‘ಮೊದಲ ಡೇಟ್​ನಲ್ಲಿ ಸೆಕ್ಸ್ ಮಾಡಿದ್ರಾ?’; ಮುಜುಗರ ಇಲ್ಲದೆ ಉತ್ತರಿಸಿದ ವಿಜಯ್ ವರ್ಮಾ

ಮೊದಲು ಭೇಟಿ ಆಗಿದ್ದು ಯಾವಾಗ? ಮೊದಲ ಭೇಟಿ ವೇಳೆ ಒಬ್ಬರ ಮೇಲೆ ಒಬ್ಬರಿಗೆ ಇದ್ದ ಅಭಿಪ್ರಾಯ ಸೇರಿ ಎಲ್ಲ ವಿಚಾರಗಳಲ್ಲಿ ಇವರು ಮುಕ್ತವಾಗಿ ಮಾತನಾಡಿದ್ದಾರೆ. ಸೆಕ್ಸ್ ವಿಚಾರವಾಗಿಯೂ ಅವರು ಮಾತನಾಡಿದ್ದಾರೆ.

‘ಮೊದಲ ಡೇಟ್​ನಲ್ಲಿ ಸೆಕ್ಸ್ ಮಾಡಿದ್ರಾ?’; ಮುಜುಗರ ಇಲ್ಲದೆ ಉತ್ತರಿಸಿದ ವಿಜಯ್ ವರ್ಮಾ
ವಿಜಯ್ ವರ್ಮಾ-ತಮನ್ನಾ
Follow us
ರಾಜೇಶ್ ದುಗ್ಗುಮನೆ
|

Updated on: Jun 29, 2023 | 10:54 AM

ಸೆಲೆಬ್ರಿಟಿಗಳ ಲೋಕದಲ್ಲಿ ಡೇಟಿಂಗ್, ಬ್ರೇಕಪ್​, ವಿವಾಹ, ವಿಚ್ಛೇದನ ಎಲ್ಲವೂ ಕಾಮನ್. ಇವುಗಳಲ್ಲಿ ಯಾವುದೇ ಘಟಿಸಿದರೂ ಹೆಚ್ಚು ಅಚ್ಚರಿ ಆಗುವುದಿಲ್ಲ. ಚಿತ್ರರಂಗದಲ್ಲಿ ಅನೇಕ ಲವ್​ ಬರ್ಡ್ಸ್​​ ಇವೆ. ಈ ಸಾಲಿಗೆ ವಿಜಯ್ ವರ್ಮಾ ಹಾಗೂ ತಮನ್ನಾ ಹೊಸ ಸೇರ್ಪಡೆ. ಈ ಜೋಡಿ ‘ಲಸ್ಟ್ ಸ್ಟೋರಿಸ್ 2’ (Lust Stories 2 Movie) ಸಿನಿಮಾದಲ್ಲಿ ಮೊದಲ ಬಾರಿಗೆ ಒಟ್ಟಾಗಿ ನಟಿಸಿತು. ಅಲ್ಲಿಂದ ಇವರ ಮಧ್ಯೆ ಪ್ರೀತಿ ಮೂಡಿದೆ. ಇಬ್ಬರೂ ಪ್ರೀತಿ ವಿಚಾರವನ್ನು ಬಹುತೇಕ ಒಪ್ಪಿಕೊಂಡಿದ್ದಾರೆ. ಈಗ ವಿಜಯ್ ವರ್ಮಾ (Vijay Varma) ಅವರು ಸೆಕ್ಸ್ ವಿಚಾರದಲ್ಲಿ ನೇರವಾಗಿ ಮಾತನಾಡಿದ್ದಾರೆ.

ವಿಜಯ್ ಹಾಗೂ ತಮನ್ನಾ ಡೇಟಿಂಗ್ ಮಾಡುತ್ತಿರುವ ವಿಚಾರದ ಬಗ್ಗೆ ಈ ಮೊದಲು ಸಾಕಷ್ಟು ಸುದ್ದಿಗಳು ಹರಿದಾಡಿದ್ದವು. ಆದರೆ, ಈ ವಿಚಾರವನ್ನು ಅವರು ಅಧಿಕೃತವಾಗಿ ಒಪ್ಪಿಕೊಂಡಿರಲಿಲ್ಲ. ಈಗ ಈ ವಿಚಾರದಲ್ಲಿ ಇಬ್ಬರೂ ನೇರವಾಗಿ ಹೇಳಿಕೆ ನೀಡುತ್ತಿದ್ದಾರೆ. ಮೊದಲು ಭೇಟಿ ಆಗಿದ್ದು ಯಾವಾಗ? ಮೊದಲ ಭೇಟಿ ವೇಳೆ ಒಬ್ಬರ ಮೇಲೆ ಒಬ್ಬರಿಗೆ ಇದ್ದ ಅಭಿಪ್ರಾಯ ಸೇರಿ ಎಲ್ಲ ವಿಚಾರಗಳಲ್ಲಿ ಇವರು ಮುಕ್ತವಾಗಿ ಮಾತನಾಡಿದ್ದಾರೆ. ಸೆಕ್ಸ್ ವಿಚಾರವಾಗಿಯೂ ಅವರು ಮಾತನಾಡಿದ್ದಾರೆ. ನ್ಯೂಸ್18 ಇಂಗ್ಲಿಷ್ ವೆಬ್​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಈ ವಿಚಾರ ರಿವೀಲ್ ಆಗಿದೆ.

ಇದನ್ನೂ ಓದಿ: Lust Stories 2: ತಮನ್ನಾ ಭಾಟಿಯಾ-ಮೃಣಾಲ್​ ಠಾಕೂರ್​ ವಿಡಿಯೋ ವೈರಲ್​; ಇದು ಇನ್ನೊಂದು ಲಸ್ಟ್​ ಸ್ಟೋರಿ

ತಮನ್ನಾ, ವಿಜಯ್ ವರ್ಮಾ, ನಿರ್ದೇಶಕ ಸುಜಯ್ ಘೋಶ್ ಸಂದರ್ಶನದಲ್ಲಿ ಭಾಗಿ ಆಗಿದ್ದರು. ಸಂದರ್ಶನದ ಚೌಕಟ್ಟು ಮೀರಿದ ಪ್ರಶ್ನೆಗಳನ್ನು ಕೇಳಲಾಗಿದೆ. ‘ಮೊದಲ ಡೇಟ್ ಹೇಗಿತ್ತು, ಅದರಲ್ಲಿ ಸೆಕ್ಸ್ ಇತ್ತಾ’ ಎಂದು ಪ್ರಶ್ನೆ ಮಾಡಲಾಯಿತು. ತಮನ್ನಾ ‘ಬೋರಿಂಗ್ ಡೇಟ್’ ಎಂದು ಉತ್ತರ ನೀಡಿದರು. ಇದಕ್ಕೆ ವಿಜಯ್ ವರ್ಮಾ ಉತ್ತರಿಸಿದ್ದು, ‘ಮೊದಲ ಡೇಟ್​ನಲ್ಲಿ ಯಾವುದೇ ಕಾಮ ಇರಲಿಲ್ಲ’ ಎಂದಿದ್ದಾರೆ. ಸುಜಯ್ ಕೂಡ ಇದಕ್ಕೆ ಉತ್ತರಿಸಿದ್ದಾರೆ. ‘ನಾನು ಮಧ್ಯಮ ವರ್ಗದಲ್ಲಿ ಹುಟ್ಟಿದ ವ್ಯಕ್ತಿ. ನಾವು ಎಲ್ಲದಕ್ಕೂ ಹೋರಾಡಬೇಕು. ನಮಗೆ ಯಾವುದೂ ಸುಲಭವಾಗಿ ಲಭ್ಯವಾಗುವುದಿಲ್ಲ’ ಎಂದು ನಕ್ಕಿದ್ದಾರೆ.

ತಮನ್ನಾ ಹಾಗೂ ವಿಜಯ್ ವರ್ಮಾ ‘ಲಸ್ಟ್ ಸ್ಟೋರಿಸ್ 2’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಇಂದು (ಜೂನ್ 29) ಈ ಸಿನಿಮಾ ರಿಲೀಸ್ ಆಗಿದೆ. ಒಂದು ಸಿನಿಮಾದಲ್ಲಿ ನಾಲ್ಕು ಕಥೆಗಳಿವೆ. ನೆಟ್​ಫ್ಲಿಕ್ಸ್ ಮೂಲಕ ಇದು ರಿಲೀಸ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್