AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಿಬಾಗ್​ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್

ಬಹುನಿರೀಕ್ಷಿತ ಸಿನಿಮಾಗಳಾದ ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಬಿಡುಗಡೆಯ ಕೆಲಸಗಳಲ್ಲಿ ನಟ ಯಶ್ ಅವರು ಬ್ಯುಸಿಯಾಗಿದ್ದಾರೆ. ಅದರ ನಡುವೆ ಅವರು ಖರೀದಿಸಿರುವ ಹೊಸ ಆಸ್ತಿಯ ಬಗ್ಗೆ ಸುದ್ದಿ ಆಗಿದೆ. ಬಾಲಿವುಡ್ ಸೆಲೆಬ್ರಿಟಿಗಳ ರೀತಿ ಯಶ್ ಮತ್ತು ರಾಧಿಕಾ ಪಂಡಿತ್ ಕೂಡ ಅಲಿಬಾಗ್​ನಲ್ಲಿ ಆಸ್ತಿ ಖರೀದಿಸಿದ್ದಾರೆ.

ಅಲಿಬಾಗ್​ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್
Yash, Radhika Pandit
ಮದನ್​ ಕುಮಾರ್​
|

Updated on: Jun 02, 2026 | 9:40 PM

Share

ಕನ್ನಡ ಚಿತ್ರರಂಗದ ತಾರಾ ದಂಪತಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ (Radhika Pandit) ಅವರು ರಿಯಲ್ ಎಸ್ಟೇಟ್ ವಲಯದಲ್ಲಿ ಭಾರಿ ಹೂಡಿಕೆ ಮಾಡಿದ್ದಾರೆ. ಮಹಾರಾಷ್ಟ್ರದ ಅತ್ಯಂತ ಪ್ರಸಿದ್ಧ ಹಾಗೂ ಐಷಾರಾಮಿ ಪ್ರವಾಸಿ ತಾಣಗಳಲ್ಲಿ ಒಂದಾದ ಅಲಿಬಾಗ್‌ನಲ್ಲಿ (Alibag) ಅವರು ಕಡಲತೀರದ ಪ್ರೀಮಿಯಂ ಜಾಗವನ್ನು ಬರೋಬ್ಬರಿ 24 ಕೋಟಿ ರೂಪಾಯಿಗೆ ಖರೀದಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೆ ಸಜ್ಜಾಗುತ್ತಿರುವ ಯಶ್ (Yash) ಅವರು ಈ ಆಸ್ತಿಯ ಕಾರಣದಿಂದಲೂ ಸುದ್ದಿ ಆಗಿದ್ದಾರೆ.

ರಿಯಲ್ ಎಸ್ಟೇಟ್ ಕನ್ಸಲ್ಟೆನ್ಸಿ ಸಂಸ್ಥೆಯಾದ ‘ಲಿಯಾಸಿಸ್ ಫೋರಸ್’ ಪಡೆದುಕೊಂಡಿರುವ ಆಸ್ತಿ ನೋಂದಣಿ ದಾಖಲೆಗಳ ಪ್ರಕಾರ, ರಾಯಗಢ ಜಿಲ್ಲೆಯ ಅಲಿಬಾಗ್ ತಾಲ್ಲೂಕಿನ ಕಾಮತ್ ಗ್ರಾಮದಲ್ಲಿ ಕೃಷಿ ಭೂಮಿಯನ್ನು ಯಶ್-ರಾಧಿಕಾ ದಂಪತಿ ಖರೀದಿಸಿದ್ದಾರೆ. ಮೇ 18ರಂದು ಅಲಿಬಾಗ್‌ನ ಉಪ-ನೋಂದಣಾಧಿಕಾರಿ ಕಚೇರಿಯಲ್ಲಿ ಈ ಹಸ್ತಾಂತರ ಪ್ರಕ್ರಿಯೆ ಅಧಿಕೃತವಾಗಿ ನೋಂದಣಿಯಾಗಿದೆ.

ಸಮುದ್ರಕ್ಕೆ ಮುಖ ಮಾಡಿರುವ ಸುಂದರ ತಾಣ ಇದಾಗಿದೆ. ಈ ಆಸ್ತಿಯು ಒಟ್ಟು 5,289 ಚದರ ಮೀಟರ್ (ಸುಮಾರು 0.5289 ಹೆಕ್ಟೇರ್) ವಿಸ್ತೀರ್ಣದ ಕೃಷಿ ಭೂಮಿಯನ್ನು ಒಳಗೊಂಡಿದೆ. ಜಾಗದ ಜೊತೆಗೆ ಇಲ್ಲೊಂದು ಸುಂದರವಾದ ವಸತಿ ಕಟ್ಟಡವೂ ಇದೆ ಎನ್ನಲಾಗಿದೆ. ದಾಖಲೆಗಳ ಪ್ರಕಾರ, ಈ ಜಾಗವು ಕಿಹಿಮ್ ಬೀಚ್ ಪಕ್ಕದಲ್ಲೇ ಇದೆ. ಅತ್ಯಂತ ಆಕರ್ಷಕ ಜಾಗ ಇದಾಗಿದೆ.

ಈ ಆಸ್ತಿಯ ಪೂರ್ವ ಭಾಗದಲ್ಲಿ ಹಳ್ಳಿಯ ರಸ್ತೆಯಿದ್ದರೆ, ಪಶ್ಚಿಮ ಭಾಗದಲ್ಲಿ ವಿಶಾಲವಾದ ಸಮುದ್ರವಿದೆ. ಇನ್ನು, ಉತ್ತರದ ಗಡಿಯಲ್ಲಿರುವ ಸಣ್ಣ ಗಲ್ಲಿಯೊಂದು ನೇರವಾಗಿ ಬೀಚ್‌ಗೆ ದಾರಿ ಕಲ್ಪಿಸುತ್ತದೆ. ಸೆಲೆಬ್ರಿಟಿಗಳ ನೆಚ್ಚಿನ ತಾಣವಾಗಿರುವ ಅಲಿಬಾಗ್‌ನಲ್ಲಿ ಯಶ್ ದಂಪತಿ ತಮ್ಮ ಎರಡನೇ ಮನೆಗಾಗಿ ಈ ಜಾಗ ಖರೀದಿಸಿದ್ದಾರೆ ಎನ್ನಲಾಗಿದೆ. ಈ ಸುದ್ದಿ ಕೇಳಿ ಅಭಿಮಾನಿಗಳಿಗೆ ಹೆಮ್ಮೆ ಆಗಿದೆ.

ಇದನ್ನೂ ಓದಿ: ‘ಟಾಕ್ಸಿಕ್’ ಟೀಸರ್​ನಲ್ಲಿ ಅಂಥ ದೃಶ್ಯ ಇದೆ ಎಂದು ಟೀಕಿಸಿದವರಿಗೆ ಉತ್ತರ ನೀಡಿದ ಯಶ್

ಈ ಭಾರಿ ಮೊತ್ತದ ರಿಯಲ್ ಎಸ್ಟೇಟ್ ವ್ಯವಹಾರಕ್ಕಾಗಿ ಯಶ್ ಮತ್ತು ರಾಧಿಕಾ ಅವರು 1.44 ಕೋಟಿ ರೂಪಾಯಿ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ. ಇದರೊಂದಿಗೆ 60 ಸಾವಿರ ರೂಪಾಯಿ ನೋಂದಣಿ ಶುಲ್ಕ ಮತ್ತು 5,200 ರೂಪಾಯಿ ದಾಖಲೆ ನಿರ್ವಹಣಾ ವೆಚ್ಚವನ್ನು ಪಾವತಿಸಲಾಗಿದೆ. ಸೆಕ್ಷನ್ 7ರ ಅಡಿಯಲ್ಲಿ ಈ ಭೂಮಿಯನ್ನು ಕೃಷಿ ಭೂಮಿ ಎಂದು ವರ್ಗೀಕರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More