AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Upasana Konidela: ಅಮೆರಿಕದಲ್ಲಿ ಮೊದಲ ಮಗುವಿಗೆ ಜನ್ಮ ನೀಡ್ತಾರಾ ರಾಮ್​ ಚರಣ್​ ಪತ್ನಿ ಉಪಾಸನಾ? ಇಲ್ಲಿದೆ ಸ್ಪಷ್ಟನೆ..

Ram Charan | Upasana Kamineni Konidela: ರಾಮ್​ ಚರಣ್​ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಶೀಘ್ರದಲ್ಲೇ ಉಪಾಸನಾ ಕೊನಿಡೆಲಾ ಕೂಡ ಅಲ್ಲಿಗೆ ಹೋಗಲಿದ್ದಾರೆ. ಆದ್ದರಿಂದ ಒಂದಷ್ಟು ಅನುಮಾನ ಮೂಡಿದೆ.

Upasana Konidela: ಅಮೆರಿಕದಲ್ಲಿ ಮೊದಲ ಮಗುವಿಗೆ ಜನ್ಮ ನೀಡ್ತಾರಾ ರಾಮ್​ ಚರಣ್​ ಪತ್ನಿ ಉಪಾಸನಾ? ಇಲ್ಲಿದೆ ಸ್ಪಷ್ಟನೆ..
ರಾಮ್ ಚರಣ್, ಉಪಾಸನಾ ಕೊನಿಡೆಲಾ
ಮದನ್​ ಕುಮಾರ್​
|

Updated on: Feb 28, 2023 | 5:33 PM

Share

ನಟ ರಾಮ್​ ಚರಣ್​ (Ram Charan) ಅವರು ‘ಆರ್​ಆರ್​ಆರ್​’ ಸಿನಿಮಾದ ಯಶಸ್ಸಿನ ಬಳಿಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ವಿಶ್ವಾದ್ಯಂತ ಅವರಿಗೆ ಅಭಿಮಾನಿಗಳಿದ್ದಾರೆ. ಇನ್ನೊಂದು ಖುಷಿಯ ವಿಷಯ ಏನೆಂದರೆ ಅವರು ಶೀಘ್ರದಲ್ಲೇ ತಂದೆ ಆಗಲಿದ್ದಾರೆ. ಅವರ ಪತ್ನಿ ಉಪಾಸನಾ ಕೊನಿಡೆಲಾ (Upasana Konidela) ಪ್ರೆಗ್ನೆಂಟ್​ ಎಂಬ ವಿಚಾರವನ್ನು ಕಳೆದ ಡಿಸೆಂಬರ್​ನಲ್ಲಿ ತಿಳಿಸಲಾಗಿತ್ತು. ಸದ್ಯದಲ್ಲೇ ಅವರು ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ನಡುವೆ ಒಂದು ಗಾಸಿಪ್​ ಹಬ್ಬಿದೆ. ಉಪಾಸನಾ-ರಾಮ್​ ಚರಣ್​ ದಂಪತಿಯ ಮಗು ಅಮೆರಿಕದಲ್ಲಿ (America) ಜನಿಸಲಿದೆ ಎಂದು ಕೆಲವರು ಊಹಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಉಪಾಸನಾ ಅವರು ಸ್ಪಷ್ಟನೆ ನೀಡಿದ್ದಾರೆ. ಭಾರತದಲ್ಲಿಯೇ ತಾವು ಮಗುವಿಗೆ ಜನ್ಮ ನೀಡುವುದಾಗಿ ತಿಳಿಸಿದ್ದಾರೆ.

ಗಾಸಿಪ್​ ಹಬ್ಬಿದ್ದು ಹೇಗೆ?

‘ಆರ್​​ಆರ್​ಆರ್​’ ಸಿನಿಮಾ ಜಾಗತಿಕ ಮಟ್ಟದಲ್ಲಿ ಅನೇಕ ಪ್ರಶಸ್ತಿಗಳನ್ನು ಬಾಚಿಕೊಳ್ಳುತ್ತಿದೆ. ಈಗಾಗಲೇ ‘ಗೋಲ್ಡನ್​ ಗ್ಲೋಬ್​’, ‘ಕ್ರಿಟಿಕ್ಸ್​ ಚಾಯ್ಸ್​ ಮೂವೀ ಅವಾರ್ಡ್ಸ್​’, ‘ಹಾಲಿವುಡ್​ ಕ್ರಿಟಿಕ್ಸ್​ ಅಸೋಸಿಯೇಷನ್​ ಅವಾರ್ಡ್​’ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಗೆದ್ದಿದೆ. ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿಗೂ ಈ ಚಿತ್ರದ ‘ನಾಟು ನಾಟು..’ ಹಾಡು ನಾಮಿನೇಟ್​ ಆಗಿದೆ. ಈ ಎಲ್ಲ ಕಾರಣಗಳಿಂದಾಗಿ ರಾಮ್​ ಚರಣ್​ ಅವರು ಅಮೆರಿಕಕ್ಕೆ ತೆರಳಿದ್ದಾರೆ. ಅಲ್ಲಿ ನಡೆದ ಟಿವಿ ಕಾರ್ಯಕ್ರಮವೊಂದರಲ್ಲಿ ಅವರು ಲೇಡಿ ಡಾಕ್ಟರ್​ ಒಬ್ಬರ ಅಪಾಯಿಂಟ್ಮೆಂಟ್​​ ಪಡೆದುಕೊಂಡಿದ್ದಾರೆ. ಅದರಿಂದಾಗಿ ಅನುಮಾನ ಶುರುವಾಗಿದೆ.

Upasana Pregnant: ಮದುವೆ ಆಗಿ 10 ವರ್ಷದ ಬಳಿಕ ಸಿಹಿ ಸುದ್ದಿ​ ನೀಡಿದ ರಾಮ್​ ಚರಣ್​-ಉಪಾಸನಾ

ಇದನ್ನೂ ಓದಿ
Image
ನರ್ತನ್ ಚಿತ್ರಕ್ಕೆ ರಾಮ್​ ಚರಣ್ ಗ್ರೀನ್ ಸಿಗ್ನಲ್​? ಕೇಳಿ ಬರ್ತಿದೆ ಹೊಸ ಸುದ್ದಿ
Image
‘ಆರ್​ಆರ್​ಆರ್​’ನಿಂದ ರಾಮ್​ ಚರಣ್​ಗೆ ಹೆಚ್ಚಿತು ಬೇಡಿಕೆ; ಬಾಲಿವುಡ್​ನಿಂದ ಬಂತು ಎರಡೆರಡು ಆಫರ್​
Image
ನೆಟ್​ಫ್ಲಿಕ್ಸ್​ ಜತೆ ಕೈ ಜೋಡಿಸಲಿರುವ ರಾಮ್​ ಚರಣ್​? ಹೊಸ ಡೀಲ್​ ಸಲುವಾಗಿ ಮುಂಬೈನಲ್ಲಿ ಮಾತುಕತೆ
Image
ವಿವಾದದಲ್ಲಿ ರಾಮ್​ ಚರಣ್​ ಪತ್ನಿ ಉಪಾಸನಾ; ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ

‘ಶೀಘ್ರದಲ್ಲೇ ಉಪಾಸನಾ ಕೂಡ ಅಮೆರಿಕಕ್ಕೆ ಬರುತ್ತಾರೆ. ನಿಮ್ಮ ನಂಬರ್​ ನಾನು ಪಡೆದುಕೊಳ್ಳುತ್ತೇನೆ’ ಎಂದು ಡಾ. ಜೆನ್​ ಆಸ್ಟನ್​ ಎಂಬ ಲೇಡಿ ಡಾಕ್ಟರ್​ಗೆ ರಾಮ್​ ಚರಣ್​ ಹೇಳಿರುವ ವಿಡಿಯೋ ಕ್ಲಿಪ್​ ವೈರಲ್​ ಆಗಿದೆ. ಹಾಗಾಗಿ ಉಪಾಸನಾ ಅವರು ಅಮೆರಿಕದಲ್ಲೇ ಮೊದಲ ಮಗುವಿಗೆ ಜನ್ಮ ನೀಡಬಹುದು ಎಂದು ಅನೇಕರು ಊಹಿಸಿದ್ದಾರೆ.

ಸ್ಪಷ್ಟನೆ ನೀಡಿದ ಉಪಾಸನಾ ಕೊನಿಡೆಲಾ:

ಈ ವಿಚಾರಕ್ಕೆ ಸಂಬಂಧಿಸಿದ ಗಾಸಿಪ್​ ಜೋರಾಗುತ್ತಿದ್ದಂತೆಯೇ ಉಪಾಸನಾ ಕೊನಿಡೆಲಾ ಅವರು ಟ್ವೀಟ್​ ಮಾಡಿರುವುದು ಗಮನ ಸೆಳೆದಿದೆ. ಅಲ್ಲದೇ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, ‘ಭಾರತದಲ್ಲೇ ಮೊದಲ ಮಗುವಿಗೆ ಜನ್ಮ ನೀಡಲಿದ್ದೇನೆ’ ಎಂದು ಹೇಳಿದ್ದಾರೆ. ಭಾರತದಲ್ಲಿನ ವಿಶ್ವದರ್ಜೆಯ ವೈದ್ಯರ ಜೊತೆಗೆ ಅಮೆರಿಕದ ಡಾ. ಜೆನ್​ ಆಸ್ಟನ್​ ಕೂಡ ಈ ಸಂದರ್ಭದಲ್ಲಿ ಉಪಾಸನಾ ಅವರ ಜೊತೆ ಇರಲಿದ್ದಾರೆ.

RRR ಚಿತ್ರಕ್ಕೆ ಆಸ್ಕರ್​ ಸಿಕ್ಕರೆ ಏನಾಗುತ್ತದೆ? ಅಭಿಪ್ರಾಯ ತಿಳಿಸಿದ ನಿರ್ದೇಶಕ ರಾಜಮೌಳಿ

ರಾಮ್​ ಚರಣ್​ ಮತ್ತು ಉಪಾಸನಾ ಅವರು ಮದುವೆ ಆಗಿದ್ದು 2012ರ ಜೂನ್​ 14ರಂದು. ವೈವಾಹಿಕ ಜೀವನಕ್ಕೆ ಕಾಲಿಟ್ಟು 10 ವರ್ಷಗಳ ಬಳಿಕ ಅವರು ಮೊದಲ ಮಗು ಪಡೆಯಲು ನಿರ್ಧರಿಸಿದರು. ಸದ್ಯದಲ್ಲೇ ಅವರ ಕುಟುಂಬದಿಂದ ಗುಡ್​ ನ್ಯೂಸ್​ ಸಿಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ