AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

What India Thinks Today: ಟಿವಿ9ನಲ್ಲಿ ತಮ್ಮ ಜೀವನದ ಸಿಹಿ-ಕಹಿ ಕ್ಷಣಗಳನ್ನು ಹಂಚಿಕೊಳ್ಳಲಿರುವ ನಟಿ ರವೀನಾ ಟಂಡನ್

ಮೊಟ್ಟ ಮೊದಲ ಬಾರಿಗೆ ಮಾಧ್ಯಮ ಲೋಕದಲ್ಲಿ ಟಿವಿ9 ನೆಟ್​​ವರ್ಕ್​​ ಬಹುದೊಡ್ಡ ವೇದಿಕೆಯನ್ನು ನಿರ್ಮಾಣ ಮಾಡುತ್ತಿದೆ, What India Thinks Today ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಹಲವು ನಾಯಕರು, ವಿಜ್ಞಾನಿಗಳು, ಸಿನಿಮಾ ನಟ-ನಟಿಯರು ಭಾಗವಹಿಸಲಿದ್ದಾರೆ. ತಮ್ಮ ಜೀವನದ ಅನೇಕ ಕ್ಷಣಗಳನ್ನು ಹಂಚಿಕೊಳ್ಳಲು ನಟಿ ರವೀನಾ ಟಂಡನ್ ಕೂಡ ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಕಾರ್ಯಕ್ರಮವು ದೆಹಲಿಯಲ್ಲಿ ಫೆ.25ರಿಂದ ಫೆ.27ರವರೆಗೆ ನಡೆಯಲಿದೆ.

What India Thinks Today: ಟಿವಿ9ನಲ್ಲಿ ತಮ್ಮ ಜೀವನದ ಸಿಹಿ-ಕಹಿ ಕ್ಷಣಗಳನ್ನು ಹಂಚಿಕೊಳ್ಳಲಿರುವ ನಟಿ ರವೀನಾ ಟಂಡನ್
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Feb 25, 2024 | 1:04 PM

Share

ಟಿವಿ9 ನೆಟ್​​​ವರ್ಕ್​​ ನಡೆಸುತ್ತಿರುವ What India Thinks Today ಎಂಬ ಕಾರ್ಯಕ್ರಮದಲ್ಲಿ ಖ್ಯಾತ ನಟಿ ರವೀನಾ ಟಂಡನ್ ಕೂಡ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ನಾಯಕರು ಈ ವೇದಿಕೆಯಲ್ಲಿ ತಮ್ಮ ಸಂವಾದ ನಡೆಸಲಿದ್ದಾರೆ. ಬಾಲಿವುಡ್​​​ ನಟಿಯರು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿವಹಿಸಲು ಉತ್ಸಾಹಕರಾಗಿದ್ದಾರೆ. ಕಾರ್ಯಕ್ರಮವು ದೆಹಲಿಯಲ್ಲಿ ಫೆ.25ರಿಂದ 27ರವರೆಗೆ ನಡೆಯಲಿದೆ. ರವೀನಾ ಟಂಡನ್ ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅನೇಕ ವಿಚಾರಗಳ ಬಗ್ಗೆ ಮಾತುಕತೆ ನಡೆಸಲಿದ್ದಾರೆ.

90 ರ ದಶಕದಲ್ಲಿ ತನ್ನ ನಟನೆ ಮತ್ತು ನೃತ್ಯದಿಂದ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆದ ನಟಿ ರವೀನಾ ಟಂಡನ್, ವಾಟ್ ಇಂಡಿಯಾ ಥಿಂಕ್ಸ್ ಟುಡೇಸ್ ಸೆಗ್ಮೆಂಟ್ ಫೈರ್‌ಸೈಡ್ ಚಾಟ್​​​ನ ಪ್ರಮುಖ ಅತಿಥಿಯಾಗಿದ್ದಾರೆ. ಮಹಿಳಾ ಕ್ಷೇತ್ರದ ಬಗ್ಗೆ ಅವರು ಮಾತನಾಡಲಿದ್ದಾರೆ. ದಿ ನ್ಯೂ ಹೀರೋ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಸಂವಾದ ನಡೆಸಲಿದ್ದು, ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಜೀವನದ ಬಗ್ಗೆಯೂ ಪ್ರೇಕ್ಷಕರ ಮುಂದೆ ತಿಳಿಸಲಿದ್ದಾರೆ.

ಇದನ್ನೂ ಓದಿ: ಲೋಕ ಚುನಾವಣೆಗೆ ಹರಿಯಾಣದ ಸಿದ್ಧತೆ ಬಗ್ಗೆ ಟಿವಿ9ನಲ್ಲಿ ಚರ್ಚೆ: ಮನೋಹರ್ ಲಾಲ್ ಖಟ್ಟರ್

ಮಹಿಳಾ ಸಬಲೀಕರಣದ ಬಗ್ಗೆ ಸದಾ ದನಿಯೆತ್ತುವ ರವೀನಾ ಟಂಡನ್ ಸಾಮಾಜಿಕ ಜಾಲತಾಣದಲ್ಲೂ ತುಂಬಾ ಸಕ್ರಿಯರಾಗಿದ್ದಾರೆ. ಈ ಕಾರಣಕ್ಕೆ ಅವರಿಗೆ ತಮ್ಮ ಜೀವನ ಕಹಿ-ಸಿಹಿ ವಿಚಾರಗಳನ್ನು ಹಂಚಿಕೊಳ್ಳಲು ಈ ವೇದಿಕೆ ಸೂಕ್ತವಾಗಿದೆ. ಇವರು ತಮ್ಮ ನಟನೆಯ ಮೂಲಕ ಸಿನಿಪ್ರೀಯರನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ. ಈ ಕಾರಣಕ್ಕೆ ಅವರಿಗೆ ಫಿಲ್ಮ್‌ಫೇರ್ ಮತ್ತು ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿದೆ. 1991 ರಲ್ಲಿ ಪತ್ತರ್ ಕೆ ಪೂಲ್ ಚಿತ್ರದ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಇದರ ನಂತರ ಅವರು ಏಕ್ ಹಿ ರಾಸ್ತಾ, ಪೆಹ್ಲಾ ನಶಾ, ದಿಲ್ವಾಲೆ, ಮೊಹ್ರಾ, ಜಿದ್ದಿ, ದೀವಾನಾ ಮಸ್ತಾನಾ, ದುಲ್ಹೆ ರಾಜಾ, ಆಂಟಿ ನಂ. 1, ಶೂಲ್, ಆಂಖಿಯೋನ್ ಸೆ ಗೋಲಿ ಮೇರೆ, ಆನ್ ಮತ್ತು ಸ್ಯಾಂಡ್‌ವಿಚ್‌ನಂತಹ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.

ಇದೀಗ ಮತ್ತೆ ಸಿನಿಮಾದತ್ತ ಮುಖ ಮಾಡಿದ್ದು, ರವೀನಾ ಟಂಡನ್ ಮತ್ತಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಕೆಜಿಎಫ್-2 ಮೂಲಕ ತೆರೆ ಮೇಲೆ ಬಂದ ಟಂಡನ್, ಆರಣ್ಯಕ್‌ ಸೀರೀಸ್ ಮೂಲಕ ಒಟಿಟಿಗೆ ಪ್ರವೇಶ ಮಾಡಿದ್ದಾರೆ. 50 ನೇ ವಯಸ್ಸಿನಲ್ಲಿಯೂ ಆಕ್ಷನ್ ಸಿನಿಮಾದಲ್ಲೂ ಭಾಗವಹಿಸುತ್ತಿದ್ದಾರೆ. ಸದ್ಯ ಅವರ ಕೈಯಲ್ಲಿ ಘುಡ್ಚಾಧಿ ಮತ್ತು ವೆಲ್ಕಮ್ ಟು ದಿ ಜಂಗಲ್ ಚಿತ್ರಗಳಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:00 am, Sat, 24 February 24

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!