AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಬರ್ತ್​ಡೇ ದಿನ ಸಿಗಲಿದೆ ಉತ್ತರ

ಇತ್ತೀಚಿನ ದಿನಗಳಲ್ಲಿ ಅಲ್ಲು ಅರ್ಜುನ್ ಅವರನ್ನು ಹಲವು ನಿರ್ದೇಶಕರು ಭೇಟಿ ಆಗಿದ್ದಾರೆ. ಕೊರಟಾಲ ಶಿವ, ವೇನು ಶ್ರೀರಾಮ್, ಬೋಯಪತಿ, ಮುರುಗದಾಸ್, ರೋಹಿತ್ ಶೆಟ್ಟಿ, ಲಿಂಗುಸ್ವಾಮಿ, ನೆಲ್ಸನ್ ಹಾಗೂ ಅಟ್ಲೀ ಅವರು ಅಲ್ಲು ಅರ್ಜುನ್​ ಭೇಟಿ ಮಾಡಿದ್ದಾರೆ. ಈ ಪೈಕಿ ಅಲ್ಲು ಅರ್ಜುನ್​ ಯಾರನ್ನು ಫೈನಲ್ ಮಾಡುತ್ತಾರೆ ಎನ್ನುವ ಕುತೂಹಲ ಹಾಗೆಯೇ ಇದೆ.

ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು? ಬರ್ತ್​ಡೇ ದಿನ ಸಿಗಲಿದೆ ಉತ್ತರ
ಅಲ್ಲು ಅರ್ಜುನ್​
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 14, 2024 | 12:43 PM

Share

ಅಲ್ಲು ಅರ್ಜುನ್ (Allu Arjun) ಅವರು ಸದ್ಯ ‘ಪುಷ್ಪ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆ ಆಗಲಿದ್ದು ಫ್ಯಾನ್ಸ್ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದಾದ ಬಳಿಕ ಅವರ ಮುಂದಿನ ಸಿನಿಮಾ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ. ಈ ಎಲ್ಲಾ ಪ್ರಶ್ನೆಗಳಿಗೆ ಅಲ್ಲು ಅರ್ಜುನ್ ಅವರ ಬರ್ತ್​ಡೇ ದಿನ ಉತ್ತರ ಸಿಗೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ದಿನಗಳಲ್ಲಿ ಅಲ್ಲು ಅರ್ಜುನ್ ಅವರನ್ನು ಹಲವು ನಿರ್ದೇಶಕರು ಭೇಟಿ ಆಗಿದ್ದಾರೆ. ಕೊರಟಾಲ ಶಿವ, ವೇನು ಶ್ರೀರಾಮ್, ಬೋಯಪತಿ, ಮುರುಗದಾಸ್, ರೋಹಿತ್ ಶೆಟ್ಟಿ, ಲಿಂಗುಸ್ವಾಮಿ, ನೆಲ್ಸನ್ ಹಾಗೂ ಅಟ್ಲೀ ಅವರು ಅಲ್ಲು ಅರ್ಜುನ್​ ಭೇಟಿ ಮಾಡಿದ್ದಾರೆ. ಈ ಪೈಕಿ ಅಲ್ಲು ಅರ್ಜುನ್​ ಯಾರನ್ನು ಫೈನಲ್ ಮಾಡುತ್ತಾರೆ ಎನ್ನುವ ಕುತೂಹಲ ಹಾಗೆಯೇ ಇದೆ. ಅಟ್ಲಿ ಅವರ ಜೊತೆ ಅಲ್ಲು ಅರ್ಜುನ್ ಕೈ ಜೋಡಿಸುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.

ಶಾರುಖ್ ಖಾನ್ ನಟನೆಯ ‘ಜವಾನ್’ ಹಿಟ್ ಆದ ಬಳಿಕ ಅಟ್ಲಿ ಖ್ಯಾತಿ ಹೆಚ್ಚಿದೆ. ಅವರನ್ನು ಅಲ್ಲು ಅರ್ಜುನ್ ಮುಂಬೈನಲ್ಲಿ ಭೇಟಿ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಟ್ಲಿ ಹೇಳಿದ ಕಥೆ ಅಲ್ಲು ಅರ್ಜುನ್​ಗೆ ಸಖತ್ ಇಷ್ಟವಾಗಿದೆ. ಅವರು ಅಟ್ಲಿ ಜೊತೆ ಸಿನಿಮಾ ಮಾಡೋಕೆ ಹೆಚ್ಚು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ, ‘ಪುಷ್ಪ 2’ ಸಿನಿಮಾ ಬಳಿಕ ಅಲ್ಲು ಅರ್ಜುನ್ ಅವರು ಇದೇ ಸಿನಿಮಾನ ಕೈಗೆತ್ತಿಕೊಂಡರೂ ಅಚ್ಚರಿ ಏನಿಲ್ಲ.

ತ್ರಿವಿಕ್ರಂ ಶ್ರೀನಿವಾಸ್ ಹಾಗೂ ಅಲ್ಲು ಅರ್ಜುನ್ ಒಟ್ಟಾಗಿ ಸಿನಿಮಾ ಮಾಡಬೇಕಿದೆ. ಇತ್ತೀಚೆಗೆ ಅವರ ನಿರ್ದೇಶನದ ‘ಗುಂಟೂರು ಖಾರಂ’ ಸಖತ್ ಫ್ಲಾಪ್ ಎನಿಸಿಕೊಂಡಿದೆ. ಫ್ಯಾಮಿಲಿ ಡ್ರಾಮಾನ ವಿರೋಧಿಸಿದವರೇ ಹೆಚ್ಚು. ಈಗ ಅಲ್ಲು ಅರ್ಜುನ್ ಅವರು ತ್ರಿವಿಕ್ರಂ ಶ್ರೀನಿವಾಸ್ ಬಳಿ ಕಥೆ ಬದಲಿಸುವಂತೆ ಹೇಳಿದ್ದಾರೆ. ಇದಕ್ಕೆ ನಿರ್ದೇಶಕರು ಒಪ್ಪಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್​ ಜತೆ ಸಿನಿಮಾ ಮಾಡಲು 60 ಕೋಟಿ ರೂ. ಸಂಬಳ ಕೇಳಿದ ಅಟ್ಲಿ?

ಏಪ್ರಿಲ್ 8 ಅಲ್ಲು ಅರ್ಜುನ್ ಜನ್ಮದಿನ. ಅಲ್ಲು ಅರ್ಜುನ್ ಮುಂದಿನ ಸಿನಿಮಾ ಯಾವುದು ಎನ್ನುವ ಬಗ್ಗೆ ಅಂದು ಪಕ್ಕಾ ಮಾಹಿತಿ ಸಿಗೋ ಸಾಧ್ಯತೆ ಇದೆ. ಅಂದು ‘ಪುಷ್ಪ 2’ ಚಿತ್ರದಿಂದ ಹೊಸ ಪೋಸ್ಟರ್ ಅಥವಾ ಟೀಸರ್​ನ ಫ್ಯಾನ್ಸ್ ನಿರೀಕ್ಷಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ