AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ? ಉತ್ತರಿಸಿದ ನಿತೇಶ್ ತಿವಾರಿ

ರಣಬೀರ್ ಕಪೂರ್ ಹಾಗೂ ಯಶ್ ಕಾಂಬಿನೇಷನ್‌ನ 'ರಾಮಾಯಣ' ಸಿನಿಮಾ ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಮೊದಲ ಭಾಗವು ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸುವ ಕ್ಲಿಫ್‌ಹ್ಯಾಂಗರ್ ತಿರುವಿನೊಂದಿಗೆ ಕೊನೆಗೊಳ್ಳಲಿದೆ ಎಂದು ನಿರ್ದೇಶಕ ನಿತೇಶ್ ತಿವಾರಿ ಗುಟ್ಟು ಬಿಟ್ಟುಕೊಟ್ಟಿದ್ದಾರೆ. ಈ ವಿಷಯ ಕುತೂಹಲ ಹೆಚ್ಚಿಸಿದೆ.

'ರಾಮಾಯಣ' ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ? ಉತ್ತರಿಸಿದ ನಿತೇಶ್ ತಿವಾರಿ
ರಣಬೀರ್​-ಯಶ್
ರಾಜೇಶ್ ದುಗ್ಗುಮನೆ
|

Updated on:Jul 30, 2026 | 10:05 AM

Share

ಮುಖ್ಯಾಂಶಗಳು

  • ಪ್ರೇಕ್ಷಕರಿಗೆ ಶಾಕ್ ಕೊಡುತ್ತೆ 'ರಾಮಾಯಣ' ಪಾರ್ಟ್ 1
  • ರಾಮಾಯಣ ಸಿನಿಮಾ ಎರಡು ಭಾಗದಲ್ಲಿ ಬರುತ್ತಿರುವುದೇಕೆ?
  • ವಿವರಿಸಿದ ನಿರ್ದೇಶಕ ನಿತೇಶ್​ ತಿವಾರಿ

ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ಬಾಲಿವುಡ್ ನಟ ರಣಬೀರ್ ಕಪೂರ್ ಅಭಿನಯದ ‘ರಾಮಾಯಣ’ ಚಿತ್ರ (Ramayana Movie) ಹಲವು ಕಾರಣಗಳಿಂದ ಚರ್ಚೆಯಲ್ಲಿದೆ. ಈ ಮಹಾಕಾವ್ಯವನ್ನು ಎರಡು ಭಾಗದಲ್ಲಿ ಹೇಳುತ್ತಿರುವುದು ಏಕೆ ಎಂಬುದನ್ನು ನಿರ್ದೇಶಕ ನಿತೇಶ್ ತಿವಾರಿ ರಿವೀಲ್ ಮಾಡಿದ್ದಾರೆ. ಸ್ಯಾನ್ ಡಿಯಾಗೋ ಕಾಮಿಕ್-ಕಾನ್ 2026 ಕಾರ್ಯಕ್ರಮದಲ್ಲಿ ಚಿತ್ರತಂಡ ಈ ಬಗ್ಗೆ ಮಾತನಾಡಿದೆ. ಕುತೂಹಲದ ತಿರುವಿನೊಂದಿಗೆ ಮೊದಲ ಭಾಗ ಕೊನೆಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಇಡೀ ಭಾರತೀಯ ಚಿತ್ರರಂಗದಲ್ಲೇ ‘ರಾಮಾಯಣ’ ಸಿನಿಮಾ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಈ ಸಿನಿಮಾದ ಟೀಸರ್ ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ರಾಮಾಯಣದ ಕಥೆ ಅತ್ಯಂತ ವಿಶಾಲವಾಗಿದೆ. ಹಾಗಾಗಿ ಇದನ್ನು ಎರಡು ಭಾಗಗಳಲ್ಲಿ ಮಾಡಲು ಚಿತ್ರತಂಡ ನಿರ್ಧರಿಸಿದೆ. ಮೊದಲ ಭಾಗ ಮುಗಿದ ತಕ್ಷಣ ಪ್ರೇಕ್ಷಕರಿಗೆ ಎರಡನೇ ಭಾಗವನ್ನು ನೋಡಲೇಬೇಕು ಎಂಬ ಹಪಾಹಪಿ ಶುರುವಾಗುತ್ತದೆ. ನಿರ್ದೇಶಕರು ಕಥೆಯನ್ನು ಅಷ್ಟು ಅದ್ಭುತವಾಗಿ ಹೆಣೆದಿದ್ದಾರಂತೆ.

‘ರಾಮಾಯಣ’ ಸಿನಿಮಾದ ಟ್ರೇಲರ್ ತುಣುಕುಗಳು ಆನ್‌ಲೈನ್‌ನಲ್ಲಿ ಲೀಕ್ ಆಗಿವೆ. ದೆಹಲಿಯ ಭಾರತ್ ಮಂಟಪಂ ಸ್ಕ್ರೀನಿಂಗ್ ವೇಳೆ ವಿಡಿಯೋ ಸೋರಿಕೆಯಾಗಿದೆ. ಈಗ ಕಾಮಿಕ್-ಕಾನ್ ಪ್ರದರ್ಶನದ ಬಳಿಕವೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದರಿಂದ ಅಲರ್ಟ್ ಆಗಿರುವ ನಿರ್ಮಾಪಕ ನಮಿತ್ ಮಲ್ಹೋತ್ರಾ ಮತ್ತು ಕಾನೂನು ತಂಡವು ಪೈರಸಿ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಟ್ರೇಲರ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡುವಂತೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ: ‘ರಾಮಾಯಣ’ ಸೆಟ್‌ನಲ್ಲಿ ಹೇಗಿತ್ತು ಯಶ್ ಹವಾ, ಕೊಡ್ತಿದ್ರು ಸಖತ್ ಕ್ವಾಟ್ಲೆ

ಈ ಬಿಗ್ ಬಜೆಟ್ ಸಿನಿಮಾದಲ್ಲಿ ರಣಬೀರ್ ಕಪೂರ್ ಶ್ರೀರಾಮನಾಗಿ ಕಾಣಿಸಿಕೊಂಡಿದ್ದಾರೆ. ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನ ಪಾತ್ರದಲ್ಲಿ ಅಬ್ಬರಿಸಲಿದ್ದಾರೆ. ಚಿತ್ರಕ್ಕೆ ಹ್ಯಾನ್ಸ್ ಜಿಮ್ಮರ್ ಮತ್ತು ಎ.ಆರ್. ರೆಹಮಾನ್ ಜಂಟಿಯಾಗಿ ಸಂಗೀತ ನೀಡುತ್ತಿದ್ದಾರೆ. ನಟ ಯಶ್ ಕೂಡ ಈ ಚಿತ್ರಕ್ಕೆ ಸಹ-ನಿರ್ಮಾಪಕರಾಗಿದ್ದಾರೆ. ಬಹುನಿರೀಕ್ಷಿತ ಈ ಸಿನಿಮಾ 2026ರ ನವೆಂಬರ್ ತಿಂಗಳಿನಲ್ಲಿ ವಿಶ್ವಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:30 am, Mon, 27 July 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ