‘ಟಾಕ್ಸಿಕ್’ ಚಿತ್ರವನ್ನು ಕಿಯಾರಾ ಒಪ್ಪಿಕೊಂಡಿದ್ದೇಕೆ? ಅಸಲಿ ಕಾರಣ ಬಯಲು

ಯಶ್ ನಟನೆಯ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಜೂನ್ 4ರಂದು ತೆರೆಗೆ ಬರಲು ಸಜ್ಜಾಗಿದೆ. ಕಿಯಾರಾ ಅಡ್ವಾಣಿ ತಮ್ಮ ನಾಡಿಯಾ ಪಾತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ವಿಶೇಷ ದೃಷ್ಟಿಗೆ ಶ್ರೇಯಸ್ಸು ನೀಡಿದ್ದಾರೆ. ಸಿನಿಮಾದಲ್ಲಿ ತಮ್ಮ ಪಾತ್ರದ ಸವಾಲು ಮತ್ತು ವಿಶಿಷ್ಟತೆಯನ್ನು ಕಿಯಾರಾ ವಿವರಿಸಿದ್ದಾರೆ.

‘ಟಾಕ್ಸಿಕ್’ ಚಿತ್ರವನ್ನು ಕಿಯಾರಾ ಒಪ್ಪಿಕೊಂಡಿದ್ದೇಕೆ? ಅಸಲಿ ಕಾರಣ ಬಯಲು
ಟಾಕ್ಸಿಕ್ ಸಿನಿಮಾ

Updated on: Mar 30, 2026 | 2:57 PM

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಮಾರ್ಚ್ 19ರಂದೇ ತೆರೆಗೆ ಬರಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಿನಿಮಾ ವಿಳಂಬ ಆಗಿದೆ. ಈಗ ಸಿನಿಮಾ ಬಗ್ಗೆ ಕಿಯಾರಾ ಅಡ್ವಾಣಿ ಮಾತನಾಡಿದ್ದಾರೆ. ಅವರು ಸಿನಿಮಾ ಒಪ್ಪಿಕೊಂಡಿದ್ದರ ಕಾರಣವನ್ನು ವಿವರಿಸಿದ್ದಾರೆ.

‘ಟಾಕ್ಸಿಕ್’ ಸಿನಿಮಾದಲ್ಲಿ ಹಲವು ಹೀರೋಯಿನ್​​ಗಳು ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ ಮೊದಲಾದವರು ಪ್ರಮುಖರು. ಈಗ ರಿಲೀಸ್ ಆಗಿರುವ ಬಹುತೇಕ ಟೀಸರ್ ಹಾಗೂ ಗ್ಲಿಂಪ್ಸ್ ಯಶ್ ಅವರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ಸಿನಿಮಾ ರಿಲೀಸ್ ಪೋಸ್ಟ್​​ಪೋನ್​ ಆಗುವುದಕ್ಕೂ ಮೊದಲು ‘ಟಾಕ್ಸಿಕ್’ ಸಿನಿಮಾದ ಸಾಂಗ್ ರಿಲೀಸ್ ಆಗಿತ್ತು. ಕಿಯಾರಾ ಹಾಗೂ ಯಶ್ ಒಟ್ಟಾಗಿ ಕಾಣಿಸಿಕೊಂಡ ಹಾಡಿನ ಲಿರಿಕಲ್ ವಿಡಿಯೋ ಇದಾಗಿತ್ತು.

ಈಗ ಕಿಯಾರಾ ತಮ್ಮ ಪಾತ್ರದ ಬಗ್ಗೆ ವಿವರಣೆ ನೀಡಿದ್ದಾರೆ. ‘ನಾನು ಈವರೆಗೆ ನೋಡಿದ ಭಿನ್ನ ಪಾತ್ರಗಳಲ್ಲಿ ನಾಡಿಯಾ ಕೂಡ ಒಂದು. ನಮ್ಮ ನಿರ್ದೇಶಕಿ ಗಿತು ಮೋಹನ್​​ದಾಸ್ ಪಾತ್ರವನ್ನು ಬರೆದ ರೀತಿ ಹಾಗೂ ಪಾತ್ರವನ್ನು ಕೆತ್ತಿದ ರೀತಿ ನನಗೆ ಇಷ್ಟ ಆಯಿತು. ನಾನು ಆ ಚಾಲೆಂಜ್​​ನ ಸ್ವೀಕರಿಸಬೇಕು ಎನಿಸಿತು. ಅವರ ಆಲೋಚನೆಯಲ್ಲಿ ನನ್ನ ಪಾತ್ರವನ್ನು ಹೇಗೆ ನಿರ್ವಹಿಸಿದ್ದೇನೆ ಎಂಬುದನ್ನು ನೀವೇ ನೋಡಿ’ ಎಂದು ಕಿಯಾರಾ ಕೋರಿದ್ದಾರೆ.

ಇತ್ತೀಚೆಗೆ ರಿಲೀಸ್ ಆದ ‘ಟಾಕ್ಸಿಕ್’ ಚಿತ್ರದ ‘ತಬಾಹಿ’ ಹಾಡು ಎಲ್ಲರ ಮೆಚ್ಚುಗೆ ಪಡೆದಿದೆ. ಈ ಹಾಡಿನ ವಿಡಿಯೋ ಕೂಡ ರಿಲೀಸ್ ಆಗಬೇಕಿತ್ತು ಎಂದು ಅಭಿಮಾನಿಗಳು ಬಯಸಿದ್ದರು. ಶೀಘ್ರವೇ ಅದನ್ನು ರಿಲೀಸ್ ಮಾಡುವ ಆಲೋಚನೆ ತಂಡಕ್ಕೆ ಇದೆ. ವಿಶಾಲ್ ಮಿಶ್ರಾ ಅವರು ಈ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ‘ಜನ ನಾಯಗನ್’ ಮೇಲಿನ ಆಸೆ ಬಿಟ್ಟ ಕೆವಿಎನ್, ಗಮನವೆಲ್ಲ ‘ಟಾಕ್ಸಿಕ್’ ಮೇಲೆ

ಯೋಗರಾಜ್ ಭಟ್ ಅವರು ಸಾಹಿತ್ಯ ಬರೆದಿದ್ದಾರೆ. ಈ ಸಿನಿಮಾ ಜೂನ್ 4ರಂದು ರಿಲೀಸ್ ಆಗಲಿದೆ. ಮಲಯಾಳಂನ ಗೀತು ಮೋಹನ್​ ದಾಸ್ ನಿರ್ದೇಶನ ಮಾಡಿದ್ದಾರೆ. ಕೆವಿಎನ್​ ಪ್ರೊಡಕ್ಷನ್ಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us