ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ

2021ರಲ್ಲಿ ಆಶು ರೆಡ್ಡಿ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿಡಿಯೋ ವೈರಲ್ ಆಗಿತ್ತು. ಸಂದರ್ಶನದ ವೇಳೆ ಆಶು ರೆಡ್ಡಿ ಕಾಲಿಗೆ ಆರ್​ಜಿವಿ ಮುತ್ತಿಟ್ಟಿದ್ದರು.

ಡ್ರಗ್ ಕೇಸ್​ನಲ್ಲಿ ಸುದ್ದಿ ಆದ ಆಶು ರೆಡ್ಡಿ ಯಾರು? ಸಂದರ್ಶನದಲ್ಲಿ ಈ ನಟಿಯ ಕಾಲಿಗೆ ಮುತ್ತಿಟ್ಟಿದ್ರು ಆರ್​ಜಿವಿ
ಆಶು ರೆಡ್ಡಿ-ಆರ್​ಜಿವಿ
Follow us
ರಾಜೇಶ್ ದುಗ್ಗುಮನೆ
|

Updated on: Jun 24, 2023 | 7:53 AM

ನಟಿ ಆಶು ರೆಡ್ಡಿ (Ashu Reddy) ಈಗ ಸುದ್ದಿಯಲ್ಲಿದ್ದಾರೆ. ಇಷ್ಟು ದಿನ ಗ್ಲಾಮರಸ್ ಫೋಟೋ ಮೂಲಕ ಗಮನ ಸೆಳೆಯುತ್ತಿದ್ದ ಅವರು ಈಗ ಡ್ರಗ್ ಕೇಸ್​ ಮೂಲಕ ಸುದ್ದಿ ಆಗಿದ್ದಾರೆ. ರಜನಿಕಾಂತ್ ನಟನೆಯ ‘ಕಬಾಲಿ’ ಚಿತ್ರದ ನಿರ್ಮಾಪಕ ಕೆಪಿ ಚೌದರಿ ಅವರು ಡ್ರಗ್ ಕೇಸ್​ನಲ್ಲಿ (Drug Case) ಅರೆಸ್ಟ್​ ಆಗಿದ್ದಾರೆ. ಆಶು ರೆಡ್ಡಿ ಜೊತೆ ಅವರು ನೂರಾರು ಬಾರಿ ಫೋನ್ ಮೂಲಕ ಮಾತನಾಡಿದ್ದರು ಎನ್ನುವ ವಿಚಾರ ರಿವೀಲ್ ಆಗಿದೆ. ಡ್ರಗ್ ಮಾರಾಟ ಮಾಡುವ ವ್ಯಕ್ತಿಯ ಜೊತೆ ಇಷ್ಟೊಂದು ದೂರವಾಣಿ ಕರೆ ಏಕೆ ಎನ್ನುವ ಪ್ರಶ್ನೆ ಪೊಲೀಸರಲ್ಲಿ ಮೂಡಿದೆ.

ಆಶು ರೆಡ್ಡಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ‘ಬಿಗ್ ಬಾಸ್ ತೆಲುಗು’ ಒಂದನೇ ಸೀಸನ್​ಗೆ ಅವರು ಕಾಲಿಟ್ಟಿದ್ದರು. ಈ ಮೂಲಕ ಜನಪ್ರಿಯತೆ ಪಡೆದರು. ಇನ್​ಸ್ಟಾಗ್ರಾಮ್​ನಲ್ಲಿ ಅವರು ಬೋಲ್ಡ್ ಹಾಗೂ ಗ್ಲಾಮರಸ್ ಫೋಟೋ ಹಂಚಿಕೊಳ್ಳುತ್ತಾರೆ. ತಮ್ಮದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಆಶು ವಿವಿಧ ರೀತಿಯ ಫೋಟೋ ಪೋಸ್ಟ್ ಮಾಡುತ್ತಾರೆ. ಈಗ ಅವರ ಹೆಸರು ಡ್ರಗ್ ಕೇಸ್​ನಲ್ಲಿ ಕೇಳಿ ಬಂದಿದೆ.

ಕೆಪಿ ಚೌದರಿ ಅವರು ನೇರವಾಗಿ ಆಶು ರೆಡ್ಡಿ ಬಗ್ಗೆ ಆರೋಪ ಮಾಡಿಲ್ಲ. ಡ್ರಗ್ ವಿಚಾರದಲ್ಲಿ ನನಗೆ ಅವರಿಗೆ ಸಂಬಂಧ ಇದೆ ಎಂದು ಹೇಳಿಕೊಂಡಿಲ್ಲ. ಇವರ ಮಧ್ಯೆ ಲಿಂಕ್ ಇರುವ ವಿಚಾರ ಗೊತ್ತಾಗಿದ್ದು ಕೆಪಿ ಚೌದರಿ ವಿಚಾರಣೆ ವೇಳೆ. ಅವರ ಬಳಿ ಇದ್ದ ಮೂರು ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಚೌದರಿ ಅವರ ಒಂದು ಮೊಬೈಲ್​ನಿಂದ ಆಶು ರೆಡ್ಡಿಗೆ ನೂರಾರು ಬಾರಿ ಫೋನ್ ಕಾಲ್ ಹೋಗಿದೆ. ಇದು ಏಕೆ ಎಂಬ ಪ್ರಶ್ನೆ ಮೂಡಿದೆ.

ಇದನ್ನೂ ಓದಿ:ಡ್ರಗ್​ ಕೇಸ್​ನಲ್ಲಿ ಅರೆಸ್ಟ್ ಆದ ನಿರ್ಮಾಪಕನಿಗೆ ಚಿತ್ರರಂಗದವರೇ ಗ್ರಾಹಕರು? ಬಿಗ್ ಬಾಸ್ ಸ್ಪರ್ಧಿಯ ಹೆಸರು ರಿವೀಲ್

2021ರಲ್ಲಿ ಆಶು ರೆಡ್ಡಿ ಹಾಗೂ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ವಿಡಿಯೋ ವೈರಲ್ ಆಗಿತ್ತು. ಸಂದರ್ಶನದ ವೇಳೆ ಆಶು ರೆಡ್ಡಿ ಕಾಲಿಗೆ ಆರ್​ಜಿವಿ ಮುತ್ತಿಟ್ಟಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್