ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಯಾವೆಲ್ಲ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ?

ಜನವರಿ 22ರಂದು ಭವ್ಯವಾದ ರಾಮ ಮಂದಿರ ಉದ್ಘಾಟನೆ ಆಗಲಿದೆ. ಚಿತ್ರರಂಗದ ಅನೇಕ ಗಣ್ಯರು ಇದರಲ್ಲಿ ಭಾಗಿಯಾಗಲಿದ್ದಾರೆ. ಕನ್ನಡದ ಸೆಲೆಬ್ರಿಟಿಗಳನ್ನು ಕೂಡ ಆಹ್ವಾನಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಆಹ್ವಾನಿತರ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಮೂಡಿದೆ.

ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಯಾವೆಲ್ಲ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ?
ರಿಷಬ್​ ಶೆಟ್ಟಿ, ಯಶ್​. ಪ್ರಭಾಸ್​. ರಣಬೀರ್​ ಕಪೂರ್​
Follow us
ಮದನ್​ ಕುಮಾರ್​
| Updated By: Digi Tech Desk

Updated on:Dec 28, 2023 | 11:11 AM

ಅಯೋಧ್ಯೆಯಲ್ಲಿ ನಿರ್ಮಾಣ ಆಗಿರುವ ರಾಮ ಮಂದಿರ (Ram Mandir) ಉದ್ಘಾಟನೆಗಾಗಿ ಭಕ್ತರು ಎದುರು ನೋಡುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾದಿದ್ದಾರೆ. ರಾಮ ಮಂದಿರ ಉದ್ಘಾಟನಾ (Ram Mandir Inauguration) ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂಬ ಆಸೆ ಅನೇಕರಿಗೆ ಇದೆ. ಕೆಲವು ಸೆಲೆಬ್ರಿಟಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಆದರೆ ಎಲ್ಲರಿಗೂ ಅವಕಾಶ ಸಿಗುವುದು ಕಷ್ಟ. ಕೆಲವು ಸೆಲೆಬ್ರಿಟಿಗಳಿಗೆ ಅಧಿಕೃತವಾಗಿ ಆಹ್ವಾನ ಬಂದಿದೆ ಎಂದು ಹೇಳಲಾಗುತ್ತಿದೆ. ಯಶ್​ (Yash), ಪ್ರಭಾಸ್, ರಿಷಬ್​ ಶೆಟ್ಟಿ, ರಣಬೀರ್​ ಕಪೂರ್​ ಮುಂತಾದವರನ್ನು ಆಹ್ವಾನಿಸಲಾಗಿದೆ ಎಂದು ವರದಿ ಆಗಿದೆ.

ಈ ಕುರಿತು ‘ಬಾಲಿವುಡ್​ ಹಂಗಾಮಾ’ ವರದಿ ಪ್ರಕಟ ಮಾಡಿದೆ. ಆಲಿಯಾ ಭಟ್​, ರಣಬೀರ್​ ಕಪೂರ್​, ಟೈಗರ್​ ಶ್ರಾಫ್​, ಸನ್ನಿ ಡಿಯೋಲ್​, ಅಜಯ್​ ದೇವಗನ್​, ಆಯುಷ್ಮಾನ್​ ಖುರಾನಾ, ಪ್ರಭಾಸ್​ ಹಾಗೂ ಯಶ್​ ಅವರಿಗೆ ಆಹ್ವಾನ ಹೋಗಿರುವುದು ಖಚಿತ ಎಂದು ಈ ವರದಿಯಲ್ಲಿ ತಿಳಿಸಲಾಗಿದೆ. ಕನ್ನಡದ ಸೆಲೆಬ್ರಿಟಿಗಳನ್ನು ಕೂಡ ಆಹ್ವಾನಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುತ್ತಾರಾ ಖರ್ಗೆ-ಸೋನಿಯಾ ಗಾಂಧಿ?

ಬೇರೆ ವರದಿಗಳ ಪ್ರಕಾರ ಮುಖೇಶ್​ ಅಂಬಾನಿ, ಸಚಿನ್​ ತೆಂಡೂಲ್ಕರ್​, ವಿರಾಟ್​ ಕೊಹ್ಲಿ, ಗೌತಮ್​ ಅದಾನಿ, ರತನ್ ಟಾಟಾ ಮುಂತಾದವರಿಗೂ ಆಹ್ವಾನ ನೀಡಲಾಗಿದೆ. ಅಂದಾಜು 50 ದೇಶಗಳ ಪ್ರತಿನಿಧಿಗಳನ್ನು ಕೂಡ ಆಹ್ವಾನಿಸಲಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ರಾಮ ಮಂದಿರ ಉದ್ಘಾಟನಾ ಸಮಾರಂಭ ಬಹಳ ನಿರೀಕ್ಷೆ ಮೂಡಿಸಿದೆ. ಅಪಾರ ಸಂಖ್ಯೆಯಲ್ಲಿ ರಾಮನ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ, ರಾಮ ಮಂದಿರ, ಹೊಸ ಮತದಾರರ ಓಲೈಕೆ, ಬಿಜೆಪಿ ಪದಾಧಿಕಾರಿಗಳ ಸಭೆಯ ಪ್ರಮುಖಾಂಶಗಳು

ಜನವರಿ 22ರಂದು ಭವ್ಯವಾದ ರಾಮ ಮಂದಿರ ಉದ್ಘಾಟನೆ ಆಗಲಿದೆ. ಚಿತ್ರರಂಗದ ಅನೇಕ ಗಣ್ಯರು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಅಮಿತಾಭ್​ ಬಚ್ಚನ್​, ಮಾಧುರಿ ದೀಕ್ಷಿತ್​, ಅನುಪಮ್​ ಖೇರ್​, ಅಕ್ಷಯ್​ ಕುಮಾರ್​, ರಾಜ್​ಕುಮಾರ್​ ಹಿರಾನಿ, ಸಂಜಯ್​ ಲೀಲಾ ಬನ್ಸಾಲಿ, ರೋಹಿತ್​ ಶೆಟ್ಟಿ, ಮಹಾವೀರ್​ ಜೈನ್​, ರಜನಿಕಾಂತ್​, ಚಿರಂಜೀವಿ, ಮೋಹನ್​ಲಾಲ್​, ಧನುಶ್​ ಕೂಡ ಹಾಜರಿ ಹಾಕುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:48 pm, Mon, 25 December 23

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ