AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗಿವೆ ಈ ಸಿನಿಮಾಗಳು; ಗೆದ್ದಿದೆಷ್ಟು? ಸೋತಿದ್ದೆಷ್ಟು?

ಫರ್ಹಾನ್ ಅಖ್ತರ್ ಅವರು ‘ಡಾನ್ 3’ ಸಿನಿಮಾನ ನಿರ್ದೇಶನ ಮಾಡುತ್ತಿದ್ದಾರೆ. ರಣವೀರ್ ಸಿಂಗ್ ಅವರು ಈ ಚಿತ್ರದಲ್ಲಿ ಡಾನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ. ಈ ಚಿತ್ರದ ಬಜೆಟ್ 275 ಕೋಟಿ ರೂಪಾಯಿ ಇದೆ. ಬಾಲಿವುಡ್​ನ ದೊಡ್ಡ ಬಜೆಟ್ ಸಿನಿಮಾ ಇದು.

ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗಿವೆ ಈ ಸಿನಿಮಾಗಳು; ಗೆದ್ದಿದೆಷ್ಟು? ಸೋತಿದ್ದೆಷ್ಟು?
ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗಿವೆ ಈ ಸಿನಿಮಾಗಳು; ಗೆದ್ದಿದೆಷ್ಟು? ಸೋತಿದ್ದೆಷ್ಟು?
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 10, 2024 | 9:28 AM

Share

ಇತ್ತೀಚೆಗೆ ಬಿಗ್ ಬಜೆಟ್​ ಸಿನಿಮಾಗಳನ್ನು ಮಾಡೋ ಟ್ರೆಂಡ್ ಜೋರಾಗಿದೆ. ಸ್ಟಾರ್​ ಹೀರೋಗಳಿದ್ದಾಗ ನಿರ್ಮಾಪಕರು ದೊಡ್ಡ ಮೊತ್ತ ಹೂಡಲು ಮುಂದೆ ಬರುತ್ತಾರೆ. ಕೆಲವು ನಿರ್ಮಾಪಕರು ಇದರಲ್ಲಿ ಗೆಲುವು ಕಂಡರೆ ಇನ್ನೂ ಕೆಲವು ನಿರ್ಮಾಪಕರು ಕೈ ಸುಟ್ಟುಕೊಂಡಿದ್ದಾರೆ. ದೊಡ್ಡ ಬಜೆಟ್ ಸಿನಿಮಾ ಮಾಡುವಾಗ ನಿರ್ದೇಶಕರ ಆಯ್ಕೆಯಲ್ಲಿ ನಿರ್ಮಾಪಕರು ಎಡವಬಾರದು. ಈ ರೀತಿ ಈಗಾಗಲೇ ರಿಲೀಸ್ ಆದ ಹಾಗೂ ರಿಲೀಸ್ ಆಗಲಿರುವ ಕೆಲವು ಬಿಗ್ ಬಜೆಟ್ (Big Budget) ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.

ಡಾನ್ 3

ಫರ್ಹಾನ್ ಅಖ್ತರ್ ಅವರು ‘ಡಾನ್ 3’ ಸಿನಿಮಾನ ನಿರ್ದೇಶನ ಮಾಡುತ್ತಿದ್ದಾರೆ. ರಣವೀರ್ ಸಿಂಗ್ ಅವರು ಈ ಚಿತ್ರದಲ್ಲಿ ಡಾನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಕಿಯಾರಾ ಅಡ್ವಾಣಿ ನಾಯಕಿ. ಈ ಚಿತ್ರದ ಬಜೆಟ್ 275 ಕೋಟಿ ರೂಪಾಯಿ ಇದೆ. ಬಾಲಿವುಡ್​ನ ದೊಡ್ಡ ಬಜೆಟ್ ಸಿನಿಮಾ ಇದು.

ಪುಷ್ಪ ದಿ ರೂಲ್

‘ಪುಷ್ಪ’ ಸಿನಿಮಾ 100 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಈ ಸಿನಿಮಾ 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಆಗಸ್ಟ್ 15ರಂದು ಸಿನಿಮಾ ರಿಲೀಸ್ ಆಗಲಿದೆ. ಅರ್ಧ ಗಂಟೆ ದೃಶ್ಯಕ್ಕೆ 50 ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ.

ಆದಿಪುರುಷ್

ಆದಿಪುರುಷ್ ಸಿನಿಮಾ ಬಾಲಿವುಡ್​ನ ಬಿಗ್ ಬಜೆಟ್ ಚಿತ್ರಗಳಲ್ಲಿ ಒಂದು. ಈ ಸಿನಿಮಾ ಫ್ಲಾಪ್ ಎನಿಸಿಕೊಂಡಿದೆ. ಈ ಚಿತ್ರದ ಬಜೆಟ್ 500 ಕೋಟಿ ರೂಪಾಯಿ. ರಾಮಾಯಣ ಕಥೆಯನ್ನು ತಿರುಚಲಾಗಿದೆ ಎನ್ನುವ ಆರೋಪ ಇದೆ. ಕಳೆದ ವರ್ಷ ಈ ಸಿನಿಮಾ ರಿಲೀಸ್ ಆಗಿದೆ.

ಆರ್​ಆರ್​ಆರ್​

‘ಆರ್​ಆರ್​ಆರ್’ ಸಿನಿಮಾ ಸೂಪರ್ ಹಿಟ್ ಎನಿಸಿಕೊಂಡಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 1200 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಈ ಸಿನಿಮಾದ ಬಜೆಟ್ 550 ಕೋಟಿ ರೂಪಾಯಿ ಇದೆ. ಈ ಚಿತ್ರದ ಗಳಿಕೆ ಅನೇಕರಿಗೆ ಅಚ್ಚರಿ ತರಿಸಿದೆ. ಈ ಸಿನಿಮಾದಿಂದ ನಿರ್ಮಾಪಕರಿಗೆ ಲಾಭ ಆಗಿದೆ.

ರಾಧೆ ಶ್ಯಾಮ್

‘ರಾಧೆ ಶ್ಯಾಮ್’ ಸಿನಿಮಾದ ಬಜೆಟ್ 300 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಹೀನಾಯ ಸೋಲು ಕಂಡಿದೆ. ಪ್ರಭಾಸ್ ಹಾಗೂ ಪೂಜಾ ಹೆಗ್ಡೆ ಈ ಚಿತ್ರದಲ್ಲಿ ನಟಿಸಿದ್ದರು.

ಕೆಜಿಎಫ್ 2

ಕನ್ನಡದ ‘ಕೆಜಿಎಫ್ 2’ ಸಿನಿಮಾ 100 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗಿದೆ. ಯಶ್ ಅವರು ಹೀರೋ ಆಗಿ ನಟಿಸಿದ ಈ ಸಿನಿಮಾಗೆ ನಾಯಕಿ ಪಾತ್ರದಲ್ಲಿ ಶ್ರೀನಿಧಿ ಶೆಟ್ಟಿ ನಟಿಸಿದ್ದಾರೆ. ಪ್ರಶಾಂತ್ ನೀಲ್ ಸಿನಿಮಾ ನಿರ್ದೇಶನ ಮಾಡಿದ್ದಾರೆ.

ಪೊನ್ನಿಯಿನ್ ಸೆಲ್ವನ್

ಮಣಿರತ್ನಂ ನಿರ್ದೇಶನದ ಈ ಚಿತ್ರದಲ್ಲಿ ದೊಡ್ಡ ತಾರಾ ಬಳಗವೇ ಇದೆ. ಐಶ್ವರ್ಯಾ ರೈ, ಕಾರ್ತಿ, ತ್ರಿಷಾ ಮೊದಲಾದ ಸ್ಟಾರ್​ಗಳು ಈ ಸಿನಿಮಾದಲ್ಲಿ ನಟಿಸಿದ್ದರು.

ಸಾಹೋ

ಸಾಹೋ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಫ್ಲಾಪ್ ಎನಿಸಿಕೊಂಡಿದೆ. ಈ ಚಿತ್ರದ ಬಜೆಟ್ 350 ಕೋಟಿ ರೂಪಾಯಿಗೂ ಅಧಿಕವಾಗಿದೆ.

ಇದನ್ನೂ ಓದಿ: Yash: ‘ರಾಮಾಯಣ’ ಚಿತ್ರಕ್ಕೆ ಸಂಭಾವನೆ ಬದಲು ಬೇರೆಯದ್ದನ್ನೇ ಕೇಳಿದ ಯಶ್?

ಜವಾನ್

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಬಜೆಟ್ 300 ಕೋಟಿ ರೂಪಾಯಿ ವೆಚ್ಛದಲ್ಲಿ ಸಿದ್ಧವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು