AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ಮಹೇಶ್ ಬಾಬು ನಟನೆಯ ಹೊಸ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ದಕ್ಷಿಣದ ಈ ಖ್ಯಾತ ನಟ?

Mohanlal: ಇತ್ತೀಚೆಗೆ ಸ್ಟಾರ್ ನಟರ ಚಿತ್ರಗಳು ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿವೆ. ವಿವಿಧ ಭಾಷೆಗಳ ಚಿತ್ರರಂಗದ ಕಲಾವಿದರು ಒಂದೇ ಚಿತ್ರದಲ್ಲಿ ತೆರೆಹಂಚಿಕೊಳ್ಳುವ ಟ್ರೆಂಡ್ ಹೆಚ್ಚುತ್ತಿದೆ. ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲೂ ಹೀಗೇ ಆಗಲಿದೆ ಎನ್ನುವುದು ಟಾಲಿವುಡ್ ಅಂಗಳದಿಂದ ಕೇಳಿಬರುತ್ತಿರುವ ಗುಸುಗುಸು.

Mahesh Babu: ಮಹೇಶ್ ಬಾಬು ನಟನೆಯ ಹೊಸ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ ದಕ್ಷಿಣದ ಈ ಖ್ಯಾತ ನಟ?
ಮೋಹನ್​ಲಾಲ್, ಮಹೇಶ್ ಬಾಬು
TV9 Web
| Updated By: shivaprasad.hs|

Updated on: Feb 16, 2022 | 3:57 PM

Share

ಮಹೇಶ್ ಬಾಬು (Mahesh Babu) ನಟನೆಯ ‘ಸರ್ಕಾರು ವಾರಿ ಪಾಟ’ ಚಿತ್ರದ ಕೆಲಸಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಪ್ರೇಮಿಗಳ ದಿನದ ಸಂದರ್ಭದಲ್ಲಿ ‘ಕಲಾವತಿ’ ಹಾಡನ್ನು ಚಿತ್ರತಂಡ ರಿಲೀಸ್ ಮಾಡಿತ್ತು. ಈ ಹಾಡು ವೀಕ್ಷಕರಿಗೆ ಮೋಡಿ ಮಾಡಿದ್ದಲ್ಲದೇ, ಸದ್ಯ ಟ್ರೆಂಡ್ ಕೂಡ ಆಗುತ್ತಿದೆ. ಇದರ ಬೆನ್ನಿಗೆ ಮಹೇಶ್ ಬಾಬು ನಟನೆಯ ಹೊಸ ಚಿತ್ರವೊಂದರ ಕುರಿತು ಹಲವು ಸುದ್ದಿಗಳು ಟಾಲಿವುಡ್ ಅಂಗಳದಿಂದ ಕೇಳಿಬರುತ್ತಿದೆ. ಕೆಲವು ದಿನಗಳ ಹಿಂದೆ ಮಹೇಶ್ ಬಾಬು ಹಾಗೂ ಖ್ಯಾತ ನಿರ್ದೇಶಕ ತ್ರಿವಿಕ್ರಮ್ ಶ್ರೀನಿವಾಸ್ ನಟನೆಯ ಹೊಸ ಚಿತ್ರ ಅನೌನ್ಸ್ ಆಗಿತ್ತು. ಈ ಚಿತ್ರಕ್ಕೆ ಸದ್ಯ ಅಧಿಕೃತವಾಗಿ ಯಾವುದೇ ಹೆಸರಿಟ್ಟಿಲ್ಲ. ‘ಎಸ್​​ಎಸ್​​ಎಮ್​ಬಿ 28’ (SSMB 28) ಎಂದು ಹೊಸ ಚಿತ್ರವನ್ನು ಗುರುತಿಸಲಾಗುತ್ತಿದೆ. ಇದೀಗ ಚಿತ್ರದ ಕುರಿತು ದೊಡ್ಡ ಸಮಾಚಾರವೊಂದು ಕೇಳಿಬರುತ್ತಿದ್ದು, ಅಭಿಮಾನಿಗಳಿಗೆ ಕುತೂಹಲ ಹೆಚ್ಚಿಸಿದೆ.

ಪ್ರಸ್ತುತ ದಕ್ಷಿಣ ಭಾರತದ ಚಿತ್ರಗಳು ಬಹಳ ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿವೆ. ವಿವಿಧ ಭಾಷೆಗಳಲ್ಲಿ ಚಿತ್ರಗಳು ಬಿಡುಗಡೆಯಾಗುವುದು ಈಗಿನ ಟ್ರೆಂಡ್. ಇದಕ್ಕೆ ಪೂರಕವೆಂಬಂತೆ ಚಿತ್ರತಂಡಗಳು ಕಲಾವಿದರನ್ನೂ ವಿವಿಧ ಭಾಷೆಗಳಿಂದ ಆಯ್ಕೆ ಮಾಡಿಕೊಳ್ಳುತ್ತಾರೆ. ಇದೇ ಮಾದರಿಯಲ್ಲಿ ಮಹೇಶ್ ಬಾಬು ಚಿತ್ರಗಳೂ ತಯಾರಾಗುತ್ತವೆ. ಇದೀಗ ಅವರ ಹೊಸ ಚಿತ್ರಕ್ಕೆ ದಕ್ಷಿಣದ ಖ್ಯಾತ ನಟರೊಬ್ಬರ ಪ್ರವೇಶವಾಗಲಿದೆ ಎನ್ನುವುದು ಸದ್ಯ ಟಾಲಿವುಡ್​ನಲ್ಲಿ ಜೋರಾಗಿ ಕೇಳಿಬರುತ್ತಿರುವ ಗಾಸಿಪ್.

ಮಹೇಶ್ ಬಾಬು ನಟನೆಯ 28ನೇ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸುದ್ದಿಯಾಗುತ್ತಿರುವುದು ಮತ್ಯಾರೂ ಅಲ್ಲ, ಮಲಯಾಳಂ ಸೂಪರ್ ಸ್ಟಾರ್ ಮೋಹನ್​ಲಾಲ್. ಅವರು ಬೇರೆ ಭಾಷೆಗಳ ಚಿತ್ರಗಳಲ್ಲಿ ಅತಿಥಿ ಪಾತ್ರವನ್ನು ಮಾಡುವುದು ಅಪರೂಪವೇನಲ್ಲ. ಈಗಾಗಲೇ ಮೋಹನ್​ಲಾಲ್ ತಮಿಳಿನಲ್ಲಿ ವಿಜಯ್ ಜತೆಗೆ ತೆರೆಹಂಚಿಕೊಂಡಿದ್ದರು. ಕನ್ನಡದಲ್ಲಿ ಪುನೀತ್ ರಾಜ್​ಕುಮಾರ್ ಜತೆ ‘ಮೈತ್ರಿ’ಯಲ್ಲಿ ನಟಿಸಿದ್ದರು. ಇದೇ ಮಾದರಿಯಲ್ಲಿ ಮಹೇಶ್ ಬಾಬು ನಟನೆಯ ಹೊಸ ಚಿತ್ರದಲ್ಲಿ ಮೋಹನ್​ಲಾಲ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಕೇಳಿಬರುತ್ತಿರುವ ಗುಸುಗುಸು.

ಆದರೆ ಮೋಹನ್​ಲಾಲ್ ನಟಿಸುತ್ತಿರುವ ಕುರಿತು ನಟನಾಗಲಿ ಅಥವಾ ಚಿತ್ರತಂಡವಾಗಲಿ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಅದಾಗ್ಯೂ ಈರ್ವರೂ ತೆರೆಹಂಚಿಕೊಳ್ಳುತ್ತಾರೆ ಎಂಬ ವಿಚಾರ ಮಾತ್ರ ಜೋರಾಗಿ ಹರಿದಾಡುತ್ತಿದೆ. ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದು, ಇದು ನಿಜವಾಗಲಿ ಎಂದು ಹಾರೈಸುತ್ತಿದ್ದಾರೆ.

ಮಹೇಶ್ ಬಾಬು ನಟನೆಯ ಹೊಸ ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ತ್ರಿವಿಕ್ರಮ್ ಹಾಗೂ ಮಹೇಶ್ ಬಾಬು ಈ ಚಿತ್ರದ ಮೂಲಕ ಮೂರನೇ ಬಾರಿಗೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ಈ ಹಿಂದೆ ‘ಅಥಡು’ ಹಾಗೂ ‘ಖಲೀಜಾ’ದಲ್ಲಿ ಈರ್ವರ ಕಾಂಬಿನೇಷನ್ ಗಮನ ಸೆಳೆದಿತ್ತು. ಹೊಸ ಚಿತ್ರವನ್ನು ಎಸ್.ರಾಧಾಕೃಷ್ಣ ನಿರ್ಮಾಣ ಮಾಡುತ್ತಿದ್ದಾರೆ.

‘ಎಸ್​​ಎಸ್​​ಎಮ್​ಬಿ28’ ಚಿತ್ರ ‘ಸರ್ಕಾರು ವಾರಿ ಪಾಟ’ದ ಕೆಲಸಗಳು ಮುಗಿದ ನಂತರ ಪ್ರಾರಂಭವಾಗಲಿದೆ. ‘ಸರ್ಕಾರು..’ ಚಿತ್ರದಲ್ಲಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಿದ್ದು, ಪರಶುರಾಜ್ ಆಕ್ಷನ್ ಕಟ್ ಹೇಳಿದ್ದಾರೆ. ಮೇ 12ರಂದು ಚಿತ್ರ ರಿಲೀಸ್ ಆಗಲಿದೆ.

ಇದನ್ನೂ ಓದಿ:

‘ಕಲಾವತಿ..’ ಹಾಡಿಗೆ ತಲೆದೂಗಿದ ಅಭಿಮಾನಿಗಳು; ಮಹೇಶ್ ಬಾಬು ಡ್ಯಾನ್ಸ್​ಗೆ ಕೋಟಿಕೋಟಿ ವೀಕ್ಷಣೆ

‘ಲತಾಜೀ ಇಲ್ಲದೇ ನಾನಿಲ್ಲ’ ಎಂದು ಹೇಳಿದ್ದ ಬಪ್ಪಿ ಲಹಿರಿ; 10 ದಿನದ ಅಂತರದಲ್ಲಿ ಇಬ್ಬರೂ ವಿಧಿವಶ

ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ