AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shruti Haasan: ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಪಪ್ರಚಾರ; ಮಾನಸಿಕ ಕಾಯಿಲೆ ಎಂದವರಿಗೆ ನಟಿ ತಿರುಗೇಟು

Shruti Haasan Mental Health: ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ಹರಡಿರುವ ವದಂತಿಗಳನ್ನು ನೋಡಿ ಶ್ರುತಿ ಹಾಸನ್​ ಅವರಿಗೆ ಬೇಸರ ಆಗಿದೆ. ಆ ಬಗ್ಗೆ ಅವರು ಖಡಕ್​ ತಿರುಗೇಟು ನೀಡಿದ್ದಾರೆ.

Shruti Haasan: ಶ್ರುತಿ ಹಾಸನ್​ ಆರೋಗ್ಯದ ಬಗ್ಗೆ ಅಪಪ್ರಚಾರ; ಮಾನಸಿಕ ಕಾಯಿಲೆ ಎಂದವರಿಗೆ ನಟಿ ತಿರುಗೇಟು
ಶ್ರುತಿ ಹಾಸನ್
TV9 Web
| Edited By: |

Updated on: Jan 13, 2023 | 8:00 AM

Share

ದಕ್ಷಿಣ ಭಾರತದ ಖ್ಯಾತ ನಟಿ ಶ್ರುತಿ ಹಾಸನ್​ (Shruti Haasan) ಅವರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಗಾಸಿಪ್​ ಹಬ್ಬಿಸಲಾಗಿದೆ. ಅವರ ಮಾನಸಿಕ ಆರೋಗ್ಯ (Mental Health) ಸರಿ ಇಲ್ಲ ಎಂಬ ಗಾಳಿ ಸುದ್ದಿ ಹರಡಿದೆ. ಇದು ಶ್ರುತಿ ಹಾಸನ್​ ಅವರ ಗಮನಕ್ಕೂ ಬಂದಿದೆ. ಅದಕ್ಕೆ ಅವರು ಗರಂ ಆಗಿದ್ದಾರೆ. ಈ ರೀತಿ ಸುದ್ದಿ ಹಬ್ಬಿಸಿದವರಿಗೆ ತಿರುಗೇಟು ನೀಡಿದ್ದಾರೆ. ಅಷ್ಟಕ್ಕೂ ತಮಗೆ ಇರುವ ಆರೋಗ್ಯದ ಸಮಸ್ಯೆ ಏನು ಎಂಬುದನ್ನು ಅವರು ತಿಳಿಸಿದ್ದಾರೆ. ಈ ಕುರಿತು ಅವರು ಮಾಡಿರುವ ಟ್ವೀಟ್​ ವೈರಲ್​ ಆಗಿದೆ. ‘ವಾಲ್ತೇರು ವೀರಯ್ಯ’ (Waltair Veerayya), ‘ವೀರ ಸಿಂಹ ರೆಡ್ಡಿ’ ಸೇರಿದಂತೆ ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಶ್ರುತಿ ಹಾಸನ್​ ನಟಿಸಿದ್ದಾರೆ.

ಈ ವಾರ ಶ್ರುತಿ ಹಾಸನ್​ ಪಾಲಿಗೆ ನಿಜಕ್ಕೂ ಸ್ಪೆಷಲ್​. ಯಾಕೆಂದರೆ ತೆಲುಗಿನಲ್ಲಿ ಅವರ ಎರಡು ಸಿನಿಮಾ ರಿಲೀಸ್​ ಆಗಿವೆ. ಗುರುವಾರ (ಜ.12) ‘ವೀರ ಸಿಂಹ ರೆಡ್ಡಿ’ ತೆರೆಕಂಡರೆ, ಇಂದು (ಜ.13) ‘ವಾಲ್ತೇರು ವೀರಯ್ಯ’ ಚಿತ್ರ ಬಿಡುಗಡೆ ಆಗಿದೆ. ಕೆಲವೇ ದಿನಗಳ ಹಿಂದೆ ‘ವಾಲ್ತೇರು ವೀರಯ್ಯ’ ಸಿನಿಮಾದ ಪ್ರೀ-ರಿಲೀಸ್​ ಇವೆಂಟ್​ ಅದ್ದೂರಿಯಾಗಿ ನಡೆಯಿತು. ಆ ಕಾರ್ಯಕ್ರಮಕ್ಕೆ ಹಾಜರಾಗಲು ಶ್ರುತಿ ಹಾಸನ್​ ಅವರಿಗೆ ಸಾಧ್ಯವಾಗಿಲ್ಲ. ಅದನ್ನೇ ನೆಪವಾಗಿ ಇಟ್ಟುಕೊಂಡು ಗಾಸಿಪ್​ ಹಬ್ಬಿಸಲಾಗಿದೆ.

ಇದನ್ನೂ ಓದಿ
Image
Men’s Health: ಪುರುಷರು ತಮ್ಮ ಮಾನಸಿಕ ಆರೋಗ್ಯದ ಬಗ್ಗೆ ಯಾರಲ್ಲಿಯೂ ಮಾತನಾಡುವುದಿಲ್ಲ ಏಕೆ? ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ
Image
Social Media Addiction: ಅತಿಯಾದ ಮೊಬೈಲ್ ಪೋನ್ ಬಳಕೆ ನಿಮ್ಮ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎಚ್ಚರ
Image
Mental Health: ಹದಿಹರೆಯದವರ ಮಾನಸಿಕ ಆರೋಗ್ಯವನ್ನು ಕಾಪಾಡಲು ಇಲ್ಲಿದೆ ಸೂಕ್ತ ಸಲಹೆ
Image
Mental Health: ಈ ಅಭ್ಯಾಸ ಬದಲಾಯಿಸಿಕೊಳ್ಳದಿದ್ದರೆ ನಿಮ್ಮ ಮಾನಸಿಕ ಆರೋಗ್ಯ ಹಾಳಾಗಬಹುದು

ಇದನ್ನೂ ಓದಿ: Shruti Haasan: ‘ಸಲಾರ್​’ ನಟಿ ಶ್ರುತಿ ಹಾಸನ್​ ಮೂಗಿಗೆ ಪ್ಲಾಸ್ಟಿಕ್​ ಸರ್ಜರಿ ಆಗಿದ್ದು ನಿಜವೇ? ಮತ್ತೆ ಸ್ಪಷ್ಟನೆ ನೀಡಿದ ಕಮಲ್​ ಪುತ್ರಿ

‘ಶ್ರುತಿ ಹಾಸನ್​ ಅವರಿಗೆ ಮಾನಸಿಕ ಆರೋಗ್ಯ ಸರಿ ಇಲ್ಲ. ಅದರ ಪರಿಣಾಮವಾಗಿ ಅವರು ವಾಲ್ತೇರು ವೀರಯ್ಯ ಚಿತ್ರದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಬರಲು ಸಾಧ್ಯವಾಗಿಲ್ಲ’ ಎಂದು ಕೆಲವೆಡೆ ಸುದ್ದಿ ಪ್ರಕಟ ಆಗಿದೆ. ಅದನ್ನು ನೋಡಿ ಶ್ರುತಿ ಹಾಸನ್​ ಅವರಿಗೆ ಬೇಸರ ಆಗಿದೆ. ತಾವು ‘ವಾಲ್ತೇರು ವೀರಯ್ಯ’ ಸಿನಿಮಾದ ಪ್ರೀ-ರಿಲೀಸ್​ ಕಾರ್ಯಕ್ರಮಕ್ಕೆ ಹಾಜರಾಗದೇ ಇರಲು ಜ್ವರ ಕಾರಣ ಎಂದು ಶ್ರುತಿ ಹಾಸನ್​ ಹೇಳಿದ್ದಾರೆ.

ಇದನ್ನೂ ಓದಿ: ‘ನಿಮ್ಮ ತುಟಿಗಳ ಸೈಜ್​ ಏನು’? ಶ್ರುತಿ ಹಾಸನ್​ಗೆ ಪ್ರಶ್ನೆ ಕೇಳಿದ ಭೂಪ; ನಟಿಯಿಂದ ಬಂತು ಪ್ರತಿಕ್ರಿಯೆ

ತಮ್ಮ ಬಗ್ಗೆ ಹರಡಿರುವ ಸುಳ್ಳು ಸುದ್ದಿಯ ಸ್ಕ್ರೀನ್​ ಶಾಟ್​ಗಳನ್ನು ಟ್ವೀಟರ್​ನಲ್ಲಿ ಶ್ರುತಿ ಹಾಸನ್​ ಶೇರ್​ ಮಾಡಿಕೊಂಡಿದ್ದಾರೆ. ‘ಒಳ್ಳೆಯ ಪ್ರಯತ್ನ. ಮೊದಲು ನೀವು ಸರಿಯಾಗಿ. ಮೊದಲು ಡಾಕ್ಟರ್​ ಅನ್ನು ಭೇಟಿ ಮಾಡಿ’ ಎಂದು ಶ್ರುತಿ ಹಾಸನ್​ ಅವರು ವ್ಯಂಗ್ಯವಾಡಿದ್ದಾರೆ.

‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ನಂದಮೂರಿ ಬಾಲಕೃಷ್ಣ ಅವರಿಗೆ ಜೋಡಿಯಾಗಿ ಶ್ರುತಿ ಹಾಸನ್​ ನಟಿಸಿದ್ದಾರೆ. ಗುರುವಾರ ಅದ್ದೂರಿಯಾಗಿ (ಜ.12) ಬಿಡುಗಡೆಯಾದ ಈ ಸಿನಿಮಾ ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಶ್ರುತಿ ಹಾಸನ್​ ಅವರಿಗೆ ಹೆಚ್ಚು ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ. ಅದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್