ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್​ಗೆ ಉಡುಗೊರೆ ನೀಡಿದ ರಜನಿಕಾಂತ್

ಚೆಸ್​ನಲ್ಲಿ ವಿಶ್ವ ಚಾಂಪಿಯನ್ ಆಗುವ ಮೂಲಕ ಸಾಧನೆ ಮಾಡಿರುವ ಡಿ. ಗುಕೇಶ್ ಅವರಿಗೆ ಚಿತ್ರರಂಗದ ಸಾಧಕರು ಅಭಿನಂದನೆ ಸಲ್ಲಿಸುತ್ತಿದ್ದಾರೆ. ಗುಕೇಶ್ ಅವರಿಗೆ ರಜನಿಕಾಂತ್ ಮತ್ತು ಶಿವಕಾರ್ತಿಕೇಯನ್ ಭೇಟಿಯಾಗುವ ಅವಕಾಶ ಸಿಕ್ಕಿದೆ. ಈ ಸ್ಟಾರ್​ ನಟರು ಗುಕೇಶ್​ಗೆ ಅಭಿನಂದನೆ ತಿಳಿಸಿ, ಉಡುಗೊರೆ ನೀಡಿದ್ದಾರೆ. ಈ ಸಂದರ್ಭದ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.

ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್​ಗೆ ಉಡುಗೊರೆ ನೀಡಿದ ರಜನಿಕಾಂತ್
Rajinikanth, D Gukesh, Sivakarthikeyan
Follow us
ಮದನ್​ ಕುಮಾರ್​
|

Updated on: Dec 26, 2024 | 2:42 PM

ಭಾರತಕ್ಕೆ ಹೆಮ್ಮೆ ತಂದಿರುವ ವಿಶ್ವ ಚೆಸ್ ಚಾಂಪಿಯನ್ ಡಿ. ಗುಕೇಶ್​ ಅವರಿಗೆ ಈಗಾಗಲೇ ಎಲ್ಲರೂ ಅಭಿನಂದನೆ ಸಲ್ಲಿಸಿದ್ದಾರೆ. ಚೆನೈನಲ್ಲಿ ನೆಲೆಸಿರುವ ಅವರನ್ನು ಕಾಲಿವುಡ್​ ಸೆಲೆಬ್ರಿಟಿಗಳು ಕೂಡ ಭೇಟಿ ಮಾಡುತ್ತಿದ್ದಾರೆ. ‘ಸೂಪರ್​ ಸ್ಟಾರ್​’ ರಜನಿಕಾಂತ್, ನಟ ಶಿವಕಾರ್ತಿಕೇಯನ್ ಮುಂತಾದವರು ಡಿ. ಗುಕೇಶ್ ಅವರನ್ನು ಭೇಟಿ ಮಾಡಿ ಬೆನ್ನು ತಟ್ಟಿದ್ದಾರೆ. ಇಂಥ ಸೆಲೆಬ್ರಿಟಿಗಳನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದ್ದಕ್ಕಾಗಿ ಗುಕೇಶ್​ ಅವರು ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೇ, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಗುಕೇಶ್​ ಅವರಿಂದಾಗಿ ಭಾರತಕ್ಕೆ 11 ವರ್ಷಗಳ ಬಳಿಕ ಚೆಸ್ ಚಾಂಪಿಯನ್​ಶಿಪ್ ದೊರೆತಿದೆ. ಹಾಗಾಗಿ ಅವರನ್ನು ಕಂಡರೆ ಎಲ್ಲರಿಗೂ ಹೆಮ್ಮೆ. ಗುಕೇಶ್ ಅವರು ತಮ್ಮ ಪೋಷಕರ ಜೊತೆ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ರಜನಿಕಾಂತ್ ಅವರು ಗುಕೇಶ್​ಗೆ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ. ಅಲ್ಲದೇ, ಪುಸ್ತಕವೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

‘ಸೂಪರ್​ ಸ್ಟಾರ್​ ರಜನಿಕಾಂತ್ ಅವರ ಹಾರೈಕೆಗಳಿಗೆ ಧನ್ಯವಾದಗಳು. ನಮ್ಮನ್ನು ಮನೆಗೆ ಆಹ್ವಾನಿಸಿ, ನಮ್ಮೊಂದಿಗೆ ಅಮೂಲ್ಯವಾದ ಸಮಯ ಕಳೆದು, ಜ್ಞಾನ ಹಂಚಿಕೊಂಡಿದ್ದಕ್ಕೆ ಧನ್ಯವಾದ ಸರ್’ ಎಂದು ಗುಕೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ವಿಶೇಷ ಏನೆಂದರೆ, ಗುಕೇಶ್ ಅವರ ತಂದೆಯ ಹೆಸರು ಕೂಡ ರಜನಿಕಾಂತ್! ಅವರು ಇಎನ್​ಟಿ ಸರ್ಜನ್ ಆಗಿದ್ದಾರೆ. ಗುಕೇಶ್ ತಾಯಿ ಪದ್ಮಾವತಿ ಮೈಕ್ರೋಬಯೋಲಜಿಸ್ಟ್​ ಆಗಿದ್ದಾರೆ.

ಇದನ್ನೂ ಓದಿ: ವಿಶ್ವ ಚೆಸ್ ಚಾಂಪಿಯನ್‌ ಗುಕೇಶ್ ಡ್ಯಾನ್ಸ್ ಹೇಗಿದೆ ನೋಡಿ..

‘ಅಮರನ್’ ಸಿನಿಮಾದ ಯಶಸ್ಸಿನಲ್ಲಿ ಇರುವ ನಟ ಶಿವಕಾರ್ತಿಕೇಯನ್ ಅವರು ಡಿ. ಗುಕೇಶ್​ ಮತ್ತು ಅವರ ಕುಟುಂಬದವರ ಜೊತೆ ಕಾಲ ಕಳೆದಿದ್ದಾರೆ. ಚೆಸ್ ವಿನ್ಯಾಸ ಇರುವ ಕೇಕ್​ ಕತ್ತರಿಸಿ ಸಂಭ್ರಮಿಸಿದ್ದಾರೆ. ಗುಕೇಶ್​ಗೆ ಅವರು ವಾಚ್​ ಗಿಫ್ಟ್ ನೀಡಿದ್ದಾರೆ. ಈ ಫೋಟೋವನ್ನು ಕೂಡ ಗುಕೇಶ್​ ಅವರು ‘ಎಕ್ಸ್’ (ಟ್ವಿಟರ್​) ಖಾತೆಯಲ್ಲಿ ಹಂಚಿಕೊಂಡು ಖುಷಿಪಟ್ಟಿದ್ದಾರೆ.

ಗುಕೇಶ್ ಅವರು ಅನೇಕ ಯುವಕರಿಗೆ ಮಾದರಿ ಆಗಿದ್ದಾರೆ. ಅಮಿತಾಭ್ ಬಚ್ಚನ್​, ಮೋಹನ್​ಲಾಲ್​, ಮಹೇಶ್ ಬಾಬು, ಮುಂತಾದ ಸೆಲೆಬ್ರಿಟಿಗಳು ಕೂಡ ಗುಕೇಶ್​ ಅವರ ಸಾಧನೆಯನ್ನು ಕೊಂಡಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ