AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಮಂತಿಕೆ ತೋರಿಸಲು ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಾರಾ ಕಂಗನಾ?

ಬೆಳ್ಳಿ ಲೋಟದಲ್ಲಿ ಕಂಗನಾ ರಣಾವತ್ ನೀರು ಕುಡಿಯುತ್ತಿರೋ ವಿಡಿಯೋ ಈ ಮೊದಲು ವೈರಲ್ ಆಗಿತ್ತು. ಇದನ್ನು ನೋಡಿದ ಜನರು ಕಂಗನಾ ರಣಾವತ್ ಅವರನ್ನು ಟಾರ್ಗೆಟ್ ಮಾಡಿದ್ದರು. ಈ ವಿಡಿಯೋದಲ್ಲಿ ಕಂಗನಾ ರಣಾವತ್ ಸಿಲ್ವರ್ ಗ್ಲಾಸ್‌ನಿಂದ ನೀರು ಕುಡಿಯುತ್ತಿರುವುದನ್ನು ಕಾಣಬಹುದು.

ಶ್ರೀಮಂತಿಕೆ ತೋರಿಸಲು ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಾರಾ ಕಂಗನಾ?
ಕಂಗನಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 21, 2024 | 11:09 AM

Share

ಬಾಲಿವುಡ್ ನಂತರ ನಟಿ ಕಂಗನಾ ರಣಾವತ್ ರಾಜಕೀಯದತ್ತ ಹೆಜ್ಜೆ ಹಾಕಿದ್ದಾರೆ. ಅವರು ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ರಾಜಕೀಯದ ಜೊತೆಗೆ ಕಂಗನಾ ರಣಾವತ್ ಕೂಡ ತಮ್ಮ ಮುಂಬರುವ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಕಂಗನಾ ರನೌತ್ ಅಪಾರ ಸಂಪತ್ತನ್ನು ಹೊಂದಿದ್ದಾರೆ. ಕಂಗನಾ ರಣಾವತ್ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಕಂಗನಾ ರಣಾವತ್ ಸಂಸದೆಯಾದ ನಂತರ ಹಳೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಲ್ಲಿ ಅವರು ಬೆಳ್ಳಿ ಲೋಟದಲ್ಲಿ ನಿರು ಕುಡಿದಿದ್ದಾರೆ.

ಬೆಳ್ಳಿ ಲೋಟದಲ್ಲಿ ಕಂಗನಾ ನೀರು ಕುಡಿಯುವುದನ್ನು ನೋಡಿದ ಜನರು ಕಂಗನಾ ರಣಾವತ್ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಈ ವಿಡಿಯೋದಲ್ಲಿ ಕಂಗನಾ ರಣಾವತ್ ಸಿಲ್ವರ್ ಗ್ಲಾಸ್‌ನಿಂದ ನೀರು ಕುಡಿಯುತ್ತಿರುವುದನ್ನು ಕಾಣಬಹುದು. ಕಂಗನಾ ರಣಾವತ್ ಅವರ ಈ ವರ್ತನೆಯನ್ನು ಜನ ಮೆಚ್ಚಲೇ ಇಲ್ಲ.

‘ಕಂಗನಾ ರಣಾವತ್ ಬಡವರ ಜೊತೆ ಇರೋದಾಗಿ ಹೇಳುತ್ತಾರೆ, ಆದರೆ ಆದರೆ, ಬೆಳ್ಳಿ ಲೋಟದಲ್ಲಿ ನೀರು ಕುಡಿಯುತ್ತಾರೆ’ ಎಂದು ಕೆಲವರು ಕಮೆಂಟ್ ಮಾಡಿದ್ದರು. ಬೆಳ್ಳಿ ಲೋಟದಲ್ಲಿ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಕಂಗನಾ ರಣಾವತ್ ಈ ಮೊದಲು ಮಾತನಾಡಿದ್ದರು.. ಕಂಗನಾ ರಣಾವತ್ ಕೂಡ ಇಂತಹ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದನ್ನು ಕಾಣಬಹುದು.

‘ಬೆಳ್ಳಿ ಲೋಟದಲ್ಲಿ ನೀರು ಕುಡಿಯುವುದರಿಂದ ರೋಗಗಳು ದೂರವಾಗುತ್ತವೆ. ದೇಹ ಸೇರಿದ ವಿಷಕಾರಿ ವಸ್ತುಗಳಿಂದ ನಾವು ಸುರಕ್ಷಿತವಾಗಿರುತ್ತೇವೆ’ ಅದರಲ್ಲೂ ಬೆಳ್ಳಿ ಲೋಟದಲ್ಲಿ ನೀರು ಕುಡಿಯುವುದು ತುಂಬಾ ಮಂಗಳಕರ’ ಎಂದು ಕಂಗನಾ ರಣಾವತ್ ಹೇಳಿದ್ದರು. ಆ ಬಳಿಕ ಟೀಕಾಕಾರರು ಸುಮ್ಮನಾಗಿದ್ದರು.

ಇದನ್ನೂ ಓದಿ: ಜೀವನಪರ್ಯಂತ ವಿರೋಧ ಪಕ್ಷದಲ್ಲಿ ಕೂರಲು ರೆಡಿಯಾಗಿ; ರಾಹುಲ್ ಗಾಂಧಿ ವಿರುದ್ಧ ಕಂಗನಾ ರಣಾವತ್ ವಾಗ್ದಾಳಿ

ಕಂಗನಾ ರಣಾವತ್ ಬಾಲಿವುಡ್‌ನಲ್ಲಿ ಬಹಳ ಕಾಲ ಇದ್ದರು. ಆದಾಗ್ಯೂ, ಕಂಗನಾ ರಣಾವತ್ ಯಾವಾಗಲೂ ಕೆಲವು ಬಾಲಿವುಡ್ ಜನರನ್ನು ಟೀಕಿಸುತ್ತಲೇ ಇರುತ್ತಾರೆ. ಕೆಲ ದಿನಗಳ ಹಿಂದೆ ನಟ ರಣಬೀರ್ ಕಪೂರ್ ಅವರನ್ನು ಕಂಗನಾ ರಣಾವತ್ ಟೀಕಿಸಿದ್ದರು. ಕಂಗನಾ ರಣಾವತ್ ಮಾತು ಕೇಳಿ ಜನ ಕೂಡ ಶಾಕ್ ಆಗಿದ್ದಾರೆ. ಈಗ ಅವರು ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್