Sign In

By signing in or creating an account, you agree with Associated Broadcasting Company's Terms & Conditions and Privacy Policy.

Sitara Ghattamaneni: ಮಹೇಶ್​ ಬಾಬು ಪುತ್ರಿ ಸಿತಾರಾ ಚಿತ್ರರಂಗಕ್ಕೆ ಬರೋದು ಯಾವಾಗ? ಮಗಳ ಪರವಾಗಿ ಉತ್ತರಿಸಿದ ನಮ್ರತಾ

Mahesh Babu Daughter: ಸ್ಟಾರ್​ ನಟನ ಪುತ್ರಿ ಎಂಬ ಕಾರಣಕ್ಕೆ ಸಿತಾರಾ ಘಟ್ಟಮನೇನಿ ಅವರಿಗೆ ಭರ್ಜರಿ ಅವಕಾಶಗಳು ದೊರೆಯುತ್ತಿವೆ. ಮಗಳಿಗೆ ಮಹೇಶ್​ ಬಾಬು ಅವರು ತುಂಬ ಪ್ರೋತ್ಸಾಹ ನೀಡುತ್ತಿದ್ದಾರೆ.

Sitara Ghattamaneni: ಮಹೇಶ್​ ಬಾಬು ಪುತ್ರಿ ಸಿತಾರಾ ಚಿತ್ರರಂಗಕ್ಕೆ ಬರೋದು ಯಾವಾಗ? ಮಗಳ ಪರವಾಗಿ ಉತ್ತರಿಸಿದ ನಮ್ರತಾ
ಸಿತಾರಾ ಘಟ್ಟಮನೇನಿ
Follow us
ಮದನ್​ ಕುಮಾರ್​
|

Updated on:Jul 16, 2023 | 8:33 AM

ಟಾಲಿವುಡ್​ನ ಸ್ಟಾರ್​ ನಟ ಮಹೇಶ್​ ಬಾಬು (Mahesh Babu) ಅವರು ಈಗ ‘ಗುಂಟೂರು ಖಾರಂ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಅವರಿಗಿಂತಲೂ ಅವರ ಮಗಳೇ ಹೆಚ್ಚು ಸುದ್ದಿ ಆಗುತ್ತಿದ್ದಾರೆ. ಹೌದು, ಮಹೇಶ್​ ಬಾಬು ಪುತ್ರಿ (Mahesh Babu Daughter) ಸಿತಾರಾ ಘಟ್ಟಮನೇನಿ ಅವರು ಜಾಹೀರಾತುಗಳಲ್ಲಿ ನಟಿಸುವ ಮೂಲಕ ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಿದ್ದಾರೆ. ಅಲ್ಲದೇ, ತಾವು ಪಡೆದ ಸಂಬಳವನ್ನು ಚಾರಿಟಿಗೆ ನೀಡಿದ್ದು ಕೂಡ ದೊಡ್ಡ ಸುದ್ದಿ ಆಯಿತು. ಹಾಗಾದರೆ ಅವರು ಸಿನಿಮಾದಲ್ಲಿ ನಟಿಸುವುದು ಯಾವಾಗ? ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಈ ಪ್ರಶ್ನೆ ಎದುರಾಗಿದೆ. ಅದಕ್ಕೆ ಸಿತಾರಾ ಘಟ್ಟಮನೇನಿ (Sitara Ghattamaneni) ಪರವಾಗಿ ಅವರ ತಾಯಿ ನಮ್ರತಾ ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ಪ್ರತಿಷ್ಠಿತ ಆಭರಣ ಕಂಪನಿಗೆ ಸಿತಾರಾ ಘಟ್ಟಮನೇನಿ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಅವರ ಫೋಟೋಗಳು ವಿದೇಶದಲ್ಲಿ ರಾರಾಜಿಸುತ್ತಿವೆ. ಸ್ಟಾರ್​ ನಟನ ಪುತ್ರಿ ಎಂಬ ಕಾರಣಕ್ಕೆ ಅವರಿಗೆ ಭರ್ಜರಿ ಅವಕಾಶಗಳು ದೊರೆಯುತ್ತಿವೆ. ಮಗಳಿಗೆ ಮಹೇಶ್​ ಬಾಬು ಅವರು ತುಂಬ ಪ್ರೋತ್ಸಾಹ ನೀಡುತ್ತಿದ್ದಾರೆ. ಸಿತಾರಾ ಘಟ್ಟಮನೇನಿ ಅವರು ಆದಷ್ಟು ಬೇಗ ಸಿನಿಮಾಗಳಲ್ಲಿ ನಟಿಸಲಿ ಎಂಬುದು ಅಭಿಮಾನಿಗಳ ಆಸೆ. ಸಿನಿಮಾದಲ್ಲಿ ಅಭಿನಯಿಸಬೇಕು ಎಂಬ ಉತ್ಸಾಹ ಸಿತಾರಾಗೂ ಇದೆ.

ಇದನ್ನೂ ಓದಿ: ಟ್ರೆಡಿಷನಲ್ ಲುಕ್​ನಲ್ಲಿ ಮಿಂಚುತ್ತಿರುವ ಮಹೇಶ್​ ಬಾಬು ಮಗಳು ಸಿತಾರಾ

ಯಾವಾಗ ಚಿತ್ರರಂಗಕ್ಕೆ ಕಾಲಿಡಬೇಕು ಎಂಬುದು ಸಿತಾರಾಳ ಆಯ್ಕೆಗೆ ಬಿಟ್ಟಿದ್ದು ಎಂದು ಈಗಾಗಲೇ ಮಹೇಶ್​ ಬಾಬು ಮತ್ತು ನಮ್ರತಾ ಅವರು ಹೇಳಿದ್ದರು. ‘ಸಿತಾರಾಳ ಸಿನಿಮಾ ಎಂಟ್ರಿ ಬಗ್ಗೆ ಮಾತನಾಡಲು ಇನ್ನೂ ಸೂಕ್ತ ಕಾಲ ಬಂದಿಲ್ಲ. ಆಕೆ ಯಾವ ರೀತಿಯ ಸಿನಿಮಾಗಳಲ್ಲಿ ನಟಿಸಲು ಬಯಸುತ್ತಾಳೆ ಎಂದು ಈಗಲೇ ಹೇಳಲಾಗದು’ ಎಂದಿದ್ದಾರೆ ನಮ್ರತಾ. ತಮ್ಮದೇ ಯೂಟ್ಯೂಬ್​ ಚಾನೆಲ್​ ಹೊಂದಿರುವ ಸಿತಾರಾ ಅವರು ಹಲವು ಸೆಲೆಬ್ರಿಟಿಗಳ ಸಂದರ್ಶನ ಮಾಡಿಯೂ ಫೇಮಸ್​ ಆಗಿದ್ದಾರೆ. ಅಪ್ಪನ ಸಿನಿಮಾದ ಪ್ರಮೋಷನಲ್​ ಹಾಡಿಗೆ ಡ್ಯಾನ್ಸ್ ಮಾಡುವ ಮೂಲಕ ಅವರು ಅಭಿಮಾನಿಗಳನ್ನು ರಂಜಿಸಿದ್ದರು. ಈ ಎಲ್ಲ ಕಾರಣಗಳಿಂದ ಸಿತಾರಾ ಖ್ಯಾತಿ ಹೆಚ್ಚಿದೆ.

ಇದನ್ನೂ ಓದಿ: ಅಗಲಿದ ತಾತನ ನೆನೆದು ಭಾವುಕ ಪತ್ರ ಬರೆದ ಮಹೇಶ್​ ಬಾಬು ಪುತ್ರಿ ಸಿತಾರ

ಇನ್ನು, ಮಹೇಶ್​ ಬಾಬು-ನಮ್ರತಾ ದಂಪತಿಯ ಪುತ್ರ ಗೌತಮ್​ ಕೂಡ ಸಿನಿಮಾಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಅವರಿಗೆ ಈಗ 16 ವರ್ಷ ವಯಸ್ಸು. ಇನ್ನು 7 ವರ್ಷಗಳು ಕಳೆದ ಬಳಿಕ ಅವರು ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಎಂದು ನಮ್ರತಾ ತಿಳಿಸಿದ್ದಾರೆ. ಮಹೇಶ್​ ಬಾಬು ಅವರ ‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಂ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ಪಾತ್ರವರ್ಗದಲ್ಲಿ ಒಂದಷ್ಟು ಬದಲಾವಣೆ ಆಗಿರುವುದರಿಂದ ಆ ಚಿತ್ರದ ಬಗ್ಗೆ ಪದೇ ಪದೇ ಸುದ್ದಿ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:32 am, Sun, 16 July 23

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..