ್​ ಲಸಿಕೆ ಸ್ವೀಕರಿಸಿದ್ದರು.

ಇದನ್ನೂ ಓದಿ: ಕೊವಿಡ್​ ಲಸಿಕೆ ಪಡೆದ ಮರುದಿನವೇ ನಟ ವಿವೇಕ್​ಗೆ ಹೃದಯಾಘಾತ! ಆಸ್ಪತ್ರೆಗೆ ದಾಖಲು

Published On - 6:46 am, Sat, 17 April 21

ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ