ಆರ್​. ಅಶ್ವಿನ್ ಬಯೋಪಿಕ್ ಮಾಡಲು ನಡೆದಿತ್ತು ತಯಾರಿ? ಆ ಸಿನಿಮಾ ಸೆಟ್ಟೇರಲಿಲ್ಲವೇಕೆ?

Ravichandran Ashwin Retirement: ರವಿಚಂದ್ರನ್ ಅಶ್ವಿನ್ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ನಿವೃತ್ತಿಯು ಸುದ್ದಿಯಾಗಿದೆ. 14 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದ ನಂತರ ನಿವೃತ್ತಿ ಘೋಷಿಸಿದ್ದಾರೆ. ಅವರ ಬಯೋಪಿಕ್ ಬಗ್ಗೆ 2021ರಲ್ಲಿ ವದಂತಿಗಳು ಹಬ್ಬಿದ್ದವು, ಅಶೋಕ್ ಸೆಲ್ವನ್ ನಟಿಸುವ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆದಿತ್ತು.

ಆರ್​. ಅಶ್ವಿನ್ ಬಯೋಪಿಕ್ ಮಾಡಲು ನಡೆದಿತ್ತು ತಯಾರಿ? ಆ ಸಿನಿಮಾ ಸೆಟ್ಟೇರಲಿಲ್ಲವೇಕೆ?
ಅಶೋಕ್ ಸೆಲ್ವನ್-ಆರ್​. ಅಶ್ವಿನ್
Follow us
ರಾಜೇಶ್ ದುಗ್ಗುಮನೆ
|

Updated on:Dec 18, 2024 | 2:27 PM

ಟೀಂ ಇಂಡಿಯಾ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ  ಇಂದು (ಡಿಸೆಂಬರ್ 18) ನಿವೃತ್ತಿ ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತೆರಳಿದ್ದ ಅವರು, ಸರಣಿಯಲ್ಲಿ ಎರಡು ಪಂದ್ಯ ಬಾಕಿ ಇರುವಾಗಲೇ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿದೆ. ಈ ಮಧ್ಯೆ ಅವರ ಬಯೋಪಿಕ್ ವಿಚಾರ ಚರ್ಚೆಗೆ ಬಂದಿದೆ. ಅಶ್ವಿನ್ ಬಗ್ಗೆ ಬಯೋಪಿಕ್ ಮಾಡಲು ಸಿದ್ಧತೆ ನಡೆದಿತ್ತಾ? ಹೀಗೊಂದು ಚರ್ಚೆ 2021ರಲ್ಲಿ ನಡೆದಿತ್ತು. ಆ ಬಗ್ಗೆ ಇಲ್ಲಿದೆ ವಿವರ.

ಕ್ರಿಕೆಟರ್​ಗಳು, ರಾಜಕಾರಣಿಗಳು, ಸ್ವಾಂತಂತ್ರ್ಯ ಹೋರಾಟಗಾರರು ಸೇರಿದಂತೆ ಅನೇಕ ಗಣ್ಯರ ಮೇಲೆ ಬಯೋಪಿಕ್ ಮಾಡುವ ಟ್ರೆಂಡ್ ಜೋರಾಗಿದೆ. ಕ್ರಿಕೆಟರ್​ಗಳಾದ ಎಂಎಸ್ ಧೋನಿ, ಮುತ್ತಯ್ಯ ಮುರಳೀಧರನ್ ಸೇರಿದಂತೆ ಅನೇಕ ಕ್ರಿಕೆಟರ್​ಗಳ ಮೇಲೆ ಬಯೋಪಿಕ್ ಮಾಡಲಾಗಿದೆ. 2021ರಲ್ಲೂ ಆರ್. ಅಶ್ವಿನ್ ಮೇಲೆ ಬಯೋಪಿಕ್ ಮಾಡಲಾಗುತ್ತದೆ ಎಂದು ವರದಿ ಆಗಿತ್ತು. ಅಶ್ವಿನ್ ಜೊತೆ ಧೋನಿ ಪಾತ್ರವೂ ಇದರಲ್ಲಿ ಹೈಲೈಟ್ ಆಗಲಿದೆ ಎಂದು ಹೇಳಲಾಗಿತ್ತು.

ಇದು ವದಂತಿ ಮಾತ್ರ..

ನಟ ಅಶೋಕ್ ಸೆಲ್ವನ್ ಅವರು ತಮಿಳು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇವರು ಆರ್​.ಅಶ್ವಿನ್ ಬಯೋಪಿಕ್​ನಲ್ಲಿ ನಟಿಸುತ್ತಾರೆ ಎಂದು ವರದಿ ಆಗಿತ್ತು. ಇಷ್ಟೇ ಅಲ್ಲ ಕೆಲವರು ಅಶೋಕ್ ಸೆಲ್ವನ್ ಫೋಟೋಗೆ ಇಂಡಿಯನ್ ಜೆರ್ಸಿ ಹಾಕಿರುವ ಫೋಟೋನ ಹರಿಬಿಟ್ಟಿದ್ದರು. ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಈ ವದಂತತಿ ಬಗ್ಗೆ ಅಶೋಕ್ ಸೆಲ್ವನ್ ಸ್ಪಷ್ಟನೆ ಕೊಟ್ಟಿದ್ದರು. ‘ನಾನು ಇದಕ್ಕೆ ಜವಾಬ್ದಾರನಲ್ಲ’ ಎಂದಿದ್ದರು. ಈ ಮೂಲಕ ಅಶೋಕ್ ಈ ವದಂತಿಗೆ ಸ್ಪಷ್ಟನೆ ನೀಡಿದ್ದರು. ಈ ಟ್ವೀಟ್​ಗೆ ಅಶ್ವಿನ್ ಕೂಡ ಉತ್ತರಿಸಿ ನಕ್ಕಿದ್ದರು. ಈ ವಿಚಾರ ಕೇಳಿ ಅಶ್ವಿನ್ ಫ್ಯಾನ್ಸ್ ಬೇಸರಗೊಂಡಿದ್ದರು.

ಇದನ್ನೂ ಓದಿ: ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್

ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಜರ್ನಿಯಲ್ಲಿ 14 ವರ್ಷ ಕಳೆದಿದ್ದಾರೆ. ಎರಡು ಟೆಸ್ಟ್​ಗಳು ಬಾಕಿ ಇರುವಾಗಲೇ ರೋಹಿತ್ ಶರ್ಮಾ ಜೊತೆ ಸುದ್ದಿಗೋಷ್ಠಿಗೆ ಆಗಮಿಸಿದ ಅಶ್ವಿನ್ ಅವರು ನಿವೃತ್ತಿ ಘೋಷಣೆ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:24 pm, Wed, 18 December 24

ಉತ್ತರ ಕರ್ನಾಟಕದ ಭವ್ಯ ಪರಂಪರೆಯನ್ನು ಸದನದಲ್ಲಿ ವಿವರಿಸಿದ ಯತ್ನಾಳ್
ಉತ್ತರ ಕರ್ನಾಟಕದ ಭವ್ಯ ಪರಂಪರೆಯನ್ನು ಸದನದಲ್ಲಿ ವಿವರಿಸಿದ ಯತ್ನಾಳ್
ಬಿಳಿಗಿರಿರಂಗನಬೆಟ್ಟ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು, ಹುಲಿ ಪ್ರತ್ಯಕ್ಷ
ಬಿಳಿಗಿರಿರಂಗನಬೆಟ್ಟ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು, ಹುಲಿ ಪ್ರತ್ಯಕ್ಷ
ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್
ನಿವೃತ್ತಿ ಘೋಷಣೆಗೂ ಮುನ್ನ ವಿರಾಟ್ ಕೊಹ್ಲಿ ಮುಂದೆ ಕಣ್ಣೀರಿಟ್ಟ ಅಶ್ವಿನ್
ಸರ್ಕಾರೀ ಆಸ್ಪತ್ರೆಗಳ ವಿಷಯದಲ್ಲಿ ನೆಗೆಟಿವ್ ಮಾತು ಸರಿಯಲ್ಲ: ಕೋನರೆಡ್ಡಿ
ಸರ್ಕಾರೀ ಆಸ್ಪತ್ರೆಗಳ ವಿಷಯದಲ್ಲಿ ನೆಗೆಟಿವ್ ಮಾತು ಸರಿಯಲ್ಲ: ಕೋನರೆಡ್ಡಿ
ಕಣ್ಣೀರು ಅದುಮಿಟ್ಟು ನಿವೃತ್ತಿ ಘೋಷಿಸಿದ ಅಶ್ವಿನ್
ಕಣ್ಣೀರು ಅದುಮಿಟ್ಟು ನಿವೃತ್ತಿ ಘೋಷಿಸಿದ ಅಶ್ವಿನ್
ಹೆಡ್ ಔಟ್ ಮಾಡಿದ ಸಿರಾಜ್: ತೊಲಗು ಎಂದು ಸಂಭ್ರಮಿಸಿದ ಪುಟ್ಟ ಅಭಿಮಾನಿ
ಹೆಡ್ ಔಟ್ ಮಾಡಿದ ಸಿರಾಜ್: ತೊಲಗು ಎಂದು ಸಂಭ್ರಮಿಸಿದ ಪುಟ್ಟ ಅಭಿಮಾನಿ
ಮಾಧ್ಯಮ ವರದಿಗಳ ನಂತರವೇ ಮೇಲಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೇ?
ಮಾಧ್ಯಮ ವರದಿಗಳ ನಂತರವೇ ಮೇಲಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೇ?
ಉತ್ತರ ಪ್ರದೇಶ: ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ
ಉತ್ತರ ಪ್ರದೇಶ: ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ
Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​
Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​
ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ
ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ