AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalki 2898 AD: ‘ಕಲ್ಕಿ 2898 ಎಡಿ’ ಅಲಿಯಾಸ್​ ‘ಪ್ರಾಜೆಕ್ಟ್​ ಕೆ’ ಚಿತ್ರದ ಪ್ರಚಾರ ಮಾಡಲು ದೀಪಿಕಾ ಪಡುಕೋಣೆ ನಕಾರ; ಮೂಡಿತು ಅನುಮಾನ

Deepika Padukone: ‘ಕಲ್ಕಿ’ ಸಿನಿಮಾದ ಪ್ರಚಾರದಲ್ಲಿ ದೀಪಿಕಾ ಪಡುಕೋಣೆ ಅವರ ಅನುಪಸ್ಥಿತಿ ಕಾಡಿದೆ. ಚಿತ್ರತಂಡದ ಜೊತೆ ಅವರು ಏನಾದರೂ ಮನಸ್ತಾಪ ಮಾಡಿಕೊಂಡಿರಬಹುದೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

Kalki 2898 AD: ‘ಕಲ್ಕಿ 2898 ಎಡಿ’ ಅಲಿಯಾಸ್​ ‘ಪ್ರಾಜೆಕ್ಟ್​ ಕೆ’ ಚಿತ್ರದ ಪ್ರಚಾರ ಮಾಡಲು ದೀಪಿಕಾ ಪಡುಕೋಣೆ ನಕಾರ; ಮೂಡಿತು ಅನುಮಾನ
ದೀಪಿಕಾ ಪಡುಕೋಣೆ, ಪ್ರಭಾಸ್​
ಮದನ್​ ಕುಮಾರ್​
|

Updated on: Jul 21, 2023 | 7:36 PM

Share

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಹಲವು ಭಾಷೆಯ ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ಬಾಲಿವುಡ್​ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲೂ ಅವರಿಗೆ ತುಂಬ ಬೇಡಿಕೆ ಇದೆ. ಪ್ರಭಾಸ್​ (Prabhas) ನಟನೆಯ ‘ಪ್ರಾಜೆಕ್ಟ್​ ಕೆ’ ಅಲಿಯಾಸ್​ ‘ಕಲ್ಕಿ 2898 ಎಡಿ’  (Kalki 2898 AD) ಸಿನಿಮಾದಲ್ಲೂ ಅವರು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯ ಭರ್ಜರಿಯಾಗಿ ಸಾಗುತ್ತಿದೆ. ಆದರೆ ಅದರಲ್ಲಿ ದೀಪಿಕಾ ಪಡುಕೋಣೆ ಭಾಗಿ ಆಗುತ್ತಿಲ್ಲ. ಇದು ಅನುಮಾನಕ್ಕೆ ಕಾರಣ ಆಗಿದೆ. ಚಿತ್ರತಂಡದ ಜೊತೆ ದೀಪಿಕಾ ಪಡುಕೋಣೆ ಅವರು ಏನಾದರೂ ಕಿರಿಕ್​ ಮಾಡಿಕೊಂಡಿರಬಹುದೇ ಎಂಬ ಗುಮಾನಿ ಶುರುವಾಗಿದೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ.

ಕೆಲವೇ ದಿನಗಳ ಹಿಂದೆ ದೀಪಿಕಾ ಪಡುಕೋಣೆ ಅವರ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಮಾಡಲಾಯಿತು. ಅದಕ್ಕೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾಮಾನ್ಯವಾಗಿ ತಾವು ನಟಿಸಿದ ಸಿನಿಮಾಗಳಿಂದ ಈ ರೀತಿ ಪ್ರಮೋಷನಲ್​ ಕಂಟೆಂಟ್​ ಬಿಡುಗಡೆ ಆದಾಗ ಅದನ್ನು ಕಲಾವಿದರು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಶೇರ್​ ಮಾಡಿಕೊಳ್ಳುತ್ತಾರೆ. ಆದರೆ ದೀಪಿಕಾ ಪಡುಕೋಣೆ ಅವರು ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿನ ತಮ್ಮ ಹೊಸ ಪೋಸ್ಟರ್​ ಅನ್ನು ಶೇರ್​ ಮಾಡಿಕೊಂಡಿಲ್ಲ. ಅದರ ಬಗ್ಗೆ ಒಂದು ಅಕ್ಷರವನ್ನೂ ಅವರು ಬರೆದುಕೊಂಡಿಲ್ಲ.

ಇದನ್ನೂ ಓದಿ: ವಿಶೇಷ ದಿನಕ್ಕೂ ಮುನ್ನ ‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿನ ದೀಪಿಕಾ ಪಡುಕೋಣೆ ಲುಕ್ ರಿವೀಲ್

ಅಮೆರಿಕದ ಸ್ಯಾನ್​ ಡಿಯಾಗೋ ನಗರದಲ್ಲಿ ‘ಕಲ್ಕಿ 2898 ಎಡಿ’ ಸಿನಿಮಾದ ಫಸ್ಟ್​ ಗ್ಲಿಂಪ್ಸ್​ ಬಿಡುಗಡೆ ಆಗಿದೆ. ಅದರಲ್ಲಿ ಪ್ರಭಾಸ್​, ಕಮಲ್​ ಹಾಸನ್​ ಸೇರಿದಂತೆ ಚಿತ್ರತಂಡದ ಅನೇಕರು ಭಾಗಿ ಆಗಿದ್ದಾರೆ. ಅಮಿತಾಭ್​ ಬಚ್ಚನ್​ ಅವರು ಅಮೆರಿಕಕ್ಕೆ ಹೋಗಿಲ್ಲವಾದರೂ ವಿಡಿಯೋ ಕಾಲ್​ ಮೂಲಕ ಭಾಗವಹಿಸಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರ ಅನುಪಸ್ಥಿತಿ ಕಾಡಿದೆ. ಚಿತ್ರತಂಡದ ಜೊತೆ ಅವರು ಏನಾದರೂ ಮನಸ್ತಾಪ ಮಾಡಿಕೊಂಡಿರಬಹುದೇ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಇದಕ್ಕೆ ಅವರ ಕಡೆಯಿಂದಲೇ ಉತ್ತರ ಬರಬೇಕಿದೆ.

ಇದನ್ನೂ ಓದಿ: ಅಮ್ಮ-ಮಗನ ಪಾತ್ರದಲ್ಲಿ ದೀಪಿಕಾ ಪಡುಕೋಣೆ-ಶಾರುಖ್​ ಖಾನ್​? ಭಾರಿ ಟ್ವಿಸ್ಟ್​ ನಿರೀಕ್ಷೆಯಲ್ಲಿ ಫ್ಯಾನ್ಸ್​

ಇನ್ನೊಂದು ವರದಿ ಪ್ರಕಾರ, ದೀಪಿಕಾ ಪಡುಕೋಣೆ ಅವರು ‘ಕಲ್ಕಿ 2898 ಎಡಿ’ ಸಿನಿಮಾದ ಪ್ರಚಾರ ಮಾಡದೇ ಇರಲು ಒಂದು ಪ್ರಮುಖ ಕಾರಣ ಇದೆ. ಹಾಲಿವುಡ್​ನಲ್ಲಿ ಈಗ ಕಲಾವಿದರು ಮತ್ತು ಬರಹಗಾರರ ಸಂಘವು ವಿವಿಧ ಕಾರಣಗಳಿಂದಾಗಿ ಪ್ರತಿಭಟನೆ ಮಾಡುತ್ತಿದೆ. ಆ ಸಂಘದಲ್ಲಿ ದೀಪಿಕಾ ಪಡುಕೋಣೆ ಕೂಡ ಇದ್ದಾರೆ. ಪ್ರತಿಭಟನೆ ಮುಗಿಯುವ ತನಕ ತಮ್ಮ ಸಿನಿಮಾಗಳ ಪ್ರಚಾರ ಕಾರ್ಯದಲ್ಲಿ ಯಾರೂ ಭಾಗಿ ಆಗಬಾರದು ಎಂಬ ನಿಮಯ ಇದೆ. ಹಾಗಾಗಿ ದೀಪಿಕಾ ಪಡುಕೋಣೆ ಅವರು ‘ಕಲ್ಕಿ 2898 ಎಡಿ’ ಚಿತ್ರದ ಪ್ರಚಾರ ಮಾಡಿಲ್ಲ ಎನ್ನಲಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು