ವೈಲ್ಡ್​ ಕಾರ್ಡ್​ ಎಂಟ್ರಿ ಬೇಡ; ಬಿಗ್​ ಬಾಸ್​ ಮನೆಯಲ್ಲಿ ಹೊಸ ಬೇಡಿಕೆ ಇಟ್ಟ ಸ್ಪರ್ಧಿಗಳು

ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ವೈಲ್ಡ್​ ಕಾರ್ಡ್​ ಎಂಟ್ರಿ ಬೇಡ; ಬಿಗ್​ ಬಾಸ್​ ಮನೆಯಲ್ಲಿ ಹೊಸ ಬೇಡಿಕೆ ಇಟ್ಟ ಸ್ಪರ್ಧಿಗಳು
ಬಿಗ್ ​ಬಾಸ್​ ಮನೆ
Follow us
| Updated By: ಮದನ್​ ಕುಮಾರ್​

Updated on: Apr 03, 2021 | 7:18 AM

ಬಿಗ್​ ಬಾಸ್​ ಸ್ಪರ್ಧಿಗಳು ಕ್ಯಾಮೆರಾ ಮುಂದೆ ತಮ್ಮ ಬೇಡಿಕೆ ಏನು ಎಂಬುದನ್ನು ಹೇಳಿಕೊಳ್ಳುತ್ತಾರೆ. ಕೆಲವೊಂದನ್ನು ಬಿಗ್​ ಬಾಸ್​ ನೀಡಿದರೆ, ಇನ್ನೂ ಕೆಲವೊಂದನ್ನು ಬಿಗ್​ ಬಾಸ್​ ನೀಡಿಲ್ಲ. ಈಗ ಬಿಗ್​ ಬಾಸ್​ ಮನೆ ಮಂದಿ ಹೊಸ ಬೇಡಿಕೆ ಒಂದನ್ನು ಇಟ್ಟಿದ್ದಾರೆ. ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡ ಎಂದು ಹೇಳಿದ್ದಾರೆ. 

ಬಿಗ್​ ಬಾಸ್​ ಮನೆಗೆ ವೈಲ್ಡ್​ ಕಾರ್ಡ್​ ಎಂಟ್ರಿ ಆಗಿದೆ. ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆಗೆ ಸ್ಪರ್ಧಿಯಾಗಿ ಕಾಲಿಟ್ಟಿದ್ದಾರೆ. ಹಾಯಾಗಿದ್ದ 13 ಸ್ಪರ್ಧಿಗಳ ನಡುವೆ ಮತ್ತೋರ್ವನ ಎಂಟ್ರಿ ಆಗಿದೆ. ಆದರೆ, ಈ ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮನೆಯ ಅನೇಕರು ಬೇಸರ ಹೊರ ಹಾಕಿದ್ದಾರೆ.

ಚಕ್ರವರ್ತಿ ಚಂದ್ರಚೂಡ ಬಿಗ್​ ಬಾಸ್​ ಮನೆ ಪ್ರವೇಶಿಸಿದ ಕೂಡಲೇ ಎಲ್ಲರ ಗಮನವನ್ನೂ ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದ್ದರು. ಅಷ್ಟೇ ಅಲ್ಲ, ಎಲ್ಲರ ಹಿಡಿತ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದು ಅನೇಕರಿಗೆ ಇಷ್ಟವಾಗಿಲ್ಲ.

ಇನ್ನು, ಬಿಗ್​ ಬಾಸ್​ ಮನೆಗೆ ಬಂದಾಗ ಎಲ್ಲರ ತಪ್ಪನ್ನು ಹೇಳುವ ಪ್ರಯತ್ನವನ್ನು ಮಾಡಿದ್ದು ಸ್ಪರ್ಧಿಗಳಿಗೆ ತುಂಬಾನೇ ಕಿರಿಕಿರಿ ಉಂಟು ಮಾಡಿದೆ. ಹೀಗಾಗಿ, ವೈಲ್ಡ್​ ಕಾರ್ಡ್​ ಎಂಟ್ರಿಯೇ ಬೇಡವಾಗಿತ್ತು ಎನ್ನುವ ಚರ್ಚೆ ನಡೆದಿದೆ.

ವಿಶ್ವ ಮತ್ತು ಮಂಜು ವೈಲ್ಡ್​ ಕಾರ್ಡ್​ ಎಂಟ್ರಿ ಬಗ್ಗೆ ಮಾತನಾಡಿದ್ದಾರೆ. ನಾವು ಹಾಯಾಗಿದ್ದೆವು. ಈಗ ವೈಲ್ಡ್​ ಕಾರ್ಡ್​ ಎಂಟ್ರಿ ಬೇಡವಾಗಿತ್ತು. ಚಕ್ರವರ್ತಿ ಎಂದಲ್ಲ, ಯಾರೂ ಮನೆಗೆ ಬರಬಾರದಿತ್ತು. ಇಷ್ಟು ದಿನ ನಾವು ಹಾಯಾಗಿದ್ದೆವು ಎಂದು ಹೇಳಿದ್ದಾರೆ. ಅಲ್ಲದೆ, ರಾಜೀವ್​ ಕೂಡ ಬಿಗ್​ ಬಾಸ್​ ಮನೆಯಲ್ಲಿ ಇದೇ ರೀತಿಯ ಅಭಿಪ್ರಾಯ ಹೊರ ಹಾಕಿದ್ದಾರೆ.

ಈ ವೇಳೆ ಶುಭಾ ಮಂಜು ಹಾಗೂ ವಿಶ್ವನಾಥ್​ಗೆ ಬುದ್ಧಿವಾದ ಹೇಳಿದ್ದಾರೆ. ಬಿಗ್​ ಬಾಸ್​ ಮನೆಗೆ ಯಾರೇ ಬರಲಿ. ನೀವು ಆಡಿದ ರೀತಿಯಲ್ಲೇ ಆಡಿ. ನಿಮ್ಮ ತನವನ್ನು ನೀವು ಉಳಿಸಿಕೊಳ್ಳಿ. ಆಗ ಏನು ತೊಂದರೆ ಆಗುವುದಿಲ್ಲ ಎಂದು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: Bigg Boss Kannada 8: ಬಿಗ್​ ಬಾಸ್​ ಮನೆಯಲ್ಲಿ ಕೊನೆಗೂ ಮಂಜು ಕನಸು ನನಸಾಯಿತು..

(Wild card entry should not take Place in Bigg Boss Kannada says Raghu Gowda)

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ