ಅಯೋಧ್ಯೆಯಲ್ಲಿ ನಿರ್ಮಾಣ ಆಗಿರುವ ರಾಮ ಮಂದಿರ (Ram Mandir) ಉದ್ಘಾಟನೆಗಾಗಿ ಭಕ್ತರು ಎದುರು ನೋಡುತ್ತಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಜನರು ಕಾದಿದ್ದಾರೆ. ರಾಮ ಮಂದಿರ ಉದ್ಘಾಟನಾ (Ram Mandir Inauguration) ಸಮಾರಂಭದಲ್ಲಿ ಪಾಲ್ಗೊಳ್ಳಬೇಕು ಎಂಬ ಆಸೆ ಅನೇಕರಿಗೆ ಇದೆ. ಕೆಲವು ಸೆಲೆಬ್ರಿಟಿಗಳು ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಆದರೆ ಎಲ್ಲರಿಗೂ ಅವಕಾಶ ಸಿಗುವುದು ಕಷ್ಟ. ಕೆಲವು ಸೆಲೆಬ್ರಿಟಿಗಳಿಗೆ ಅಧಿಕೃತವಾಗಿ ಆಹ್ವಾನ ಬಂದಿದೆ ಎಂದು ಹೇಳಲಾಗುತ್ತಿದೆ. ಯಶ್ (Yash), ಪ್ರಭಾಸ್, ರಿಷಬ್ ಶೆಟ್ಟಿ, ರಣಬೀರ್ ಕಪೂರ್ ಮುಂತಾದವರನ್ನು ಆಹ್ವಾನಿಸಲಾಗಿದೆ ಎಂದು ವರದಿ ಆಗಿದೆ.
ಈ ಕುರಿತು ‘ಬಾಲಿವುಡ್ ಹಂಗಾಮಾ’ ವರದಿ ಪ್ರಕಟ ಮಾಡಿದೆ. ಆಲಿಯಾ ಭಟ್, ರಣಬೀರ್ ಕಪೂರ್, ಟೈಗರ್ ಶ್ರಾಫ್, ಸನ್ನಿ ಡಿಯೋಲ್, ಅಜಯ್ ದೇವಗನ್, ಆಯುಷ್ಮಾನ್ ಖುರಾನಾ, ಪ್ರಭಾಸ್ ಹಾಗೂ ಯಶ್ ಅವರಿಗೆ ಆಹ್ವಾನ ಹೋಗಿರುವುದು ಖಚಿತ ಎಂದು ಈ ವರದಿಯಲ್ಲಿ ತಿಳಿಸಲಾಗಿದೆ. ಕನ್ನಡದ ಸೆಲೆಬ್ರಿಟಿಗಳನ್ನು ಕೂಡ ಆಹ್ವಾನಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.
ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗವಹಿಸುತ್ತಾರಾ ಖರ್ಗೆ-ಸೋನಿಯಾ ಗಾಂಧಿ?
ಬೇರೆ ವರದಿಗಳ ಪ್ರಕಾರ ಮುಖೇಶ್ ಅಂಬಾನಿ, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಗೌತಮ್ ಅದಾನಿ, ರತನ್ ಟಾಟಾ ಮುಂತಾದವರಿಗೂ ಆಹ್ವಾನ ನೀಡಲಾಗಿದೆ. ಅಂದಾಜು 50 ದೇಶಗಳ ಪ್ರತಿನಿಧಿಗಳನ್ನು ಕೂಡ ಆಹ್ವಾನಿಸಲಾಗುತ್ತಿದೆ. ಈ ಎಲ್ಲ ಕಾರಣಗಳಿಂದಾಗಿ ರಾಮ ಮಂದಿರ ಉದ್ಘಾಟನಾ ಸಮಾರಂಭ ಬಹಳ ನಿರೀಕ್ಷೆ ಮೂಡಿಸಿದೆ. ಅಪಾರ ಸಂಖ್ಯೆಯಲ್ಲಿ ರಾಮನ ಭಕ್ತರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ: ಲೋಕಸಭೆ ಚುನಾವಣೆ, ರಾಮ ಮಂದಿರ, ಹೊಸ ಮತದಾರರ ಓಲೈಕೆ, ಬಿಜೆಪಿ ಪದಾಧಿಕಾರಿಗಳ ಸಭೆಯ ಪ್ರಮುಖಾಂಶಗಳು
ಜನವರಿ 22ರಂದು ಭವ್ಯವಾದ ರಾಮ ಮಂದಿರ ಉದ್ಘಾಟನೆ ಆಗಲಿದೆ. ಚಿತ್ರರಂಗದ ಅನೇಕ ಗಣ್ಯರು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಅಮಿತಾಭ್ ಬಚ್ಚನ್, ಮಾಧುರಿ ದೀಕ್ಷಿತ್, ಅನುಪಮ್ ಖೇರ್, ಅಕ್ಷಯ್ ಕುಮಾರ್, ರಾಜ್ಕುಮಾರ್ ಹಿರಾನಿ, ಸಂಜಯ್ ಲೀಲಾ ಬನ್ಸಾಲಿ, ರೋಹಿತ್ ಶೆಟ್ಟಿ, ಮಹಾವೀರ್ ಜೈನ್, ರಜನಿಕಾಂತ್, ಚಿರಂಜೀವಿ, ಮೋಹನ್ಲಾಲ್, ಧನುಶ್ ಕೂಡ ಹಾಜರಿ ಹಾಕುವ ನಿರೀಕ್ಷೆ ಇದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:48 pm, Mon, 25 December 23