AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 18ರಂದೇ ಬಿಡುಗಡೆ ಆಗುತ್ತಾ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್?

ರಣಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ಮುಂತಾದವರು ನಟಿಸಿರುವ ‘ರಾಮಾಯಣ’ ಸಿನಿಮಾದ ಟ್ರೇಲರ್ ನೋಡಲು ಫ್ಯಾನ್ಸ್ ಕಾದಿದ್ದಾರೆ. ಚಿತ್ರದ ಬಿಡುಗಡೆಗೆ ಇನ್ನೂ 3 ತಿಂಗಳು ಬಾಕಿ ಇರುವಾಗಲೇ ಟ್ರೇಲರ್ ಬಿಡುಗಡೆ ಮಾಡುವ ಕುರಿತು ನಿರ್ಮಾಪಕರು ಆಲೋಚಿಸಿದ್ದಾರೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಜುಲೈ 18ರಂದೇ ಬಿಡುಗಡೆ ಆಗುತ್ತಾ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್?
Ramayana
ಮದನ್​ ಕುಮಾರ್​
|

Updated on:Jul 08, 2026 | 10:44 PM

Share

ಮುಖ್ಯಾಂಶಗಳು

  • ‘ರಾಮಾಯಣ’ ಟ್ರೇಲರ್ ಬಿಡುಗಡೆ ಬಗ್ಗೆ ಕೇಳಿಬಂದಿದೆ ಬಿಗ್ ಅಪ್ಡೇಟ್.
  • ಬಹಳ ಮುಂಚಿತವಾಗಿಯೇ ಟ್ರೇಲರ್ ಅನಾವರಣ ಮಾಡಲು ನಿರ್ಧಾರ.
  • ಹೊಸ ಟ್ರೆಂಡ್ ಸೆಟ್ ಮಾಡಲು ಪ್ಲ್ಯಾನ್ ಮಾಡಿಕೊಂಡಿರುವ ಚಿತ್ರತಂಡ.

ಬಾಲಿವುಡ್‌ನ ಬಹುನಿರೀಕ್ಷಿತ ಹಾಗೂ ಬಿಗ್ ಬಜೆಟ್ ಸಿನಿಮಾ ಎಂದೇ ಗುರುತಿಸಿಕೊಂಡಿರುವ ನಮಿತ್ ಮಲ್ಹೋತ್ರಾ ನಿರ್ಮಾಣದ ‘ರಾಮಾಯಣ’ (Ramayana) ಚಿತ್ರದ ಬಿಡುಗಡೆಗೆ ಇನ್ನು ನಾಲ್ಕು ತಿಂಗಳಿಗಿಂತ ಕಡಿಮೆ ಸಮಯ ಬಾಕಿಯಿದೆ. ಈ ಚಿತ್ರದ ಮೇಲಿನ ಕ್ರೇಜ್ ಭಾರತೀಯ ಚಿತ್ರರಂಗದಲ್ಲಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈಗ ಸಿನಿಮಾ ತಂಡದಿಂದ ಒಂದು ಎಕ್ಸ್‌ಕ್ಲೂಸಿವ್ ಅಪ್‌ಡೇಟ್ ಸಿಕ್ಕಿದ್ದು, ಚಿತ್ರದ ಬಹುನಿರೀಕ್ಷಿತ ಟ್ರೇಲರ್ (Ramayana Trailer) ಇನ್ನು ಕೆಲವೇ ದಿನಗಳಲ್ಲಿ ಅಂದರೆ, ಜುಲೈ 18ರಂದು ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

3 ತಿಂಗಳು ಮುಂಚಿತವಾಗಿಯೇ ಟ್ರೇಲರ್ ರಿಲೀಸ್:

‘ಬಾಲಿವುಡ್ ಹಂಗಾಮಾ’ ಈ ಬಗ್ಗೆ ವರದಿ ಮಾಡಿದೆ. ಜಾಗತಿಕ ಸಿನಿಮಾಗಳ ಪ್ರಚಾರದ ಮಾದರಿಯನ್ನು ಅನುಸರಿಸಿ ‘ರಾಮಾಯಣ’ ಚಿತ್ರತಂಡ ಸಾಗುತ್ತಿದೆ. ದೀಪಾವಳಿ ಹಬ್ಬಕ್ಕೆ ಸಿನಿಮಾ ಬಿಡುಗಡೆಯಾಗುತ್ತಿದ್ದರೂ, ಸುಮಾರು ಮೂರೂವರೆ ತಿಂಗಳು ಮುಂಚಿತವಾಗಿಯೇ ಅಂದರೆ ಜುಲೈ 18ರಂದೇ ಅಧಿಕೃತ ಥಿಯೇಟ್ರಿಕಲ್ ಟ್ರೇಲರ್ ಅನಾವರಣಗೊಳಿಸಲು ನಿರ್ಧರಿಸಿದೆ. ಸಾಮಾನ್ಯವಾಗಿ ಕೊವಿಡ್ ನಂತರದ ದಿನಗಳಲ್ಲಿ ಸಿನಿಮಾಗಳ ಟ್ರೇಲರ್ ಕೇವಲ ಎರಡು ವಾರಗಳ ಮುಂಚೆ ಬಿಡುಗಡೆಯಾಗುತ್ತಿತ್ತು. ಆದರೆ ‘ರಾಮಾಯಣ’ ಚಿತ್ರತಂಡ ಹೊಸ ಟ್ರೆಂಡ್ ಸೃಷ್ಟಿಸಲು ಹೊರಟಿದೆ.

ಟೀಸರ್ ಬಳಿಕ ಟ್ರೇಲರ್ ಮೇಲೆ ನಿರೀಕ್ಷೆ:

ಕಳೆದ ವರ್ಷ ಜುಲೈ 3ರಂದೇ ಈ ಚಿತ್ರದ ಮೊದಲ ಝಲಕ್ ಬಿಡುಗಡೆ ಮಾಡಲಾಗಿತ್ತು. ನಂತರ ಈ ವರ್ಷದ ಹನುಮಾನ್ ಜಯಂತಿಯ ಶುಭ ಸಂದರ್ಭದಲ್ಲಿ ‘ರಾಮ’ ಹೆಸರಿನ ಟೀಸರ್ ರಿಲೀಸ್ ಮಾಡಿ ರಣಬೀರ್ ಕಪೂರ್ ಅವರ ಲುಕ್ ಪರಿಚಯಿಸಲಾಗಿತ್ತು. ಈ ಟೀಸರ್ ಈಗಾಗಲೇ ಭಾರಿ ಕೌತುಕ ಸೃಷ್ಟಿಸಿದ್ದು, ಈಗ ಬಿಡುಗಡೆಯಾಗಲಿರುವ ಟ್ರೇಲರ್ ಚಿತ್ರದ ಹೈಪ್ ಅನ್ನು ಮತ್ತಷ್ಟು ದುಪ್ಪಟ್ಟು ಮಾಡಲಿದೆ.

ಘಟಾನುಘಟಿ ಕಲಾವಿದರ ಪಾತ್ರವರ್ಗ:

‘ದಂಗಲ್’ ಖ್ಯಾತಿಯ ನಿತೇಶ್ ತಿವಾರಿ ನಿರ್ದೇಶನದ ಈ ಬಹುನಿರೀಕ್ಷಿತ ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಅವರು ಶ್ರೀರಾಮನಾಗಿ, ಸೌತ್ ಸುಂದರಿ ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನುಳಿದಂತೆ, ರಾಕಿಂಗ್ ಸ್ಟಾರ್ ಯಶ್ ಅವರು ರಾವಣನ ಪಾತ್ರದಲ್ಲಿ, ಸನ್ನಿ ಡಿಯೋಲ್ ಹನುಮಂತನಾಗಿ ಹಾಗೂ ರವಿ ದುಬೆ ಲಕ್ಷ್ಮಣನ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಇದನ್ನೂ ಓದಿ: ‘ಬಿಟ್ಟಿ ಪ್ರಚಾರಕ್ಕಾಗಿ ರಾಮಾಯಣ ಚಿತ್ರದಲ್ಲಿ ಕಳಪೆ ವಿಎಫ್‌ಎಕ್ಸ್’: ಸೆಟ್‌ಗೆ ಭೇಟಿ ನೀಡಿದ ಕ್ರಿಯೇಟರ್ ಆರೋಪ

ಈ ದೃಶ್ಯ ವೈಭವಕ್ಕೆ ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಹಾಗೂ ಹಾಲಿವುಡ್‌ನ ಪ್ರಸಿದ್ಧ ಸಂಗೀತ ನಿರ್ದೇಶಕ ಹ್ಯಾನ್ಸ್ ಜಿಮ್ಮರ್ ಒಟ್ಟಾಗಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಈ ಸಿನಿಮಾ ಎರಡು ಭಾಗಗಳಲ್ಲಿ ಬರಲಿದ್ದು, ಮೊದಲ ಭಾಗವು ದೀಪಾವಳಿ ಹಬ್ಬಕ್ಕೆ ಪ್ರಪಂಚದಾದ್ಯಂತ ತೆರೆಕಾಣಲಿದೆ. ಎರಡನೇ ಭಾಗವು ಮುಂದಿನ ವರ್ಷ (2027) ದೀಪಾವಳಿಗೆ ಬಿಡುಗಡೆಯಾಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:02 pm, Wed, 8 July 26

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ