‘ಎದ್ದೇಳಿ ಶಂಕರ್’; ‘ಗೇಮ್ ಚೇಂಜರ್’ ಬಗ್ಗೆ ಅಪ್​ಡೇಟ್ ನೀಡದ ನಿರ್ದೇಶಕನ ಬಗ್ಗೆ ಫ್ಯಾನ್ಸ್ ಟೀಕೆ

‘ಗೇಮ್ ಚೇಂಜರ್’ ಮೂಲಕ ಟಾಲಿವುಡ್​ಗೆ ಕಾಲಿಡಲು ಶಂಕರ್ ರೆಡಿ ಆಗಿದ್ದಾರೆ. ಈ ಸಿನಿಮಾ ಸೆಟ್ಟೇರಿದ್ದು 2021ರಲ್ಲಿ. ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಹೊರತುಪಡಿಸಿ ಮತ್ತಾವುದೇ ಅಪ್​ಡೇಟ್ ಸಿಕ್ಕಿಲ್ಲ. ಇದರಿಂದ ಫ್ಯಾನ್ಸ್ ಸಿಟ್ಟಾಗಿದ್ದಾರೆ. WakeUpShankar ಹ್ಯಾಶ್​​ಟ್ಯಾಗ್ ವೈರಲ್ ಆಗಿದೆ.

‘ಎದ್ದೇಳಿ ಶಂಕರ್’; ‘ಗೇಮ್ ಚೇಂಜರ್’ ಬಗ್ಗೆ ಅಪ್​ಡೇಟ್ ನೀಡದ ನಿರ್ದೇಶಕನ ಬಗ್ಗೆ ಫ್ಯಾನ್ಸ್ ಟೀಕೆ
ಕಿಯಾರಾ-ರಾಮ್ ಚರಣ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Jan 31, 2024 | 1:17 PM

ನಿರ್ದೇಶಕ ಶಂಕರ್ (Shankar) ಅವರ ಕಸುಬುದಾರಿಕೆ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಅವರ ನಿರ್ದೇಶನದ ಸಿನಿಮಾಗಳು ಭಿನ್ನವಾಗಿರುತ್ತವೆ. ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತಿ ಅವರಿಗೆ ಇದೆ. ಅವರ ವಿಷನ್ ಅನೇಕರಿಗೆ ಇಷ್ಟ ಆಗುತ್ತದೆ. ರಜನಿಕಾಂತ್, ಕಮಲ್ ಹಾಸನ್ ಅವರು ಶಂಕರ್​ಗಾಗಿ ಬೇರೆ ಸಿನಿಮಾ ಕೈಬಿಟ್ಟ ಉದಾಹರಣೆ ಇದೆ. ಇಂಥ ನಿರ್ದೇಶಕರು ತಮ್ಮ ನೆಚ್ಚಿನ ನಟನ ಜೊತೆ ಕೈ ಜೋಡಿಸಿದ್ದರಿಂದ ರಾಮ್ ಚರಣ್ ಫ್ಯಾನ್ಸ್ ಸಹಜವಾಗಿಯೇ ಖುಷಿ ಆಗಿದ್ದರು. ಆದರೆ, ಈಗ ಶಂಕರ್ ಅವರನ್ನು ಸ್ವತಃ ರಾಮ್ ಚರಣ್ ಫ್ಯಾನ್ಸ್ ಟ್ರೋಲ್ ಮಾಡುತ್ತಿದ್ದಾರೆ. ರಾಮ್ ಚರಣ್ ಸಿನಿಮಾ ‘ಗೇಮ್ ಚೇಂಜರ್’ ಬಗ್ಗೆ ಅಪ್​ಡೇಟ್​ ನೀಡದ ಅವರನ್ನು ಟೀಕಿಸಲಾಗುತ್ತಿದೆ.

ಶಂಕರ್ ಅವರು ತಮಿಳು ಸಿನಿಮಾಗಳನ್ನು ಮಾಡಿ ಫೇಮಸ್ ಆದವರು. ‘ಗೇಮ್ ಚೇಂಜರ್’ ಮೂಲಕ ಟಾಲಿವುಡ್​ಗೆ ಕಾಲಿಡುತ್ತಿದ್ದಾರೆ. ಈ ಸಿನಿಮಾ ಸೆಟ್ಟೇರಿದ್ದು 2021ರಲ್ಲಿ. ಅಂದರೆ ಈ ಚಿತ್ರ ಆರಂಭ ಆಗಿ ಮೂರು ವರ್ಷ ಕಳೆಯುತ್ತಾ ಬಂದಿದೆ. ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು ಹೊರತುಪಡಿಸಿ ಮತ್ತಾವುದೇ ಅಪ್​ಡೇಟ್ ಸಿಕ್ಕಿಲ್ಲ. ಇದರಿಂದ ಫ್ಯಾನ್ಸ್ ಅಸಮಾಧಾನಗೊಂಡಿದ್ದಾರೆ.

ಫೆಬ್ರವರಿಯಲ್ಲಿ ‘ಗೇಮ್ ಚೇಂಜರ್’ ಚಿತ್ರದ ಕೊನೆಯ ಹಂತದ ಶೂಟಿಂಗ್ ಇದೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಒಂದು ಚಿತ್ರಕ್ಕಾಗಿ ಇಷ್ಟೊಂದು ವರ್ಷ ಮುಡಿಪಿಟ್ಟರೆ ಹೇಗೆ ಎಂಬುದು ರಾಮ್ ಚರಣ್ ಅಭಿಮಾನಿಗಳ ಪ್ರಶ್ನೆ. ಸಿನಿಮಾ ಕೆಲಸ ವಿಳಂಬ ಮಾಡಿದ ಶಂಕರ್ ಅವರನ್ನು ಟ್ರೋಲ್ ಮಾಡಲಾಗುತ್ತಿದೆ.

ಈ ವಿಚಾರದಲ್ಲಿ ಶಂಕರ್ ಅವರು ತಪ್ಪೇ ಇಲ್ಲ ಎಂದು ಹೇಳಲು ಸಾಧ್ಯವಿಲ್ಲ. ಈ ಸಿನಿಮಾದಿಂದ ಒಂದು ಪೋಸ್ಟರ್ ರಿಲೀಸ್ ಆಗಿದ್ದು ಬಿಟ್ಟರೆ ಮತ್ಯಾವುದೇ ಅಪ್​ಡೇಟ್​ ಸಿಕ್ಕಿಲ್ಲ. ದೀಪಾವಳಿ ಸಂದರ್ಭದಲ್ಲಿ ಸಾಂಗ್ ರಿಲೀಸ್ ಆಗಬೇಕಿತ್ತು. ಆದರೆ, ಅದನ್ನು ತಂಡ ಮಾಡಿಲ್ಲ. ಮುಂದಿನ ದಿನಗಳಲ್ಲಿ ಸಾಂಗ್ ರಿಲೀಸ್ ಆಗಬಹುದು ಎಂದು ಫ್ಯಾನ್ಸ್ ಭಾವಿಸಿದ್ದರೂ ಅದೂ ಆಗಲಿಲ್ಲ. ಇದು ರಾಮ್ ಚರಣ್ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ಶಿವರಾಜ್ ಕುಮಾರ್-ರಾಮ್ ಚರಣ್ ಸಿನಿಮಾಕ್ಕೆ ಎಆರ್ ರೆಹಮಾನ್ ಸಂಗೀತ

ಸದ್ಯ ಟ್ವಿಟರ್​ನಲ್ಲಿ ‘WakeUpShankar’ ಹ್ಯಾಶ್​ಟ್ಯಾಗ್ ವೈರಲ್ ಮಾಡಲಾಗುತ್ತಿದೆ. ಶಂಕರ್ ಅವರ ಕುರಿತು ಟೀಕೆ ಮಾಡಿ ಪೋಸ್ಟ್ ಮಾಡಲಾಗುತ್ತಿದೆ. ರಾಮ್ ಚರಣ್ ನಟನೆಯ ಈ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ ಪಾತ್ರ ಮಾಡುತ್ತಿದ್ದಾರೆ. ‘ಗೇಮ್ ಚೇಂಜರ್’ ಜೊತೆ ಜೊತೆಗೆ ತಮಿಳಿನಲ್ಲಿ ಕಮಲ್ ಹಾಸನ್ ನಟನೆಯ ‘ಇಂಡಿಯನ್ 2’ ಸಿನಿಮಾ ಕೆಲಸಗಳಲ್ಲೂ ಅವರು ಬ್ಯುಸಿ ಇದ್ದಾರೆ. ಈ ಚಿತ್ರ ಕೂಡ ಸೆಟ್ಟೇರಿ ನಾಲ್ಕು ವರ್ಷಗಳ ಮೇಲಾಗಿದೆ. ಹೀಗಾಗಿ ಕಮಲ್ ಹಾಸನ್ ಅಭಿಮಾನಿಗಳು ಕೂಡ ಶಂಕರ್​ ಅವರನ್ನು ಪ್ರಶ್ನೆ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:16 pm, Wed, 31 January 24

ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಕಾನ್ಪುರದಲ್ಲಿ ಸ್ಕೂಟರ್ ಸವಾರಿ ಮಾಡುತ್ತಿದ್ದ ಮಹಿಳೆಗೆ ಕಚ್ಚಿದ ಸಾಕು ನಾಯಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಅಕ್ರಮ ಹಣ ವರ್ಗಾವಣೆ ಬಗ್ಗೆ ಎಲ್ಲರೆದುರೇ ಅತ್ತು ಗೋಳಾಡಿದ ಕಾಂಗ್ರೆಸ್ ಶಾಸಕಿ
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಕಾರ್​ ಶೋರೂಂನಲ್ಲಿ ಅಗ್ನಿ ಅವಘಡ, ಸುಟ್ಟು ಭಸ್ಮವಾದ ಹೊಸ ವಾಹನಗಳು
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
ಬಿಗ್ ಬಾಸ್ ಫಿನಾಲೆ ಸಮಯದಲ್ಲಿ ಬದಲಾವಣೆ; ಮಾಹಿತಿ ನೀಡಿದ ವಾಹಿನಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
Daily Devotional: ಮಂಗಳಸೂತ್ರದ ಮಹತ್ವ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಬುಧಗ್ರಹ ಮಕರ ರಾಶಿಗೆ ಪ್ರವೇಶ ಮಾಡುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ಸುದೀಪ್ ಸರ್ ನೋಡಿದ್ರೆ ಭಯ ಆಗುತ್ತೆ: ತೆಲುಗು ಬಿಗ್ ಬಾಸ್ ವಿನ್ನರ್ ಮಾತು
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ
ಬಿಗ್ ಬಾಸ್ ಮನೆಯಲ್ಲಿ ಕೊನೇ ವಾರ ಊಟ ಸೇರಲ್ಲ: ವಿನ್ನರ್ ನಿಖಿಲ್ ಅನುಭವ