Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?

Yash Next Movie: ಮೂಲತಃ ಕರ್ನಾಟಕದವರೇ ಆಗಿದ್ದರೂ, ಇದೂವರೆಗೂ ಒಂದೇ ಒಂದು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿಲ್ಲ. ಹೀಗಾಗಿ ಯಶ್-ಪೂಜಾ ಜೋಡಿಯ ಮೋಡಿಯನ್ನು ವೀಕ್ಷಿಸಲು ಸ್ಯಾಂಡಲ್​ವುಡ್ ಸಿನಿಪ್ರಿಯರು ಕಾದು ಕುಳಿತಿದ್ದಾರೆ.

Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Yash-Pooja Hegde
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 11, 2022 | 8:02 PM

ಸಪ್ತ ಸಾಗರದಾಚೆ ಸಖತ್ ಸೌಂಡ್ ಮಾಡಿದ್ದ ಕೆಜಿಎಫ್-2 ಚಿತ್ರದ ಬಳಿಕ ರಾಕಿಂಗ್ ಸ್ಟಾರ್ ಯಶ್ ಯಾವ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ. ಅದು ಕೂಡ ಮಾಸ್ ಚಿತ್ರ ನಿರ್ದೇಶಕ ನರ್ತನ್ ಡೈರೆಕ್ಷನ್​ನಲ್ಲಿ ಎಂಬುದು ವಿಶೇಷ. ಸ್ಯಾಂಡಲ್​ವುಡ್​ನಲ್ಲಿ ಮಫ್ತಿ ಹೆಸರಿನ ಬ್ಲಾಕ್ ಬ್ಲಸ್ಟರ್ ಚಿತ್ರ ನೀಡಿದ್ದ ನರ್ತನ್ ಈಗಾಗಲೇ ಯಶ್​ಗಾಗಿ ಕಥೆ ರೆಡಿ ಮಾಡಿದ್ದಾರೆ. ಹೊಸ ಸಿನಿಮಾದ ಚಿತ್ರಕಥೆಗೆ ರಾಕಿ ಭಾಯ್ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಹೀಗಾಗಿ ಶೀಘ್ರದಲ್ಲೇ ಈ ಚಿತ್ರದ ಮುಹೂರ್ತ ಕೂಡ ಜರುಗಲಿದೆ ಎಂಬ ಮಾತುಗಳು ಗಾಂಧಿನಗರದಿಂದ ಕೇಳಿ ಬರುತ್ತಿದೆ. ಇದರ ಜೊತೆಗೆ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್​ ಪ್ರೊಡಕ್ಷನ್ ಎಂಬ ಮಾತುಗಳಿವೆ. ಅಂದರೆ ಸೂಪರ್ ಡೂಪರ್ ಹಿಟ್ ಚಿತ್ರದ ನೀಡಿದ ಯಶ್, ಬ್ಲಾಕ್ ಬ್ಲಸ್ಟರ್ ಚಿತ್ರ ನಿರ್ದೇಶಿಸಿದ ನರ್ತನ್ ಹಾಗೂ ಕೆವಿಎನ್​ ಚಿತ್ರ ನಿರ್ಮಾಣ ಸಂಸ್ಥೆ ಕೈ ಜೋಡಿಸಲಿದೆ ಎನ್ನಲಾಗುತ್ತಿದೆ.

ಇದರ ಬೆನ್ನಲ್ಲೇ ರಾಕಿಂಗ್ ಸ್ಟಾರ್​ಗೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಕೆಜಿಎಫ್ ಚಿತ್ರದ ಬಳಿಕ ಯಶ್​ ಕಾಣಿಸಿಕೊಳ್ಳುವ ಚಿತ್ರವಾಗಿರುವುದರಿಂದ ಈ ಸಿನಿಮಾ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಅದರಲ್ಲೂ ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಚಿತ್ರವಾಗಿರುವುದರಿಂದ ನಿರೀಕ್ಷೆಗಳು ಮುಗಿಲೆತ್ತರಕ್ಕೇರಲಿದೆ. ಹೀಗಾಗಿಯೇ ಹೊಸ ಚಿತ್ರದಲ್ಲಿ ಸೌತ್ ಸುಂದರಿ ಪೂಜಾ ಹೆಗ್ಡೆ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯೊಂದು ಟಾಲಿವುಡ್​ನಿಂದ ಕೇಳಿ ಬಂದಿದೆ.

ಟಾಲಿವುಡ್ ಮೂಲಗಳ ಮಾಹಿತಿ ಪ್ರಕಾರ, ಪೂಜಾ ಹೆಗ್ಡೆ ಅವರನ್ನು ಚಿತ್ರ ತಂಡವು ಭೇಟಿಯಾಗಿ ಈ ಬಗ್ಗೆ ಮಾತುಕತೆ ನಡೆಸಿದೆಯಂತೆ. ಹೀಗಾಗಿ ಬೀಸ್ಟ್ ನಟಿಯೇ ಯಶ್ ಚಿತ್ರದ ಮುಂದಿನ ಹಿರೋಯಿನ್ ಎಂಬ ಮಾತುಗಳು ಹರಿದಾಡಲಾರಂಭಿಸಿದೆ. ಆದರೆ ಅತ್ತ ಸೌತ್ ಸಿನಿರಂಗದಲ್ಲಿ ಪೂಜಾ ಸಖತ್ ಬಿಝಿಯಾಗಿದ್ದಾರೆ. ಈಗಾಗಲೇ ಪೂರಿ ಜಗನ್ನಾಥ್ ನಿರ್ದೇಶನದ ಬಿಗ್ ಬಜೆಟ್ ಚಿತ್ರ ಜನ ಗಣ ಮನ ಸಿನಿಮಾಗೆ ಡೇಟ್ ನೀಡಿದ್ದಾರೆ.

ಇದನ್ನೂ ಓದಿ
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!
Image
ರಾಧಿಕಾ ಜೊತೆ ನಗ್ನ ದೃಶ್ಯದಲ್ಲಿ ನಟಿಸುವಾಗ ನಡೆದ ಮಾತುಕತೆ ಬಗ್ಗೆ ಬಾಯಿ ಬಿಟ್ಟ ನಟ ಆದಿಲ್ ಹುಸೇನ್​
Image
Radhika Apte: ಕೊವಿಡ್​ ಲಸಿಕೆ ಪಡೆದ ನಟಿ ರಾಧಿಕಾ ಆಪ್ಟೆ; ಸುತ್ತಿಬಳಸಿ ಕಾಲೆಳೆದ ನಟ ವಿಜಯ್​ ವರ್ಮಾ

ಮತ್ತೊಂದೆಡೆ ಎರಡು ಬಾಲಿವುಡ್ ಚಿತ್ರಗಳಲ್ಲೂ ಪೂಜಾ ಹೆಗ್ಡೆ ಕಾಣಿಸಿಕೊಳ್ಳುತ್ತಿದ್ದಾರೆ. ಹಿಂದಿಯಲ್ಲಿ ನಿರ್ಮಾಣವಾಗುತ್ತಿರುವ ಸರ್ಕಸ್ ಎಂಬ ಚಿತ್ರದಲ್ಲಿ ರಣಬೀರ್ ಕಪೂರ್​ಗೆ ನಾಯಕಿಯಾದರೆ, ಕಭಿ ಈದ್, ಕಭಿ ದಿವಾಳಿ ಚಿತ್ರದಲ್ಲಿ ಸಲ್ಮಾನ್ ಖಾನ್ ಜೊತೆ ರೋಮ್ಯಾನ್ಸ್​ ಮಾಡಲಿದ್ದಾರೆ. ಅಂದರೆ ಈಗಾಗಲೇ ಪೂಜಾ ಹೆಗ್ಡೆ ನಾಲ್ಕು ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿಯೇ ಡೇಟ್ಸ್ ಸಮಸ್ಯೆಯಿಂದಾಗಿ ಮಹೇಶ್ ಬಾಬು ಮತ್ತು ತ್ರಿವಿಕ್ರಮ್ ಚಿತ್ರದಿಂದ ಸೌತ್ ಸುಂದರಿ ಹೊರಗುಳಿದಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿದೆ.

ಇದರ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಅವರ ಮುಂದಿನ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ ಎಂಬ ಸುದ್ದಿಗಳು ಟಾಲಿವುಡ್​ನಿಂದ ಕೇಳಿ ಬಂದಿದೆ. ಭಾರತೀಯ ಚಿತ್ರದಲ್ಲಿ ಹೊಸ ಸೆನ್ಸೇಷನ್ ಸೃಷ್ಟಿಸಿರುವ ರಾಕಿ ಭಾಯ್​ಗಾಗಿ ಪೂಜಾ ಹೆಗ್ಡೆ ಡೇಟ್ ಹೊಂದಿಸಲಿದ್ದಾರಾ ಕಾದು ನೋಡಬೇಕಿದೆ. ಅಂದಹಾಗೆ ಪೂಜಾ ಹೆಗ್ಡೆಯ ಮೂಲತಃ ಕರ್ನಾಟಕದವರೇ ಆಗಿದ್ದರೂ, ಇದೂವರೆಗೂ ಒಂದೇ ಒಂದು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿಲ್ಲ. ಹೀಗಾಗಿ ಯಶ್-ಪೂಜಾ ಜೋಡಿಯ ಮೋಡಿಯನ್ನು ವೀಕ್ಷಿಸಲು ಸ್ಯಾಂಡಲ್​ವುಡ್ ಸಿನಿಪ್ರಿಯರು ಕಾದು ಕುಳಿತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ