AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಥೆ ಬರಹಗಾರ ಮಾಡಂಪು ಕುಂಜುಕುಟ್ಟನ್​ ಕೊರೊನಾದಿಂದ ನಿಧನ

Madampu Kunjukuttan Death: 80 ವರ್ಷ ದಾಟಿದ್ದರಿಂದ ಮಾಡಂಪು ಕುಂಜುಕುಟ್ಟನ್ ಅವರಿಗೆ ವಯೋಸಹಜ ಖಾಯಿಲೆಗಳು ಕೂಡ ಇದ್ದವು. ಸಂಸ್ಕೃತದಲ್ಲಿ ಶಿಕ್ಷಣ ಪಡೆದ ಅವರು ಸಂಸ್ಕೃತ ಶಿಕ್ಷಕನಾಗಿ ಕೆಲಸ ಮಾಡಿದ್ದರು. ಹಲವು ದೇವಾಲಯಗಳಲ್ಲಿ ಅರ್ಚಕರಾಗಿಯೂ ಸೇವೆ ಸಲ್ಲಿಸಿದ್ದರು.

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಥೆ ಬರಹಗಾರ ಮಾಡಂಪು ಕುಂಜುಕುಟ್ಟನ್​ ಕೊರೊನಾದಿಂದ ನಿಧನ
ಮಾಡಂಪು ಕುಂಜುಕುಟ್ಟನ್
ಮದನ್​ ಕುಮಾರ್​
|

Updated on: May 11, 2021 | 12:16 PM

Share

ಮಲಯಾಳಂ ಚಿತ್ರರಂಗದಲ್ಲಿ ಸಾಹಿತಿಯಾಗಿ, ನಟನಾಗಿ, ಚಿತ್ರಕಥೆ ಬರಹಗಾರನಾಗಿ ಗುರುತಿಸಿಕೊಂಡಿದ್ದ ಮಾಡಂಪು ಕುಂಜುಕುಟ್ಟನ್​ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ತ್ರಿಶೂರ್​ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರೆಳೆದಿದ್ದಾರೆ.

80 ವರ್ಷ ದಾಟಿದ್ದರಿಂದ ಮಾಡಂಪು ಕುಂಜುಕುಟ್ಟನ್ ಅವರಿಗೆ ವಯೋಸಹಜ ಖಾಯಿಲೆಗಳು ಕೂಡ ಇದ್ದವು. 1941ರಲ್ಲಿ ಜನಿಸಿದ್ದ ಅವರು ಸಂಸ್ಕೃತ ಮತ್ತು ಹಸ್ತ್ಯಾಯುರ್ವೇದದಲ್ಲಿ (ಆನೆಗಳ ಚಿಕಿತ್ಸೆ) ಶಿಕ್ಷಣ ಪಡೆದರು. ಸಂಸ್ಕೃತ ಶಿಕ್ಷಕನಾಗಿ ಕೆಲಸ ಮಾಡಿದ್ದರು. ಹಲವು ದೇವಾಲಯಗಳಲ್ಲಿ ಅರ್ಚಕರಾಗಿಯೂ ಸೇವೆ ಸಲ್ಲಿಸಿದ್ದರು.

ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪುರಸ್ಕಾರಗಳು ಮಾಡಂಪು ಕುಂಜುಕುಟ್ಟನ್ ಅವರಿಗೆ ಸಿಕ್ಕಿದ್ದವು. ಕರುಣಂ ಸಿನಿಮಾದ ಚಿತ್ರಕಥೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ಖ್ಯಾತಿ ಮಾಡಂಪು ಕುಂಜುಕುಟ್ಟನ್ ಅವರದ್ದು. E4 Elephant ಎಂಬ ಟಿವಿ ಕಾರ್ಯಕ್ರಮದ ನಿರೂಪಣೆ ಮೂಲಕವೂ ಅವರು ಫೇಮಸ್​ ಆಗಿದ್ದರು. ಇಂಥ ಸಾಧಕನ ನಿಧನಕ್ಕೆ ಮಲಯಾಳಂ ಚಿತ್ರರಂಗದ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.

ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್​ಗೆ ಬಲಿಯಾದರು. ಬಾಲಿವುಡ್​ ನಟ ರಾಹುಲ್ ವೋಹ್ರಾ, ತೆಲುಗು ನಟ ಟಿಎನ್​ಆರ್​, ತಮಿಳು ನಟ ಪಾಂಡು, ಕಾಲಿವುಡ್ ನಿರ್ದೇಶಕ ಕೆ.ವಿ. ಆನಂದ್, ಕನ್ನಡದ ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಮುಂತಾದವರು ಈ ವರ್ಷ ಕೊವಿಡ್​ನಿಂದ ಮೃತರಾಗಿದ್ದಾರೆ.

ಇದನ್ನೂ ಓದಿ:

ಸ್ಯಾಂಡಲ್​ವುಡ್​ಗೆ ಮತ್ತೊಂದು ಆಘಾತ; ಕನ್ನಡದ ಹಿರಿಯ ನಟ ರಾಜಾರಾಮ್​ ನಿಧನ

ಕೊರೊನಾದಿಂದ ಟಾಲಿವುಡ್​ ನಟ TNR ನಿಧನ; ಕಂಬನಿ ಮಿಡಿದ ಸೆಲೆಬ್ರಿಟಿಗಳು

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್