AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಂಜಯ್ ದತ್ ಮನಸ್ಸು ಮಾಡಿದ್ದರೆ ಮುಂಬೈ ಬಾಂಬ್ ಸ್ಫೋಟ ತಡೆಯಬಹುದಿತ್ತು’; ಹಿರಿಯ ವಕೀಲ

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಕುರಿತು ಹಿರಿಯ ವಕೀಲ ಉಜ್ವಲ್ ನಿಕಮ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಟ ಸಂಜಯ್ ದತ್ ಅಂದು ಸಮಯಪ್ರಜ್ಞೆ ಮೆರೆದು ಪೊಲೀಸರಿಗೆ ಮಾಹಿತಿ ನೀಡಿದ್ದರೆ ಈ ದುರಂತವನ್ನು ತಡೆಯಬಹುದಿತ್ತು ಎಂದಿದ್ದಾರೆ. ಅಬು ಸಲೇಂ ತಂದಿದ್ದ ಅಕ್ರಮ ಶಸ್ತ್ರಾಸ್ತ್ರಗಳ ಬಗ್ಗೆ ಸಂಜಯ್ ದತ್‌ಗೆ ಮೊದಲೇ ತಿಳಿದಿತ್ತು ಎಂದು ಸಂದರ್ಶನದಲ್ಲಿ ವಿವರಿಸಿದ್ದಾರೆ.

'ಸಂಜಯ್ ದತ್ ಮನಸ್ಸು ಮಾಡಿದ್ದರೆ ಮುಂಬೈ ಬಾಂಬ್ ಸ್ಫೋಟ ತಡೆಯಬಹುದಿತ್ತು’; ಹಿರಿಯ ವಕೀಲ
ಸಂಜಯ್ ದತ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Jul 13, 2026 | 8:15 AM

Share

1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣ ದೇಶದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸರ್ಕಾರಿ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್ ಅವರು ಬಾಲಿವುಡ್ ನಟ ಸಂಜಯ್ ದತ್ ಕುರಿತು ನೀಡಿರುವ ಒಂದು ಸ್ಫೋಟಕ ಹೇಳಿಕೆ ಈಗ ಭಾರೀ ಚರ್ಚೆಗೆ ಕಾರಣವಾಗಿದೆ. ‘ಸಂಜಯ್ ದತ್ ಅಂದು ಸಮಯಪ್ರಜ್ಞೆ ಮೆರೆದಿದ್ದರೆ ಮುಂಬೈ ಬಾಂಬ್ ಸ್ಫೋಟವನ್ನು ತಡೆಯಬಹುದಿತ್ತು. ನೂರಾರು ಅಮಾಯಕ ಜೀವಗಳನ್ನು ಉಳಿಸಬಹುದಿತ್ತು’ ಎಂದು ಅವರು ಹೇಳಿದ್ದಾರೆ. ಖ್ಯಾತ ಮಾಧ್ಯಮ ಸಂಸ್ಥೆ ‘ದಿ ಲಲ್ಲಂಟಾಪ್’ಗೆ ನೀಡಿದ ಸಂದರ್ಶನದಲ್ಲಿ ಉಜ್ವಲ್ ನಿಕಮ್ ಅವರು ಈ ಅಚ್ಚರಿಯ ವಿಷಯಗಳನ್ನು ಹಂಚಿಕೊಂಡಿದ್ದಾರೆ.

ಶಸ್ತ್ರಾಸ್ತ್ರಗಳ ಬಗ್ಗೆ ಮೊದಲೇ ತಿಳಿದಿತ್ತು

ಅಂದು ನಿಖರವಾಗಿ ಏನಾಗಿತ್ತು ಎಂಬುದನ್ನು ವಿವರಿಸಿದ ಉಜ್ವಲ್ ನಿಕಮ್, ‘ಬಾಂಬ್ ಸ್ಫೋಟಕ್ಕೂ ಮೊದಲು ಭೂಗತ ಪಾತಕಿ ಅಬು ಸಲೇಂ ದೊಡ್ಡ ಪ್ರಮಾಣದ ಮಾರಕಾಸ್ತ್ರಗಳನ್ನು ಹೊತ್ತು ಟೆಂಪೋದಲ್ಲಿ ಬಂದಿದ್ದ. ಆ ವಾಹನದಲ್ಲಿ ಹ್ಯಾಂಡ್ ಗ್ರೆನೇಡ್‌ಗಳು ಹಾಗೂ ಎಕೆ-47 ರೈಫಲ್‌ಗಳಿದ್ದವು. ಆ ಮಾರಕಾಸ್ತ್ರಗಳಲ್ಲಿ ಕೆಲವನ್ನು ಸಂಜಯ್ ದತ್ ತನ್ನ ಬಳಿ ಇಟ್ಟುಕೊಂಡಿದ್ದರು. ಆ ಬಳಿಕ ಕೆಲವು ಹ್ಯಾಂಡ್ ಗ್ರೆನೇಡ್‌ಗಳನ್ನು ವಾಪಸ್ ಮಾಡಿದ್ದರು’ ಎಂದಿದ್ದಾರೆ.

ಪೊಲೀಸರಿಗೆ ಮಾಹಿತಿ ನೀಡಿದ್ದರೆ ದೃಶ್ಯವೇ ಬೇರೆಯಾಗುತ್ತಿತ್ತು

‘ತಮ್ಮ ಬಳಿಗೆ ಬಂದಿದ್ದ ಶಸ್ತ್ರಾಸ್ತ್ರಗಳ ಅಕ್ರಮ ಸಾಗಾಟದ ಬಗ್ಗೆ ಸಂಜಯ್ ದತ್ ಅವರಿಗೆ ಮೊದಲೇ ಮಾಹಿತಿ ಇತ್ತು. ಅವರು ತಕ್ಷಣವೇ ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದಿದ್ದರೆ, ಚಿತ್ರಣವೇ ಬದಲಾಗುತ್ತಿತ್ತು. ಪೊಲೀಸರು ತಕ್ಷಣ ಅಲರ್ಟ್ ಆಗಿ ಕಠಿಣ ಕ್ರಮ ಕೈಗೊಳ್ಳುತ್ತಿದ್ದರು. ಇದರಿಂದ ಬಾಂಬ್ ಸ್ಫೋಟದ ಇಡೀ ಪಿತೂರಿ ಮೊದಲೇ ಬಯಲಾಗುತ್ತಿತ್ತು ಮತ್ತು ಸ್ಫೋಟವನ್ನು ತಡೆಯಲು ಸಾಧ್ಯವಾಗುತ್ತಿತ್ತು’ ಎಂದು ನಿಕಮ್ ಅಭಿಪ್ರಾಯಪಟ್ಟಿದ್ದಾರೆ.

ಸಂಜಯ್ ದತ್ ಭಯೋತ್ಪಾದಕನಲ್ಲ

ಇದೇ ವೇಳೆ ಸಂಜಯ್ ದತ್ ಪರವಾಗಿಯೂ ಮಾತನಾಡಿದ ಉಜ್ವಲ್ ನಿಕಮ್, ‘ಸಂಜಯ್ ದತ್ ಅವರಿಗೆ ಸ್ಫೋಟವನ್ನು ತಡೆಯುವ ಅವಕಾಶವಿತ್ತು ಎಂದು ನಾನು ಹೇಳುತ್ತಿರುವುದರ ಅರ್ಥ ಅವರು ಭಯೋತ್ಪಾದಕ ಎಂದಲ್ಲ. ಮುಂಬೈನಲ್ಲಿ ದಾಳಿ ನಡೆಸಬೇಕು ಅಥವಾ ವಿಧ್ವಂಸಕ ಕೃತ್ಯ ಎಸಗಬೇಕು ಎಂಬ ಯಾವುದೇ ಕೆಟ್ಟ ಉದ್ದೇಶ ಸಂಜಯ್ ದತ್ ಅವರಿಗೆ ಇರಲಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಸ್ತುತ ಬಾಲಿವುಡ್ ನಟ ರಾಜ್‌ಕುಮಾರ್ ರಾವ್ ಅವರ ಮುಂಬರುವ ‘ಪ್ರಹಾರ್’ ಚಿತ್ರದ ಕಾರಣಕ್ಕಾಗಿ ಉಜ್ವಲ್ ನಿಕಮ್ ಅವರ ಹೆಸರು ಮುಂಚೂಣಿಯಲ್ಲಿದೆ. ಈ ಸಿನಿಮಾದಲ್ಲಿ ರಾಜ್‌ಕುಮಾರ್ ರಾವ್ ಅವರು ಖ್ಯಾತ ವಕೀಲ ಉಜ್ವಲ್ ನಿಕಮ್ ಅವರ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚರ್ಚೆಗಳ ನಡುವೆಯೇ ನಿಕಮ್ ಅವರ ಸಂದರ್ಶನದ ಹೇಳಿಕೆಗಳು ವೈರಲ್ ಆಗುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:15 am, Mon, 13 July 26

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್