ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಹೋಗ್ತಾರಾ ಯಶ್? ನೇರವಾಗಿ ಉತ್ತರಿಸಿದ ರಾಕಿಂಗ್​ಸ್ಟಾರ್

ತಮ್ಮ ಫಿಟ್ನೆಸ್​ ಟ್ರೇನರ್ ಕಿಟ್ಟಿ ಜಿಮ್ ಉದ್ಘಾಟನೆಗೆ ಯಶ್ ಆಗಮಿಸಿದ್ದಾರೆ. ಈ ವೇಳೆ ಅವರು ಮಾಧ್ಯಮದ ಜೊತೆಗೆ ಮಾತಿಗೆ ಸಿಕ್ಕರು. ಆಗ ರಾಜಕೀಯದ ಬಗ್ಗೆ ಅವರಿ ಪ್ರಶ್ನೆ ಮಾಡಲಾಗಿದೆ. ‘ಈ ಬಾರಿಯೂ ಲೋಕಸಭೆ ಚುನಾವಣೆಗೆ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರ’ ಎಂದು ಅವರನ್ನು ಕೇಳಲಾಗಿದೆ. ಇದಕ್ಕೆ ಯಶ್ ಉತ್ತರಿಸಿದ್ದಾರೆ.

ಮಂಡ್ಯದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಹೋಗ್ತಾರಾ ಯಶ್? ನೇರವಾಗಿ ಉತ್ತರಿಸಿದ ರಾಕಿಂಗ್​ಸ್ಟಾರ್
ಸುಮಲತಾ-ಯಶ್
Follow us
ರಾಜೇಶ್ ದುಗ್ಗುಮನೆ
|

Updated on: Feb 15, 2024 | 6:58 AM

ಲೋಕಸಭೆ ಚುನಾವಣೆ ಹತ್ತಿರ ಬಂದಿದೆ. ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಯಾರಿಗೆ ಟಿಕೆಟ್ ಸಿಗುತ್ತದೆ ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ಅನೇಕ ಪಕ್ಷಗಳು ಸ್ಟಾರ್​ಗಳನ್ನು ಪ್ರಚಾರಕ್ಕೆ ಕರೆತರುವ ಆಲೋಚನೆಯಲ್ಲಿ ಇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಯಶ್ ಅವರು ಸುಮಲತಾ ಪರವಾಗಿ ಪ್ರಚಾರ ಮಾಡಿದ್ದರು. ಈಗ ಯಶ್ (Yash) ಜನಪ್ರಿಯತೆ ಹೆಚ್ಚಿದೆ. ಹೀಗಾಗಿ, ಅವರು ಲೋಕಸಭೆ ಚುನಾವಣೆ ಪ್ರಮೋಷನ್​ನಲ್ಲಿ ಭಾಗಿ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಆ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

ಯಶ್ ಅವರು ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ. ಹಾಗಂತ ಅವರು ಸುಮ್ಮನೆ ಕೂತಿಲ್ಲ. ಅದಕ್ಕೆ ಏನು ಬೇಕೋ ಆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರ ಗೆಳೆಯ, ಫಿಟ್ನೆಸ್​ ಟ್ರೇನರ್ ಕಿಟ್ಟಿ ಅವರ ಜಿಮ್ ಉದ್ಘಾಟನೆ ನಡೆದಿದೆ. ಇದಕ್ಕೆ ಯಶ್ ತೆರಳಿದ್ದರು. ಈ ವೇಳೆ ಅವರು ಮಾಧ್ಯಮದ ಜೊತೆಗೆ ಮಾತಿಗೆ ಸಿಕ್ಕರು. ಆಗ ರಾಜಕೀಯದ ಬಗ್ಗೆ ಅವರಿ ಪ್ರಶ್ನೆ ಮಾಡಲಾಗಿದೆ.

‘ಈ ಬಾರಿಯೂ ಲೋಕಸಭೆ ಚುನಾವಣೆಗೆ ಮಂಡ್ಯದಲ್ಲಿ ಪ್ರಚಾರ ಮಾಡುತ್ತೀರ’ ಎಂದು ಅವರನ್ನು ಕೇಳಲಾಗಿದೆ. ಇದಕ್ಕೆ ಯಶ್ ಉತ್ತರಿಸಿದ್ದಾರೆ. ‘ರಾಜಕೀಯದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ, ನನ್ನ ಗುರಿ ಬೇರೆಯೇ ಇದೆ’ ಎಂದು ಹೇಳಿದ್ದಾರೆ. ಈ ಮೂಲಕ ಅವರು ಪರೋಕ್ಷವಾಗಿ ಈ ಬಾರಿ ರಾಜಕೀಯದಿಂದ ದೂರವೇ ಇರುವುದಾಗಿ ಹೇಳಿದ್ದಾರೆ. ಸದ್ಯ ಅವರ ಗಮನ ಸಂಪೂರ್ಣವಾಗಿ ಸಿನಿಮಾ ಮೇಲೆ ಇದೆ.

ಇದನ್ನೂ ಓದಿ: 60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ ಅಂಬರೀಷ್​; ಬರ್ತ್​ಡೇ ಪಾರ್ಟಿಯಲ್ಲಿ ಸ್ಟಾರ್​ ಕಲಾವಿದರ ಸಂಗಮ

ಕಳೆದ ವರ್ಷ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಸುಮಲತಾ ಅಂಬರೀಷ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ನಿಖಿಲ್ ಕುಮಾರ್ ಸುಮಲತಾ ವಿರುದ್ಧ ಕಣಕ್ಕೆ ಇಳಿದಿದ್ದರು. ನಿಖಿಲ್ ವಿರುದ್ಧ ಸುಮಲತಾ ದೊಡ್ಡ ಮಟ್ಟದ ಗೆಲುವು ಕಂಡಿದ್ದರು. ಇದಕ್ಕೆ ಯಶ್ ಹಾಗೂ ದರ್ಶನ್ ಒಟ್ಟಾಗಿ ಮಾಡಿದ ಪ್ರಚಾರವೂ ಕಾರಣವಾಗಿತ್ತು. ಈ ಬಾರಿಯೂ ಸುಮಲತಾ ಅವರು ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಈ ಬಗ್ಗೆ ಅವರೇ ಅಧಿಕೃತ ಘೋಷಣೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ