ಮೊದಲ ಹಾಲಿವುಡ್ ಸಂದರ್ಶನದಲ್ಲಿ ಯಶ್ ಹೇಳಿದ್ದೇನು?

Yash movie: ಯಶ್ ನಟನೆಯ ‘ರಾಮಾಯಣ’ ಸಿನಿಮಾ ಸಹ ಜಾಗತಿಕವಾಗಿ ಗಮನ ಸೆಳೆಯುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೆ ನಟ ಯಶ್ ಲಾಸ್ ಏಂಜಲ್ಸ್ ನಲ್ಲಿ ನಡೆದ ‘ಸಿನಿಮಾಕಾನ್ 2026’ ಈ ವೇಳೆ ಅವರು ತಮ್ಮ ಮೊದಲ ಹಾಲಿವುಡ್ ಸಂದರ್ಶನ ನೀಡಿದ್ದಾರೆ. ತಮ್ಮ ಮೊದಲ ಸಂದರ್ಶನದಲ್ಲಿ ಯಶ್ ಅವರು ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಮೊದಲ ಹಾಲಿವುಡ್ ಸಂದರ್ಶನದಲ್ಲಿ ಯಶ್ ಹೇಳಿದ್ದೇನು?
Yash Namit

Updated on: Apr 14, 2026 | 10:53 AM

ನಟ ಯಶ್ (Yash) ಪ್ಯಾನ್ ಇಂಡಿಯಾ ದಾಟಿ ಈಗ ಪ್ಯಾನ್ ವರ್ಲ್ಡ್ ಮೇಲೆ ಕಣ್ಣಿಟ್ಟಿದ್ದಾರೆ. ತಮ್ಮ ‘ಟಾಕ್ಸಿಕ್’ ಸಿನಿಮಾವನ್ನು ಇಂಗ್ಲೀಷ್​​ನಲ್ಲಿಯೂ ಚಿತ್ರೀಕರಿಸಿದ್ದು, ವಿದೇಶಗಳಲ್ಲಿ ಸಿನಿಮಾ ಅನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವ ಯೋಜನೆ ಹಾಕಿಕೊಂಡಿದ್ದಾರೆ. ಇದೀಗ ಯಶ್ ನಟನೆಯ ‘ರಾಮಾಯಣ’ ಸಿನಿಮಾ ಸಹ ಜಾಗತಿಕವಾಗಿ ಗಮನ ಸೆಳೆಯುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಇತ್ತೀಚೆಗಷ್ಟೆ ನಟ ಯಶ್ ಲಾಸ್ ಏಂಜಲ್ಸ್ ನಲ್ಲಿ ನಡೆದ ‘ಸಿನಿಮಾಕಾನ್ 2026’ ಈ ವೇಳೆ ಅವರು ತಮ್ಮ ಮೊದಲ ಹಾಲಿವುಡ್ ಸಂದರ್ಶನ ನೀಡಿದ್ದಾರೆ.

‘ರಾಮಾಯಣ’ ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಮತ್ತು ನಟ ಯಶ್ ಅವರುಗಳು ‘ಸಿನಿಮಾಕಾನ್ 2026’ನಲ್ಲಿ ಭಾಗಿ ಆಗಿದ್ದರು. ಈ ವೇಳೆ ಕೆಲವಾರು ಹಾಲಿವುಡ್ ಟಿವಿ, ಮ್ಯಾಗಜೀನ್​​ಗಳಿಗೆ ಸಂದರ್ಶನವನ್ನು ಇಬ್ಬರೂ ನೀಡಿದ್ದಾರೆ. ಈ ವೇಳೆ ನಟ ಯಶ್ ಅವರು ‘ರಾಮಾಯಣ’ ಮತ್ತು ‘ಟಾಕ್ಸಿಕ್’ ಸಿನಿಮಾಗಳ ಬಗ್ಗೆ ಮಾತನಾಡಿದ್ದಾರೆ ಎನ್ನಲಾಗುತ್ತಿದೆ.

ಫ್ಯಾನ್​​ಡಾಗೊ ಸೇರಿದಂತೆ ಇನ್ನೂ ಕೆಲವು ಸಿನಿಮಾ ಟಿವಿ, ಮ್ಯಾಗಜೀನ್​​​ಗಳಿಗೆ ಯಶ್ ಮತ್ತು ನಮಿತ್ ಮಲ್ಹೋತ್ರಾ ಸಂದರ್ಶನ ನೀಡಿದ್ದಾರೆ. ಯಶ್ ಹಾಗೂ ನಮಿತ್ ಅವರು ಸಂದರ್ಶನ ನೀಡುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಯಶ್, ಎಂದಿನಂತೆ ಗಡ್ಡ ಬಿಟ್ಟು, ನೀಲಿ ಬಣ್ಣದ ಜಾಕೆಟ್, ಜೀನ್ಸ್ ಪ್ಯಾಂಟ್ ಧರಿಸಿ ಖಡಕ್ ಆಗಿ ಕಾಣುತ್ತಿದ್ದಾರೆ.

ಇದನ್ನೂ ಓದಿ:ಯಶ್ ರಾವಣನ ಪಾತ್ರ ಒಪ್ಪಿಕೊಳ್ಳಲು ಕಾರಣ ಆಗಿದ್ದು ಆ ಒಂದು ವಿಷಯ

ಯಶ್ ಅವರು ‘ರಾಮಾಯಣ’ ಸಿನಿಮಾನಲ್ಲಿ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ರಣ್​​ಬೀರ್ ಕಪೂರ್ ಅವರು ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಸಿದ್ದಾರೆ. ‘ರಾಮಾಯಣ’ ಸಿನಿಮಾಕ್ಕೆ ಯಶ್ ಅವರು ಸಹ ನಿರ್ಮಾಪಕ ಸಹ ಹೌದು. ಕೆಲ ದಿನಗಳ ಹಿಂದೆ ನಟ ರಣ್​​ಬೀರ್ ಕಪೂರ್ ಅವರು ಕಾಮಿಕಾನ್​​ಗೆ ಹೋಗಿ ‘ರಾಮಾಯಣ’ದ ಪ್ರಚಾರ ಮಾಡಿದ್ದರು. ಹಾಲಿವುಡ್​​ನಲ್ಲಿ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು.

ಯಶ್ ನಟನೆಯ ‘ರಾಮಾಯಣ’ ಸಿನಿಮಾ ಇದೇ ವರ್ಷ ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ‘ಟಾಕ್ಸಿಕ್’ ಸಿನಿಮಾ ಜೂನ್ 4ಕ್ಕೆ ತೆರೆಗೆ ಬರಲಿದೆ. ‘ಟಾಕ್ಸಿಕ್’ ಸಿನಿಮಾಕ್ಕೆ ಸಹ ಕೆವಿಎನ್ ಜೊತೆಗೆ ಯಶ್ ಸಹ ಬಂಡವಾಳ ಹೂಡಿದ್ದಾರೆ. ಸಿನಿಮಾನಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ, ತಾರಾ ಸುತಾರಿಯಾ ಅವರುಗಳು ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ಗೀತು ಮೋಹನ್​​ದಾಸ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Loading...
Unable to load recommendations.
Follow Us