AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ನಿರ್ದೇಶಕ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ರಾಮನಾಗಿ ಮಹೇಶ್​ ಬಾಬು, ಹನುಮಂತನಾಗಿ ಚಿರಂಜೀವಿ? ಇದು ‘ಜೈ ಹನುಮಾನ್​’ ಪ್ಲ್ಯಾನ್​
ಚಿರಂಜೀವಿ, ಮಹೇಶ್​ ಬಾಬು
Follow us
ಮದನ್​ ಕುಮಾರ್​
|

Updated on: Jan 31, 2024 | 11:26 AM

ಒಂದು ಸಿನಿಮಾ ಸೂಪರ್​ ಹಿಟ್​ ಆದರೆ ಅದಕ್ಕೆ ಸೀಕ್ವೆಲ್​ ಮಾಡಲು ನಿರ್ಮಾಪಕರು ಧೈರ್ಯ ತೋರಿಸುತ್ತಾರೆ. ದೊಡ್ಡ ಬಜೆಟ್​ನಲ್ಲಿ ನಿರ್ಮಾಣ ಮಾಡುತ್ತಾರೆ. ಸ್ಟಾರ್​ ಕಲಾವಿದರನ್ನು ಸೀಕ್ವೆಲ್​ನ ಪಾತ್ರವರ್ಗಕ್ಕೆ ಸೇರಿಸಿಕೊಳ್ಳುವ ಆಲೋಚನೆ ಬರುತ್ತದೆ. ಸದ್ಯಕ್ಕೆ ತೇಜ ಸಜ್ಜಾ ನಟನೆಯ ಹನುಮಾನ್​’ (Hanuman) ಚಿತ್ರತಂಡ ಕೂಡ ಅದೇ ರೀತಿ ಪ್ಲ್ಯಾನ್ ಮಾಡುತ್ತಿದೆ. ಈ ಸಿನಿಮಾ ಸೂಪರ್​ ಹಿಟ್​ ಆಗಿದೆ. ಹಾಗಾಗಿ ಅದಕ್ಕೆ ‘ಜೈ ಹನುಮಾನ್​’ (Jai Hanuman) ಶೀರ್ಷಿಕೆಯಲ್ಲಿ ಸೀಕ್ವೆಲ್​ ಸಿದ್ಧಪಡಿಸಲಾಗುತ್ತಿದೆ. ಈ ಸೀಕ್ವೆಲ್​ನಲ್ಲಿ ಮಹೇಶ್​ ಬಾಬು ಮತ್ತು ‘ಮೆಗಾ ಸ್ಟಾರ್​’ ಚಿರಂಜೀವಿ (Chiranjeevi) ಅವರು ನಟಿಸಬೇಕು ಎಂದು ನಿರ್ದೇಶಕ ಪ್ರಶಾಂತ್​ ವರ್ಮಾ ಆಸೆಪಟ್ಟಿದ್ದಾರೆ.

‘ಹನುಮಾನ್​’ ಸಿನಿಮಾದಲ್ಲಿ ಇರುವುದು ಒಂದು ಸೂಪರ್​ ಹೀರೋ ಕಥೆ. ಆಂಜನೇಯನ ಕೃಪೆಯಿಂದ ಸೂಪರ್​ ಪವರ್​ ಪಡೆಯುವ ಹಳ್ಳಿ ಹುಡುಗನ ಕಹಾನಿ ಈ ಸಿನಿಮಾದಲ್ಲಿ ಇದೆ. ಅದೇ ಕಥೆ ‘ಜೈ ಹನುಮಾನ್​’ ಸಿನಿಮಾದಲ್ಲಿ ಮುಂದುವರಿಯಲಿದೆ. ಅದರಲ್ಲಿ ಶ್ರೀರಾಮ ಮತ್ತು ಆಂಜನೇಯನ ಪಾತ್ರಗಳು ಬರಲಿವೆ. ಆ ಪಾತ್ರಗಳನ್ನು ಯಾರು ಮಾಡಬೇಕು ಎಂಬುದರ ಬಗ್ಗೆ ಪ್ರಶಾಂತ್​ ವರ್ಮಾ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ‘ಹನುಮಾನ್’ ಸಿನಿಮಾದ ಸೀಕ್ವೆಲ್​ಗೆ ಸ್ಕ್ರಿಪ್ಟ್ ಪೂಜೆ; ಪ್ರಾಣ ಪ್ರತಿಷ್ಠಾಪನೆ ದಿನ ಒಳ್ಳೆಯ ಕಾರ್ಯ

ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಪ್ರಶಾಂತ್​ ವರ್ಮಾ ಅವರು ಈ ಮಾತುಗಳನ್ನು ಹೇಳಿದ್ದಾರೆ. ‘ಮಹೇಶ್​ ಬಾಬು ಅವರು ಶ್ರೀರಾಮನ ಪಾತ್ರ ಮಾಡಿದರೆ ತುಂಬಾ ಚೆನ್ನಾಗಿರುತ್ತದೆ. ಅದು ನನ್ನ ಮನಸ್ಸಿನಲ್ಲಿದೆ. ನಮ್ಮ ಆಫೀಸ್​ನಲ್ಲಿ ಅವರ ಲುಕ್​ ಬಗ್ಗೆ ಕೆಲವು ಎಡಿಟ್​ಗಳನ್ನು ಮಾಡಿದ್ದೇವೆ. ಮುಂದೇನು ಆಗುತ್ತದೆಯೋ ನೋಡೋಣ’ ಎಂದು ಪ್ರಶಾಂತ್​ ವರ್ಮಾ ಹೇಳಿದ್ದಾರೆ. ‘ಹನುಮಾನ್​’ ಸಿನಿಮಾದಲ್ಲಿ ಸೂಪರ್​ ಹೀರೋ ಪಾತ್ರ ಮಾಡಿದ ತೇಜ ಸಜ್ಜಾ ಅವರು ‘ಜೈ ಹನುಮಾನ್​’ ಚಿತ್ರದ ಪ್ರಮುಖ ಪಾತ್ರದಲ್ಲಿ ಮುಂದುವರಿಯಲಿದ್ದಾರೆ.

ಇದನ್ನೂ ಓದಿ: 250 ಕೋಟಿ ರೂಪಾಯಿ ಕಲೆಕ್ಷನ್​; ವಿಶ್ವ ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಾಧನೆ

ಹನುಮಂತನ ಪಾತ್ರವನ್ನು ಚಿರಂಜೀವಿ ಅವರು ಮಾಡುವ ಸಾಧ್ಯತೆ ಇದೆ ಎಂದಿದ್ದಾರೆ ಪ್ರಶಾಂತ್​ ವರ್ಮಾ. ಇತ್ತೀಚೆಗೆ ಚಿರಂಜೀವಿ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆ ಮಾಡಲಾಯಿತು. ಆ ಬಳಿಕ ಅವರು ತುಂಬ ಬ್ಯುಸಿ ಆಗಿದ್ದಾರೆ. ಸಾಧ್ಯವಾದಾಗ ಅವರನ್ನು ಭೇಟಿ ಮಾಡುವುದಾಗಿ ಪ್ರಶಾಂತ್ ವರ್ಮಾ ಹೇಳಿದ್ದಾರೆ. ಒಂದು ವೇಳೆ ಮಹೇಶ್​ ಬಾಬು ಮತ್ತು ಚಿರಂಜೀವಿ ಅವರು ಈ ಪಾತ್ರಗಳನ್ನು ಒಪ್ಪಿಕೊಂಡರೆ ‘ಜೈ ಹನುಮಾನ್​’ ಸಿನಿಮಾದ ಸ್ಟಾರ್​ ಮೆರುಗು ಹೆಚ್ಚಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್