AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 3ರಂದು ಬಿಡುಗಡೆ ಆಗಲಿದೆ ಯಶ್ ನಟನೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್

ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದಿಂದ ಅಪ್​ಡೇಟ್​ ಪಡೆಯಲು ಕಾಯುತ್ತಿರುವ ಅಭಿಮಾನಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಯಶ್, ರಣಬೀರ್ ಕಪೂರ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡುತ್ತಿರುವ ಈ ಚಿತ್ರದಿಂದ ಫಸ್ಟ್ ಗ್ಲಿಂಪ್ಸ್ ಸಿದ್ಧವಾಗಿದೆ. ಅಭಿಮಾನಿಗಳ ಎದುರಲ್ಲಿ ಫಸ್ಟ್ ಗ್ಲಿಂಪ್ಸ್ ಅನಾವರಣ ಮಾಡಲು ಚಿತ್ರತಂಡ ಸಕಲ ಸಿದ್ಧತೆ ಮಾಡಿಕೊಂಡಿದೆ.

ಜುಲೈ 3ರಂದು ಬಿಡುಗಡೆ ಆಗಲಿದೆ ಯಶ್ ನಟನೆಯ ‘ರಾಮಾಯಣ’ ಚಿತ್ರದ ಗ್ಲಿಂಪ್ಸ್
Yash, Sai Pallavi, Ranbir Kapoor
ಮದನ್​ ಕುಮಾರ್​
|

Updated on: Jun 30, 2025 | 9:34 PM

Share

ಬಹುತಾರಾಗಣದ ‘ರಾಮಾಯಣ’ ಸಿನಿಮಾ (Ramayana Movie) ಮೇಲೆ ಅಭಿಮಾನಿಗಳು ಇಟ್ಟಿರುವ ನಿರೀಕ್ಷೆ ತುಂಬಾ ದೊಡ್ಡದಿದೆ. ಈ ಸಿನಿಮಾದಲ್ಲಿ ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ (Yash) ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಈವರೆಗೂ ಈ ಚಿತ್ರದಿಂದ ಯಾವುದೇ ಕಂಟೆಂಟ್ ಬಿಡುಗಡೆ ಆಗಿಲ್ಲ. ಇದೇ ಮೊದಲ ಬಾರಿಗೆ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಮಾಡಲು ಚಿತ್ರತಂಡ ತೀರ್ಮಾನಿಸಿದೆ. ಅದಕ್ಕೆ ದಿನಾಂಕ ಕೂಡ ನಿಗದಿ ಆಗಿದೆ. ಹೌದು, ಜುಲೈ 3ರಂದು ‘ರಾಮಾಯಣ’ ಸಿನಿಮಾದ ಫಸ್ಟ್ ಗ್ಲಿಂಪ್ಸ್ (Ramayana Movie First Glimpse) ರಿಲೀಸ್ ಆಗಲಿದೆ. ಆ ಕುರಿತು ಮಾಹಿತಿ ಹೊರಬಿದ್ದಿದೆ.

‘ರಾಮಾಯಣ’ ಸಿನಿಮಾಗೆ ನಿತೀಶ್ ತಿವಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ‘ದಂಗಲ್’, ‘ಚಿಚೋರೆ’ ರೀತಿಯ ಗಮನಾರ್ಹ ಸಿನಿಮಾಗಳನ್ನು ನೀಡಿರುವ ನಿತೀಶ್ ತಿವಾರಿ ಅವರು ಈಗ ಪುರಾಣದ ಕಹಾನಿಯನ್ನು ತೆರೆಗೆ ತರುತ್ತಿದ್ದಾರೆ. ಈ ಸಿನಿಮಾ ಬಹಳ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ. ಚಿತ್ರತಂಡದಿಂದ ಜುಲೈ 3ರಂದು ಬಿಗ್ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಅಭಿಮಾನಿಗಳ ಸಮ್ಮುಖದಲ್ಲೇ ‘ರಾಮಾಯಣ’ ಚಿತ್ರದ ಫಸ್ಟ್ ಗ್ಲಿಂಪ್ಸ್ ಅನಾವರಣ ಆಗಲಿದೆ. ದೇಶದ ಪ್ರಮುಖ ನಗರಗಳಲ್ಲಿ ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯ್ದ ಚಿತ್ರಮಂದಿರಗಳಲ್ಲಿ, ಅಭಿಮಾನಿಗಳ ಎದುರಲ್ಲೇ ಫಸ್ಟ್ ಗ್ಲಿಂಪ್ಸ್ ಬಿತ್ತರ ಆಗಲಿದೆ. ಈ ಸಿನಿಮಾದ ಬಿಡುಗಡೆಗೆ ಇನ್ನೂ ಸಾಕಷ್ಟು ಸಮಯ ಇದೆ. ಆದರೆ ಈಗಲೇ ಈ ಸಿನಿಮಾ ಸಿಕ್ಕಾಪಟ್ಟೆ ಹೈಪ್ ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ
Image
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
Image
ಶಿವಣ್ಣನ ಮನೆಗೆ ಯಶ್-ರಾಧಿಕಾ ಪಂಡಿತ್ ಭೇಟಿ, ಇಲ್ಲಿವೆ ನೋಡಿ ಚಿತ್ರ
Image
ರಾಕಿಂಗ್ ಸ್ಟಾರ್ ಯಶ್ ಈ ವ್ಯಕ್ತಿಗೆ ಬಾಸ್ ಎಂದು ಕರೆಯುತ್ತಾರೆ ಯಶ್
Image
ಕಡಲ ತೀರದಲ್ಲಿ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ ಆಚರಣೆ: ಇಲ್ಲಿವೆ ಚಿತ್ರ

‘ರಾಮಾಯಣ’ ಸಿನಿಮಾದ ಮೇಲೆ ಹೈಪ್ ಹೆಚ್ಚಾಗಲು ಕಾರಣವೇ ಪಾತ್ರವರ್ಗ. ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅವರು ನಟಿಸುತ್ತಿದ್ದಾರೆ. ಸೀತೆಯಾಗಿ ಸಾಯಿ ಪಲ್ಲವಿ ಕಾಣಿಸಿಕೊಳ್ಳಲಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ರಾವಣನ ಪಾತ್ರವನ್ನು ‘ರಾಕಿಂಗ್ ಸ್ಟಾರ್’ ಯಶ್ ಅವರು ಮಾಡುತ್ತಿರುವುದು ವಿಶೇಷ. ಆ ಕಾರಣದಿಂದ ಯಶ್ ಫ್ಯಾನ್ಸ್ ಈ ಸಿನಿಮಾ ಮೇಲೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ ಪುಷ್ಪ

ನಮಿತ್ ಮಲ್ಹೋತ್ರಾ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಯಶ್ ಅವರು ಸಹ-ನಿರ್ಮಾಪಕರಾಗಿದ್ದಾರೆ. ಎರಡು ಪಾರ್ಟ್​ನಲ್ಲಿ ರಾಮಾಯಣ ಸಿನಿಮಾ ಸಿದ್ಧವಾಗುತ್ತಿದೆ. 2026ರ ದೀಪಾವಳಿ ಸಮಯಕ್ಕೆ ಮೊದಲ ಪಾರ್ಟ್ ಬಿಡುಗಡೆ ಆಗಲಿದೆ. 2027ರ ದೀಪಾವಳಿಗೆ 2ನೇ ಪಾರ್ಟ್ ತೆರೆಕಾಣಲಿದೆ. ಘಟಾನುಘಟಿ ತಂತ್ರಜ್ಞರು ಈ ಸಿನಿಮಾದ ತೆರೆಹಿಂದೆ ಕೆಲಸ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?