ವಯನಾಡ್​ ಭೂಕುಸಿತ: 10 ಲಕ್ಷ ರೂಪಾಯಿ ದೇಣಿಗೆ ನೀಡಿದ ರಶ್ಮಿಕಾ ಮಂದಣ್ಣ

ಪ್ಯಾನ್​ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ಜನರ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ. ಕೇರಳದ ವಯನಾಡ್​ ಭೂಕುಸಿತಕ್ಕೆ ಸಿಲುಕಿದ ಸಂತ್ರಸ್ತರಿಗೆ ನೆರವು ನೀಡಲು ರಶ್ಮಿಕಾ ಮುಂದೆ ಬಂದಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಅವರು 10 ಲಕ್ಷ ರೂಪಾಯಿ ದೇಣಿಗೆ ನೀಡಿ ಜನರ ಮೆಚ್ಚುಗೆ ಗಳಿಸಿದ್ದಾರೆ. ನಟಿಯ ಈ ಕೆಲಸಕ್ಕೆ ಅಭಿಮಾನಿಗಳು ಭೇಷ್ ಎಂದಿದ್ದಾರೆ.

ವಯನಾಡ್​ ಭೂಕುಸಿತ: 10 ಲಕ್ಷ ರೂಪಾಯಿ ದೇಣಿಗೆ ನೀಡಿದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ, ರಕ್ಷಣಾ ಕಾರ್ಯ
Follow us
ಮದನ್​ ಕುಮಾರ್​
|

Updated on:Aug 01, 2024 | 8:51 PM

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಊರಿಗೆ ಊರೇ ಸ್ಮಶಾನ ಆಗಿದೆ. ನೂರಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ನಾಪತ್ತೆ ಆಗಿದ್ದಾರೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ. ತಮ್ಮವರನ್ನು ಕಳೆದುಕೊಂಡವರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂದರ್ಭದಲ್ಲಿ ಹಲವು ಸೆಲೆಬ್ರಿಟಿಗಳು ನೆರವಿನ ಹಸ್ತ ಚಾಚಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಕೂಡ ಮಾನವೀಯತೆ ಮೆರೆದಿದ್ದಾರೆ. 10 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ರಶ್ಮಿಕಾ ಮಂದಣ್ಣ ಅವರು ಜನರ ಮೆಚ್ಚುಗೆಗೆ ಪಾತ್ರರರಾಗಿದ್ದಾರೆ.

ಕೆಲವೇ ದಿನಗಳ ಹಿಂದೆ ರಶ್ಮಿಕಾ ಮಂದಣ್ಣ ಅವರು ಕೇರಳಕ್ಕೆ ತೆರಳಿದ್ದರು. ಅಲ್ಲಿನ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಾಗ ಅವರನ್ನು ನೋಡಲು ಸಾವಿರಾರು ಜನರು ಜಮಾಯಿಸಿದ್ದರು. ಕೇರಳದ ಮಂದಿ ತೋರಿಸಿದ ಪ್ರೀತಿ ಕಂಡು ರಶ್ಮಿಕಾ ಫಿದಾ ಆಗಿದ್ದರು. ಆದರೆ ಈಗ ಅದೇ ಕೇರಳದಲ್ಲಿ ಭೀಕರ ಪರಿಸ್ಥಿತಿ ಎದುರಾಗಿದೆ. ಆದ್ದರಿಂದ ರಶ್ಮಿಕಾ ಮಂದಣ್ಣ ಅವರು ತಮ್ಮ ಕೈಲಾದ ಸಹಾಯವನ್ನು ಮಾಡಿದ್ದಾರೆ.

ಇದನ್ನೂ ಓದಿ:  ಸೂಟ್​ಕೇಸ್​ ತುಂಬ ಹಣದ ಕಂತೆ; ಎಲ್ಲವನ್ನೂ ಹೊತ್ತುಕೊಂಡು ಹೋದ ರಶ್ಮಿಕಾ ಮಂದಣ್ಣ

ಕೇರಳದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರಶ್ಮಿಕಾ ಮಂದಣ್ಣ ಅವರು 10 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ನಟಿಯ ಈ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರಿಗೆ ಸಖತ್​ ಬೇಡಿಕೆ ಇದೆ. ಆ ಬೇಡಿಕೆಗೆ ತಕ್ಕಂತೆ ಅವರಿಗೆ ಕೋಟ್ಯಂತರ ರೂಪಾಯಿ ಸಂಭಾವನೆ ಬರುತ್ತದೆ. ಎಲ್ಲ ರಾಜ್ಯಗಳಲ್ಲೂ ರಶ್ಮಿಕಾ ಮಂದಣ್ಣ ಅವರನ್ನು ಇಷ್ಟಪಡುವ ಅಭಿಮಾನಿಗಳು ಇದ್ದಾರೆ.

ಇದನ್ನೂ ಓದಿ: ಹಸಿರು ಸೀರೆ ಧರಿಸಿದ ನಟಿ ರಶ್ಮಿಕಾ ಮಂದಣ್ಣಗೆ ಖುಷಿಯೋ ಖುಷಿ

ಕನ್ನಡ ಚಿತ್ರರಂಗದಿಂದ ಬಣ್ಣದ ಲೋಕಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಅವರು ನಂತರ ಪರಭಾಷೆಯಲ್ಲಿ ನಟಿಸಿದ ಬಳಿಕ ಬೇಡಿಕೆ ಹೆಚ್ಚಿಸಿಕೊಂಡರು. ಮಹೇಶ್​ ಬಾಬು, ವಿಜಯ್ ದೇವರಕೊಂಡ, ದಳಪತಿ ವಿಜಯ್​, ಅಲ್ಲು ಅರ್ಜುನ್​ ಮುಂತಾದ ಸ್ಟಾರ್​ ಹೀರೋಗಳ ಜೊತೆ ಅಭಿನಯಿಸಿ ಯಶಸ್ಸು ಕಂಡರು. ನಂತರ ಬಾಲಿವುಡ್​ಗೂ ಕಾಲಿಟ್ಟ ರಶ್ಮಿಕಾ ಅವರಿಗೆ ‘ಅನಿಮಲ್​’ ಸಿನಿಮಾ ಬಹುದೊಡ್ಡ ಗೆಲುವು ತಂದುಕೊಟ್ಟಿತು. ಸಿನಿಮಾ ಮಾತ್ರವಲ್ಲದೇ ಸಮಾಜಮುಖಿ ಕಾರ್ಯಗಳ ಮೂಲಕವೂ ರಶ್ಮಿಕಾ ಅವರು ಜನರಿಗೆ ಹತ್ತಿರ ಆಗಿದ್ದಾರೆ. ಕೇರಳದ ಭೂಕುಸಿತ ಸಂತ್ರಸ್ತರ ನೆರವಿಗಾಗಿ ಅವರು 10 ಲಕ್ಷ ರೂಪಾಯಿ ದೇಣಿಗೆ ನೀಡಿರುವುದೇ ಇದಕ್ಕೆ ಲೇಟೆಸ್ಟ್​ ಉದಾಹರಣೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:51 pm, Thu, 1 August 24

ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ