AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಪ್ಪ’ ಸಿನಿಮಾಗೆ ಯೋಗಿ ಆದಿತ್ಯನಾಥ್‍ ಬೆಂಬಲ; ಜೂನ್‍ 27ರಂದು ವಿಶ್ವಾದ್ಯಂತ ಬಿಡುಗಡೆ

‘ಕಣ್ಣಪ್ಪ’ ಸಿನಿಮಾದ ಬಿಡುಗಡೆ ದಿನಾಂಕವನ್ನು ಯೋಗಿ ಆದಿತ್ಯನಾಥ್‍ ಅವರು ಘೋಷಿಸಿದ್ದಾರೆ. ಅವರ ಶುಭ ಹಾರೈಕೆಗಳಿಂದ ಚಿತ್ರತಂಡಕ್ಕೆ ಖುಷಿಯಾಗಿದೆ. ಚಿತ್ರತಂಡದ ಉತ್ಸಾಹ ಇಮ್ಮಡಿ ಆಗಿದೆ. ಸದ್ಯದಲ್ಲೇ ‘ಕಣ್ಣಪ್ಪ’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಲಿದೆ. ಮೋಹನ್‍ ಬಾಬು, ವಿಷ್ಣು ಮಂಚು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

‘ಕಣ್ಣಪ್ಪ’ ಸಿನಿಮಾಗೆ ಯೋಗಿ ಆದಿತ್ಯನಾಥ್‍ ಬೆಂಬಲ; ಜೂನ್‍ 27ರಂದು ವಿಶ್ವಾದ್ಯಂತ ಬಿಡುಗಡೆ
Kannappa Movie Team With Yogi Adityanath
ಮದನ್​ ಕುಮಾರ್​
|

Updated on: Apr 11, 2025 | 9:44 PM

Share

ಟಾಲಿವುಡ್​ನ ಪ್ರಸಿದ್ಧ ನಟ ಮೋಹನ್‍ ಬಾಬು (Mohan Babu) ಅವರು ನಿರ್ಮಿಸಿರುವ ‘ಕಣ್ಣಪ್ಪ’ ಸಿನಿಮಾ (Kannappa Movie) ಏಪ್ರಿಲ್‍ 25ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಸಿನಿಮಾದ ತಾಂತ್ರಿಕ ಕೆಲಸಗಳು ವಿಳಂಬ ಆಗಿದ್ದರಿಂದ ಬಿಡುಗಡೆಯನ್ನು ಮುಂದೂಡಲಾಗಿತ್ತು. ಈಗ ಚಿತ್ರತಂಡವು ಹೊಸ ರಿಲೀಸ್ ದಿನಾಂಕ ಘೋಷಿಸಿದೆ. ಜೂನ್‍ 27ರಂದು ವಿಶ್ವಾದ್ಯಂತ ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಪ್ಯಾನ್‍ ಇಂಡಿಯಾ ಸಿನಿಮಾ ತೆಲುಗು, ಹಿಂದಿ, ಕನ್ನಡ, ತಮಿಳು, ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ. ಶುಕ್ರವಾರ (ಏಪ್ರಿಲ್ 11) ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‍ (Yogi Adityanath) ಅವರು ‘ಕಣ್ಣಪ್ಪ’ ಸಿನಿಮಾದ ಬಿಡುಗಡೆ ದಿನಾಂಕದ ಪೋಸ್ಟರ್ ಅನಾವರಣ ಮಾಡಿದರು.

‘ಮೋಹನ್‍ ಬಾಬು ಹಾಗೂ ಅವರ ಪುತ್ರ ವಿಷ್ಣು ಮಂಚು ಅವರ ಕನಸಿನ ಕೂಸಾಗಿ ‘ಕಣ್ಣಪ್ಪ’ ಚಿತ್ರ ಮೂಡಿಬಂದಿದೆ. ಇದು ಕೇವಲ ಸಿನಿಮಾ ಆಗಿರದೇ ಒಂದು ಅಭೂತಪೂರ್ವ ಅನುಭವವಾಗಬೇಕು. ಆ ನಿಟ್ಟಿನಲ್ಲಿ ಹಗಲು-ರಾತ್ರಿ ಶ್ರಮಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಚಿತ್ರವು ಉತ್ತಮವಾಗಿ ಮೂಡಿಬಂದಿದೆ. ಪ್ರೇಕ್ಷಕರ ನಿರೀಕ್ಷೆಗೆ ತಕ್ಕ ಹಾಗೆ ನಿಲುಕಲಿದೆ’ ಎಂದು ಚಿತ್ರತಂಡ ಹೇಳಿದೆ.

ಯೋಗಿ ಆದಿತ್ಯನಾಥ್‍ ಅವರು ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದಾಗ ಮೋಹನ್‍ ಬಾಬು, ವಿಷ್ಣು ಮಂಚು, ಪ್ರಭುದೇವ, ವಿನಯ್‍ ಮಹೇಶ್ವರಿ ಅವರು ಹಾಜರಿದ್ದರು. ಈ ಸಿನಿಮಾ ಯಶಸ್ವಿ ಆಗಲಿ ಎಂದು ಯೋಗಿ ಆದಿತ್ಯನಾಥ್ ಹಾರೈಸಿದರು. ಚಿತ್ರವು ದೇಶಾದ್ಯಂತ ಜನರಿಗೆ ಇಷ್ಟವಾಗಲಿದೆ ಎಂದು ಕೂಡ ಅವರು ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ
Image
ಹೆಸರು ಬದಲಾವಣೆ ಮಾಡಿಕೊಳ್ಳಲಿರುವ ಅಲ್ಲು ಅರ್ಜುನ್, ಕಾರಣವೇನು?
Image
ಚಿತ್ರರಂಗದಲ್ಲಿ 22 ವರ್ಷ ಪೂರೈಸಿದ ಅಲ್ಲು ಅರ್ಜುನ್; ಮುಂದಿದೆ ದೊಡ್ಡ ಸವಾಲು
Image
‘ಪುಷ್ಪ 3’ ಚಿತ್ರಕ್ಕಾಗಿ ಎಷ್ಟು ವರ್ಷ ಕಾಯಬೇಕು? ಮಾಹಿತಿ ಕೊಟ್ಟ ನಿರ್ಮಾಪಕ
Image
ನಿರ್ಮಾಪಕರ ಜೊತೆ ಕಿರಿಕ್; ಸಲ್ಲುಗೆ ಮಾಡಬೇಕಿದ್ದ ಸಿನಿಮಾನ ಅಲ್ಲುಗೆ ಶಿಫ್ಟ್

ಈ ಸಿನಿಮಾದಲ್ಲಿ ಶಿವಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ಅಭಿನಯಿಸಿದ್ದಾರೆ. ಮೋಹನ್‍ ಬಾಬು, ಮಧು, ಶರತ್‍ ಕುಮಾರ್, ದೇವರಾಜ್‍, ಬ್ರಹ್ಮಾನಂದಂ, ಮುಕೇಶ್‍ ರಿಶಿ ಮುಂತಾದವರು ನಟಿಸಿದ್ದಾರೆ. ಪ್ರಭಾಸ್‍, ಮೋಹನ್‍ ಲಾಲ್‍, ಅಕ್ಷಯ್‍ ಕುಮಾರ್, ಕಾಜಲ್‍ ಅಗರ್ವಾಲ್‍ ಅವರು ಅತಿಥಿ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಸ್ಟೀಫನ್‍ ದೇವಸ್ಸಿ ಸಂಗೀತ, ಶೆಲ್ಡನ್‍ ಚಾವ್‍ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

‘ಕಣ್ಣಪ್ಪ’ ಎಂದೊಡನೆ ನನಗೆ ರಾಜ್​ಕುಮಾರ್ ನೆನಪಾಗ್ತಾರೆ: ಟಾಲಿವುಡ್ ಹಿರಿಯ ನಟ

‘ಕಣ್ಣಪ್ಪ’ ಚಿತ್ರವನ್ನು ‘ಎ.ವಿ.ಎ. ಎಂಟರ್ಟೈನ್ಮೆಂಟ್’ ಹಾಗೂ ‘24 ಫ್ರೇಮ್ಸ್ ಫ್ಯಾಕ್ಟರಿ’ ಮೂಲಕ ಮೋಹನ್‍ ಬಾಬು ನಿರ್ಮಿಸಿದ್ದಾರೆ. ಮುಕೇಶ್‍ ಕುಮಾರ್ ಸಿಂಗ್‍ ಅವರು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಟೀಸರ್ , ಪೋಸ್ಟರ್ ಹಾಗೂ ಹಾಡುಗಳು ಪ್ರೇಕ್ಷಕರಲ್ಲಿ ತೀವ್ರ ಕುತೂಹಲ ಮೂಡಿಸಿವೆ. ಪೌರಾಣಿಕ ಕಥಾಹಂದರದ ಸಿನಿಮಾ ಆದ್ದರಿಂದ ನಿರೀಕ್ಷೆ ಹುಟ್ಟುಹಾಕಿದೆ.

​ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ