AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯುತ್ತಮ ಅವಾರ್ಡ್ ಪಡೆದ ಯಶಸ್, ಮನೆ ಮಂದಿ ಮೆಚ್ಚುಗೆ

ಅತ್ಯುತ್ತಮ ಅವಾರ್ಡ್ ಪಡೆದ ಯಶಸ್, ಮನೆ ಮಂದಿ ಮೆಚ್ಚುಗೆ

ರಾಜೇಶ್ ದುಗ್ಗುಮನೆ
|

Updated on: Oct 16, 2026 | 9:50 PM

Share

ಬಿಗ್ ಬಾಸ್ ಕನ್ನಡ 13 ರಲ್ಲಿ ಯಶಸ್ ಈ ವಾರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಎಲ್ಲ ಟಾಸ್ಕ್‌ಗಳಲ್ಲಿ ಅತ್ಯುತ್ತಮವಾಗಿ ಭಾಗವಹಿಸಿ, ತಮ್ಮ ಕೊಡುಗೆಯನ್ನು ನೀಡಿದ್ದಾರೆ. ಪಜಲ್ ಗೇಮ್‌ನಲ್ಲಿ ದೇಹದ ಸಮತೋಲನ ಕಾಯ್ದುಕೊಂಡು, ಗೋಲ್ಡ್ ಕಾಯಿನ್ ಹಂಚಿಕೆಯಲ್ಲೂ ಪ್ರಾಮಾಣಿಕವಾಗಿ ಆಡಿದ್ದಾರೆ. ಈ ಕಾರಣಕ್ಕೆ ಅವರನ್ನು ಗೋಲ್ಡ್ ಪರ್ಫಾರ್ಮರ್ ಆಫ್ ದಿ ವೀಕ್ ಎಂದು ಘೋಷಿಸಲಾಗಿದೆ.

ಬಿಗ್ ಬಾಸ್ ಕನ್ನಡ ಸೀಸನ್ 13 ರಲ್ಲಿ ಈ ವಾರ ಸ್ಪರ್ಧಿ ಯಶಸ್ ತಮ್ಮ ಅಸಾಧಾರಣ ಪ್ರದರ್ಶನದ ಮೂಲಕ ಮನೆಯ ಸದಸ್ಯರು ಹಾಗೂ ವೀಕ್ಷಕರ ಗಮನ ಸೆಳೆದಿದ್ದಾರೆ. ತಮ್ಮ ಕಳಿಕೆಯ ಪ್ರದರ್ಶನದಿಂದ ಇಡೀ ಬಿಗ್ ಬಾಸ್ ಮನೆಯಿಂದ ಪ್ರೀತಿ ಮತ್ತು ಮೆಚ್ಚುಗೆಯನ್ನು ಗಳಿಸಿದ್ದಾರೆ. ಈ ವಾರ ನಡೆದ ಎಲ್ಲಾ ಟಾಸ್ಕ್‌ಗಳಲ್ಲಿ ಯಶಸ್ ಅತ್ಯಂತ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಅವರ ಕಾರ್ಯಕ್ಷಮತೆಯನ್ನು ಗುರುತಿಸಲಾಗಿದೆ. ಟಾಸ್ಕ್ ಆಡುವುದರ ಜೊತೆಗೆ ಗೋಲ್ಡ್ ಕಾಯಿನ್ ಹಂಚಿಕೆ ವಿಷಯದಲ್ಲೂ ಯಶಸ್ ಪ್ರಾಮಾಣಿಕವಾಗಿ ಮತ್ತು ನ್ಯಾಯಸಮ್ಮತವಾಗಿ ವರ್ತಿಸಿದ್ದಾರೆ. ಅವರ ಈ ಅದ್ಭುತ ಪ್ರದರ್ಶನವನ್ನು ಗುರುತಿಸಿ, ಯಶಸ್ ಅವರನ್ನು ಈ ವಾರದ ಗೋಲ್ಡ್ ಪರ್ಫಾರ್ಮರ್ ಆಫ್ ದಿ ವೀಕ್ ಎಂದು ಘೋಷಿಸಲಾಗಿದೆ. ಅವರ ಆಟಕ್ಕೆ ಇದು ಮೈಲೇಜ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More