‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಅಡ್ವಾಣಿಗೆ ಬಂಪರ್ ಸಂಭಾವನೆ; 15 ಕೋಟಿ ರೂಪಾಯಿ ಪಡೆದ ನಟಿ

ಕಿಯಾರಾ ಅಡ್ವಾಣಿ ಅವರ ಸಂಭಾವನೆ ಮಾತ್ರವಲ್ಲದೆ, ಬೋಲ್ಡ್ ಲುಕ್ ಬಗ್ಗೆಯೂ ಭಾರಿ ಚರ್ಚೆ ಆಗುತ್ತಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಅವರ ಪಾತ್ರ ಸಖತ್ ಭಿನ್ನವಾಗಿದೆ ಎನ್ನಲಾಗಿದೆ. ಯಶ್ ಜೊತೆ ನಟಿಸಿದ್ದಕ್ಕೆ ಕಿಯಾರಾ ಅವರಿಗೆ ಖುಷಿ ಇದೆ. ಅಲ್ಲದೇ, ಅವರಿಗೆ ಕೈತುಂಬ ಸಂಭಾವನೆ ಕೂಡ ಸಿಕ್ಕಿದೆ.

‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಅಡ್ವಾಣಿಗೆ ಬಂಪರ್ ಸಂಭಾವನೆ; 15 ಕೋಟಿ ರೂಪಾಯಿ ಪಡೆದ ನಟಿ
Yash, Kiara Advani

Updated on: Jul 08, 2026 | 8:08 PM

ಮುಖ್ಯಾಂಶಗಳು

  • ಭಾರಿ ಸಂಭಾವನೆ ಪಡೆಯುವ ಟಾಪ್ ನಟಿಯರ ಪಟ್ಟಿಗೆ ಕಿಯಾರಾ ಸೇರ್ಪಡೆ.
  • ‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಜೊತೆ ನಟಿಸಲು 15 ಕೋಟಿ ರೂ. ಪಡೆದ ನಟಿ.
  • ‘ತಬಾಹಿ’ ಹಾಡಿನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿರುವ ಕಿಯಾರಾ ಅಡ್ವಾಣಿ.

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ, ಗೀತು ಮೋಹನ್‌ದಾಸ್ ನಿರ್ದೇಶನದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡಿಸುತ್ತಿದೆ. ಈಗ ಈ ಚಿತ್ರದ ಪ್ರಮುಖ ನಾಯಕಿ ಕಿಯಾರಾ ಅಡ್ವಾಣಿ (Kiara Advani) ಅವರಿಗೆ ನೀಡಲಾಗಿರುವ ಬೃಹತ್ ಮೊತ್ತದ ಸಂಭಾವನೆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ. ಕಿಯಾರಾ ಅವರು ಈ ಸಿನಿಮಾದಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅದಕ್ಕಾಗಿ ಅವರು ಭಾರಿ ಸಂಭಾವನೆಯ (Remuneration) ಬೇಡಿಕೆ ಇಟ್ಟಿದ್ದರು. ಅವರು ಕೇಳಿದ ಸಂಭಾವನೆಯನ್ನು ನಿರ್ಮಾಪಕರು ನೀಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಸಂಭಾವನೆಯಲ್ಲಿ 114% ಏರಿಕೆ!

ಚಿತ್ರರಂಗದ ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಪೋಷಿಸುತ್ತಿರುವ ಕಿಯಾರಾ ಅಡ್ವಾಣಿ ಅವರಿಗೆ ಬರೋಬ್ಬರಿ 15 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ ಎನ್ನಲಾಗುತ್ತಿದೆ. ಇದು ಅವರ ಸಿನಿಮಾ ಕೆರಿಯರ್‌ನಲ್ಲೇ ಅತಿ ಹೆಚ್ಚು ಸಂಭಾವನೆಯಾಗಿದೆ. ‘ಗೇಮ್ ಚೇಂಜರ್’ ಚಿತ್ರಕ್ಕಾಗಿ ಕಿಯಾರಾ ಸುಮಾರು 5ರಿಂದ 7 ಕೋಟಿ ರೂ. ಸಂಭಾವನೆ ಪಡೆದಿದ್ದರು. ಅದಕ್ಕೆ ಹೋಲಿಸಿದರೆ, ‘ಟಾಕ್ಸಿಕ್’ ಚಿತ್ರಕ್ಕಾಗಿ ಅವರ ಸಂಭಾವನೆಯಲ್ಲಿ ಶೇಕಡಾ 114ರಷ್ಟು ಭಾರಿ ಏರಿಕೆಯಾಗಿದೆ.

ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ:

ಈ ಭಾರಿ ಸಂಭಾವನೆಯೊಂದಿಗೆ ಕಿಯಾರಾ ಅಡ್ವಾಣಿ ಅವರು ಭಾರತೀಯ ಚಿತ್ರರಂಗದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್ ನಟಿಯರ ಸಾಲಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ‘ಟಾಕ್ಸಿಕ್’ ಚಿತ್ರದಲ್ಲಿ ಸೌತ್ ಸೂಪರ್ ಸ್ಟಾರ್ ನಯನತಾರಾ ಕೂಡ ಪ್ರಮುಖ ಪಾತ್ರದಲ್ಲಿದ್ದು, ಅವರೊಂದಿಗೆ ಕಿಯಾರಾ ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿದ್ದಾರೆ.

ತಬಾಹಿ ಹಾಡಿನಲ್ಲಿ ಹಾಟ್ ಅವತಾರ:

ಇಂದು (ಜುಲೈ 8) ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಮೊದಲ ವಿಡಿಯೋ ಸಾಂಗ್ ‘ತಬಾಹಿ’ ಧೂಳೆಬ್ಬಿಸುತ್ತಿದೆ. ಕಿಯಾರಾ ಅಡ್ವಾಣಿ ಅವರ ಗ್ಲಾಮರಸ್ ಲುಕ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ಕಾಂಬಿನೇಷನ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಯೂಟ್ಯೂಬ್‌ನಲ್ಲಿ ರಿಲೀಸ್ ಆದ ಕೆಲವೇ ನಿಮಿಷಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದಿರುವ ಈ ಹಾಡು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್‌ನಲ್ಲಿದೆ.

ಇದನ್ನೂ ಓದಿ: ಆಗಸ್ಟ್ 15ಕ್ಕೆ ಬೆಂಗಳೂರಲ್ಲಿ ‘ಟಾಕ್ಸಿಕ್’ ಭರ್ಜರಿ ಈವೆಂಟ್? ಹೇಳಿದ್ದನ್ನು ಮಾಡಿ ತೋರಿಸಿದ ಯಶ್

ಬಾಲಿವುಡ್ ಮಾತ್ರವಲ್ಲದೇ ದಕ್ಷಿಣ ಭಾರತದಲ್ಲಿ ಕೂಡ ಕಿಯಾರಾ ಅಡ್ವಾಣಿ ಅವರಿಗೆ ಬೇಡಿಕೆ ಇದೆ. ‘ಟಾಕ್ಸಿಕ್’ ಬಿಡುಗಡೆ ಆದ ಬಳಿಕ ಅವರ ಖ್ಯಾತಿ ಇನ್ನಷ್ಟು ಹೆಚ್ಚಾಗಲಿದೆ. ಆಗಸ್ಟ್ 26ರಂದು ‘ಟಾಕ್ಸಿಕ್’ ಸಿನಿಮಾ ವಿಶ್ವಾದ್ಯಂತ ತೆರೆಕಾಣಲಿದೆ. ಗೀತು ಮೋಹನ್​ದಾಸ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us